Subramanian Swamy: ಏರ್ ಇಂಡಿಯಾ ವಿಮಾನ ದುರಂತ: ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಲಿ: ಸುಬ್ರಮಣಿಯನ್ ಸ್ವಾಮಿ ಪೋಸ್ಟ್ ವೈರಲ್!

Published : Jun 12, 2025, 08:50 PM ISTUpdated : Jun 12, 2025, 09:22 PM IST
Ahmedabad plane crash Subramanian Swamy demands Modi resignation!

ಸಾರಾಂಶ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದ ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. ಅಮಿತ್ ಶಾ ಮತ್ತು ರಾಮ್ ಮೋಹನ್ ನಾಯ್ಡು ಕೂಡ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದ ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಟ್ವಿಟರ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮೂಲಕ ಒತ್ತಾಯಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಪ್ರಧಾನಿ ಮೋದಿ ಜೊತೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. 1950 ರಲ್ಲಿ ರೈಲು ಅಪಘಾತ ಸಂಭವಿಸಿದಾಗ ಅಂದಿನ ಕೇಂದ್ರ ಸಚಿವ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ್ದರು ಎಂದು ನೆನಪಿಸಿದ್ದಾರೆ. ಈಗಲೂ ಅದೇ ರೀತಿ, ಇಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದ ಪ್ರಕರಣದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ರಾಮ್ ಮೋಹನ್ ನಾಯ್ಡು ರಾಜೀನಾಮೆ ನೀಡಬೇಕೆಂದು ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಗುರುವಾರ ಮಧ್ಯಾಹ್ನ ಹೊರಟಿದ್ದ AI171 ಬೋಯಿಂಗ್ 787 ಡ್ರೀಮ್‌ಲೈನರ್ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಯಿತು. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ, ಎಂಜಿನ್ ವಿಫಲವಾಗಿ ವಿಮಾನವು ಮೇಘಾನಿ ನಗರದ ಘೋಡಾಸರ್ ಕ್ಯಾಂಪ್ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು. ಜೆಬಿ ವೈದ್ಯಕೀಯ ಕಾಲೇಜಿನ ಕಟ್ಟಡಗಳಿಗೆ ಡಿಕ್ಕಿ ಹೊಡೆದಾಗ ಅಲ್ಲಿ ವಾಸಿಸುತ್ತಿದ್ದ 20 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ

ಏರ್‌ ಇಂಡಿಯಾ ವಿಮಾನದಲ್ಲಿ 242 ಜನ ಪ್ರಯಾಣಿಸುತ್ತಿದ್ದರು:

ಅಪಘಾತದ ಸಮಯದಲ್ಲಿ ವಿಮಾನದಲ್ಲಿ 12 ಜನರು ಸೇರಿದಂತೆ 242 ಪ್ರಯಾಣಿಕರಿದ್ದರು. ಜೂನ್ 12 ರಂದು ಮಧ್ಯಾಹ್ನ 1.39 ಕ್ಕೆ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಏರ್ ಇಂಡಿಯಾ ವಿಮಾನವು ಸುಮಾರು 620 ಅಡಿ ಎತ್ತರದಲ್ಲಿ ಸಿಗ್ನಲ್‌ಗಳನ್ನು ಕಳೆದುಕೊಂಡಿತು. ಅಪಘಾತಕ್ಕೀಡಾದ ಬೋಯಿಂಗ್ 787 ಡ್ರೀಮ್‌ಲೈನರ್ ಕಳೆದ 11 ವರ್ಷಗಳಿಂದ ಸೇವೆಯಲ್ಲಿದೆ. ಇದು 300 ಜನರನ್ನು ಹೊತ್ತೊಯ್ಯಬಲ್ಲದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ತಕ್ಷಣ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಕರೆ ಮಾಡಿ ಪ್ರತ್ಯೇಕವಾಗಿ ಮಾತನಾಡಿದರು. ಘಟನೆಯ ರೀತಿ ಮತ್ತು ಕಾರಣಗಳ ಬಗ್ಗೆ ಅವರು ವಿಚಾರಿಸಿದರು. ಪ್ರಧಾನಿ ಮೋದಿ ಇಬ್ಬರೂ ಅಹಮದಾಬಾದ್‌ಗೆ ಹೋಗಿ ಕಾಲಕಾಲಕ್ಕೆ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಆದೇಶಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ