
ಭೋಪಾಲ್(ಫೆ.27): ಮಹಾತ್ಮಾ ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯ ಪುತ್ಥಳಿ ಅನಾವರಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾದ ಗ್ವಾಲಿಯರ್ ಮಹಾನಗರ ಪಾಲಿಕೆ ಸದಸ್ಯ ಬಾಬುಲಾಲ್ ಚೌರಾಸಿಯಾ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.
6 ವರ್ಷದ ಹಿಂದೆ ಚೌರಾಸಿಯಾ ಕಾಂಗ್ರೆಸ್ ತ್ಯಜಿಸಿದ್ದರು. ಗುರುವಾರ ಅವರು ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಸಮ್ಮುಖದಲ್ಲಿ ಪಕ್ಷಕ್ಕೆ ಮರುಸೇರ್ಪಡೆ ಆದರು. ಆದರೆ, ‘ಗೋಡ್ಸೆ ಹಿಂಬಾಲಕನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೇಕೆ?’ ಎಂದು ಕೆಲವು ಕಾಂಗ್ರೆಸ್ಸಿಗರು ಪ್ರಶ್ನಿಸಿದ್ದಾರೆ.
‘ಮನಃಪರಿವರ್ತನೆ ಆಗಿದ್ದರೆ ಸೇರ್ಪಡೆ ತಪ್ಪಲ್ಲ’ ಎಂದು ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ