ಆಗಸ್ಟ್ 10 ರಿಂದ ಕರ್ನಾಟಕದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ, ನೋಂದಣಿ ಆರಂಭ!

Published : Jul 02, 2022, 05:53 PM IST
ಆಗಸ್ಟ್ 10 ರಿಂದ ಕರ್ನಾಟಕದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ, ನೋಂದಣಿ ಆರಂಭ!

ಸಾರಾಂಶ

ದೇಶಾದ್ಯಂತ ಅಗ್ನಿಪಥ ಸೇನಾ ನೇಮಕಾತಿ ಆರಂಭ 14 ಜಿಲ್ಲೆಗಳಲ್ಲಿ ಅಗ್ನಿಪಥ ನೇಮಕಾತಿ ನೋಂದಣಿ ಆರಂಭ ಆಗಸ್ಟ್ 10 ರಂದು ಹಾಸನದಲ್ಲಿ ನಡೆಯಲಿದೆ ನೇಮಕಾತಿ  

ಬೆಂಗಳೂರು(ಜೂ.02): ಕೇಂದ್ರ ಸರ್ಕಾರದ ಹೊಸ ಯೋಜನೆ ಅಗ್ನಿಪಥ್ ಸೇನಾ ನೇಮಕಾತಿ ದೇಶಾದ್ಯಂತ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಸೇನಾ ನೇಮಕಾತಿಗೆ ಭಾರತೀಯ ಸೇನೆ ಸಜ್ಜಾಗಿದೆ. ಆಗಸ್ಟ್ 10 ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ನೇಮಕಾತಿ ನಡೆಯಲಿದೆ.

ಆಗಸ್ಟ್ 10 ರಂದು ಹಾಸನದಲ್ಲಿ ಅಗ್ನಿಪಥ ಸೇನಾ ನೇಮಕಾತಿ ನಡೆಯಲಿದೆ. ಇದಕ್ಕಾಗಿ ಕರ್ನಾಟದ 14 ಜಿಲ್ಲೆಗಳ ಆಸಕ್ತರಿಗೆ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 1 ರಿಂದ ಆನ್‌ಲೈನ್ ರಿಜಿಸ್ಟ್ರೇಶನ್ ಆರಂಭಗೊಂಡಿದೆ. ಇನ್ನು ಆಗಸ್ಟ್ 1 ರಿಂದ ಆಗಸ್ಟ್ 7ರ ಒಳಗೆ ನೇಮಕಾತಿಗೆ ಪಾಲ್ಗೊಳ್ಳಲು ಅಡ್ಮಿಷನ್ ಕಾರ್ಡ್ ಕಳುಹಿಸಲಾಗುತ್ತದೆ. ಇ ಮೇಲ್ ಮೂಲಕ ಈ ಕಾರ್ಡ್ ಕಳುಹಿಸಲಾಗುತ್ತಿದೆ. ಅರ್ಜಿ ಸೇರಿದಂತೆ ಆರಂಭಿಕ ಎಲ್ಲಾ ಪ್ರಕ್ರಿಯೆಗಳು ಆನ್‌ಲೈನ್ ಮೂಲಕವೇ ಇರಲಿದೆ.

IAF Agniveer Recruitment 2022; ಅಗ್ನಿಪಥಕ್ಕೆ 2 ಲಕ್ಷ ಅರ್ಜಿ, ಜು.5ರಂದು ಪ್ರಕ್ರಿಯೆ ಅಂತ್ಯ

ಅಗ್ನಿವೀರ್ ಟೆಕ್ನಕಲ್, 10ನೇ ತರಗತಿ ಪಾಸ್ ಆದವರಿಗೆ ಅಗ್ನಿವೀರ್ ಟ್ರೇಡ್ಸಮನ್, 8ನೇ ತರಗತಿ ಪಾಸ್ ಆದವರಿಗೆ ಅಗ್ನಿವೀರ್ ಟ್ರೇಡ್ಸ್‌ಮನ್, ಅಗ್ನಿವೀರ್ ಕ್ಲರ್ಕ್, ಅಗ್ನಿವೀರ್ ಸ್ಟೋರ್ ಕೀಪರ್ಸ್, ಅಗ್ನವೀರ್ ಟೆಕ್ನಿಕಲ್ ಕೆಟಗರಿ ಹುದ್ದಿಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸುವವರ ವಯಸ್ಸು ಹಾಗೂ ಇತರ ಮಾನದಂಡಗಳ ಕುರಿತು ಈಗಾಗಲೇ ಸೇನಾ ನೋಟಿಫೀಕೇಶನ್‌ನಲ್ಲಿ ಹೇಳಿದೆ.

ಆಗಸ್ಟ್ 10 ರಂದು ಹಾಸನದಲ್ಲಿ ನಡೆಯಲಿರುವ ಸೇನಾ ನೇಮಕಾತಿಗೆ 14 ಜಿಲ್ಲೆಗಳ ಆಸಕ್ತರು ಅರ್ಜಿ ಸಲ್ಲಿಸಲು ಅವಕಾಶವಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಹಾಗೂ ವಿಜಯನ ನಗರ ಜಿಲ್ಲೆಗಳ ಯುವಕರು ಅರ್ಜಿ ಹಾಕಿ ಸೇನಾ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. 

ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಶೇ.75 ಮೀಸಲಾತಿ
ಸೇನೆಯ ಅಗ್ನಿಪಥ್‌ ಯೋಜನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುವ ರಾಜ್ಯದ ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಿಸಿದ್ದಾರೆ.

 

ಅಗ್ನಿಪಥ್ ಕುರಿತಾಗಿ ಅಜಿತ್ ದೋವಲ್ ಹೇಳಿದ ಬೆಂಕಿಯಂಥ ಮಾತುಗಳು!

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರವು ಸೇನೆಯಲ್ಲಿ 4 ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ನೀಡುವ ಅಗ್ನಿಪಥ್‌ ಯೋಜನೆಯನ್ನು ಜಾರಿಗೊಳಿಸುತಿದ್ದು, ಈ ಬಗ್ಗೆ ದೇಶಾದ್ಯಂತ ಪರ ವಿರೋಧ ಚರ್ಚೆ ನಡೆಯುತ್ತಿದೆ. ಈ ಅಗ್ನಿಪಥಕ್ಕೆ ಅಗ್ನಿ ಕೊಡುವವರು ಗಲಾಟೆ ಆರಂಭಿಸಿದ್ದಾರೆ. ಅದರ ನಡುವೆಯೂ ಯುವಕರು ಅಗ್ನಿಪಥಕ್ಕೆ ಸೇರಲು ಮುಂದೆ ಬಂದಿದ್ದು, ಅಗ್ನಿವೀರರು ಸೃಷ್ಟಿಯಾಗುತ್ತಿದ್ದಾರೆ ಎಂದವರು ಹೇಳಿದರು.

ಈ ಯುವಕರಿಗೆ ಸೇನೆಯಲ್ಲಿ 4 ವರ್ಷಗಳ ಕಾಲ ತರಬೇತಿ ನೀಡಲಾಗುತ್ತದೆ, ಹೀಗೆ ತರಬೇತಿ ಪಡೆದು ಬರುವ ಅಗ್ನಿವೀರರಿಗೆ ರಾಜ್ಯದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಮೀಸಲಾತಿಯಡಿ ದೈಹಿಕ ಶಿಕ್ಷಕ ಅಥವಾ ವಾರ್ಡನ್‌ ಇತ್ಯಾದಿ ಇಲಾಖೆಯ ಶೇ.75ರಷ್ಟುಹುದ್ದೆಗಳನ್ನು ನೀಡಲು ಚಿಂತನೆ ನಡೆಸುತಿದ್ದೇವೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ಕಡತ ಮಂಡಿಸಲಾಗಿದೆ ಎಂದವರು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ