
ನವದೆಹಲಿ(ಜು.25): ಕೇಂದ್ರ ಕೃಷಿ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದು ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುತ್ತಿರುವ ನಿರಂತರ ಪ್ರತಿಭಟನೆ ಮತ್ತೊಂದು ಸ್ವರೂಪ ಪಡೆಯುತ್ತಿದೆ. ಟ್ರಾಕ್ಟರ್ ರ್ಯಾಲಿ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ನಡೆಸಿದ ರೈತ ಸಂಘಟನೆಗಳು ಇದೀಗ ಬಿಜೆಪಿ ನಾಯಕರಿಗೆ ಮತ್ತೊಂದು ಎಚ್ಚರಿಕೆ ನೀಡಿದೆ. ಬಿಜೆಪಿ ನಾಯಕರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
ರೈತ ಪ್ರತಿಭಟನೆ ಅಸಲಿ ಮುಖ ಬಹಿರಂಗವಾದ ಬೆನ್ನಲ್ಲೇ ಕೇಂದ್ರ ಮೇಲೆ ಹರಿಹಾಯ್ದ ರಾಕೇಶ್ ಟಿಕಾಯತ್!
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಮಹತ್ವವಿದೆ. ಈ ಬಾರಿ ದೇಶ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದೆ. ಆದರೆ ಈ ಸ್ವಾತಂತ್ರ್ಯ ದಿನಾಚರಣೆಗೆ ರೈತ ಸಂಘಟನೆಗಳು ಅಡ್ಡಿಪಡಿಸುವುದಾಗಿ ಹೇಳಿದೆ. ಹರ್ಯಾಣದಲ್ಲಿ ಯಾವುದೇ ಬಿಜೆಪಿ ನಾಯಕರು ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.
ಆಗಸ್ಟ್ 15 ರಂದು ಹರ್ಯಾಣದಲ್ಲಿ ಟ್ರಾಕ್ಟರ್ ರ್ಯಾಲಿ ಹಮ್ಮಿಕೊಳ್ಳಳಾಗಿದೆ. ರೈತರ ಹೋರಾಟವನ್ನು ನಿರ್ಲಕ್ಷ್ಯಿಸುತ್ತಿರುವ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮುಂದುವರಿಸುತ್ತೇವೆ. ಇದಕ್ಕಾಗಿ ಆಗಸ್ಟ್ 15 ರಂದು ಹರ್ಯಾಣದಲ್ಲಿ ಯಾವುದೇ ಬಿಜೆಪಿ ನಾಯಕರು ಧ್ವಜಾರೋಹಣ ಮಾಡಲು ಬಿಡುವುದಿಲ್ಲ ಎಂದು ರೈತ ಮುಖಂಡ ಗುರುಪ್ರೀತ್ ಚಿನಾ ಹೇಳಿದ್ದಾರೆ.
BJP ವಿರುದ್ಧ ರೈತ ಪ್ರತಿಭಟನೆಗೆ ಪಂಜಾಬ್ ಸಿಎಂ ಪ್ರಚೋದನೆ; ಸತ್ಯ ಬಹಿರಂಗಪಡಿಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ!
ಜನರವರಿ 26ರ ಗಣರಾಜ್ಯೋತ್ಸವ ದಿನದಂದು ರೈತ ಸಂಘಟನೆಗಳು ಟ್ರಾಕ್ಟರ್ ರ್ಯಾಲಿ ಹಮ್ಮಿಕೊಂಡಿತ್ತು. ಈ ಹೋರಾಟ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು. ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ರೈತರು ದಾಂಧಲೆ ನಡೆಸಿದ್ದರು. ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಸುಮಾರು 500ಕ್ಕೂ ಹೆಚ್ಚಿನ ಪೊಲೀಸರು ಗಾಯಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ