ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝೆಡ್‌ ಪ್ಲಸ್ ಸೆಕ್ಯೂರಿಟಿ ಕೊಟ್ಟ ಸರ್ಕಾರ

By Sathish Kumar KH  |  First Published Feb 17, 2024, 1:29 PM IST

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಝೆಡ್ ಪ್ಲಸ್ (Z+) ಸೆಕ್ಯೂರಿಟಿ ಕೊಡಲಾಗಿದೆ.


ನವದೆಹಲಿ (ಫೆ.17): ಕೇಂದ್ರ ಲೋಕಸಭಾ ವಿಪಕ್ಷ ನಾಯಕ ಹಾಗೂ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಝೆಡ್ ಪ್ಲಸ್ (Z+) ಸೆಕ್ಯೂರಿಟಿ ಕೊಡಲಾಗಿದೆ.

ಹೌದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ದಿನದಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ Z+ ಸೆಕ್ಯುರಿಟಿ ನೀಡಲಾಗುತ್ತಿದೆ. ರಾಜ್ಯ ಭದ್ರತಾ ಸಿಬ್ಬಂದಿ ಜೊತೆಗೆ ಸಿಆರ್ ಪಿಎಫ್ Z+ ಸೆಕ್ಯುರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ ಸಿಆರ್ ಪಿಎಫ್ ಗನ್ ಮ್ಯಾನ್ ಗಳ ನಿಯೋಜನೆ ಮಾಡಲಾಗಿದೆ. ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎನ್ನಲಾಗಿದೆ. ಆ ಕಾರಣಕ್ಕೆ Z+ ಸೆಕ್ಯುರಿಟಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Tap to resize

Latest Videos

ಕರ್ನಾಟಕ ಪೊಲೀಸರಿಗೆ 20 ವರ್ಷಗಳಿಂದ ಬೇಕಾಗಿದ್ದ ನಕ್ಸಲ್‌ನನ್ನು ಹಿಡಿದುಕೊಟ್ಟ ಕೇರಳದ ಕಾಡಾನೆ!

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ: ಭಾರತ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಮೋದಿ ನಕಲು ಮಾಡಿದ್ದಾರೆ. ಅವರು ಭಾರತ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿರುವ ಎಂ.ಎಸ್ ಸ್ವಾಮಿನಾಥನ್ ಅವರ ಬೆಂಬಲದೊಂದಿಗೆ ದೇಶಕ್ಕೆ ಹಸಿರು ಕ್ರಾಂತಿಯನ್ನು ತಂದದ್ದು ಕಾಂಗ್ರೆಸ್. ಆದರೆ, ಏನೂ ಮಾಡದೆ ಮೋದಿ ಅದರ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಸ್ವಾಮಿನಾಥನ್ ಅವರಿಗೆ ಅತ್ಯುನ್ನತ ಗೌರವ ಸಿಗುತ್ತಿರುವುದಕ್ಕೆ ತುಂಬಾ ಸಂತೋಷವಾಗಿದೆ. ಹಸಿರು ಕ್ರಾಂತಿ ಮತ್ತು ಸ್ವಾಮಿನಾಥನ್ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷವು ರೈತರ ಹಿತದೃಷ್ಟಿಯಿಂದ ಎಂಎಸ್‌ಪಿಗೆ ಕಾನೂನು ಖಾತರಿ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆದ ಮಠದ ಭಕ್ತರು

ಕರ್ನಾಟಕ ಮತ್ತು ತೆಲಂಗಾಣದ ಚುನಾವಣೆಗಳನ್ನು ಐದು ಗ್ಯಾರಂಟಿಗಳ ಆಧಾರದ ಮೇಲೆ ಗೆದ್ದಿದ್ದೇವೆ. ಈಗ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಮೋದಿ ಗ್ಯಾರಂಟಿ ಎಂದು ಕಾಪಿ ಮಾಡಲಾಗುತ್ತಿದೆ. ನಮ್ಮ ವಿಷಯದಲ್ಲಿ ಗ್ಯಾರಂಟಿಗಳು ಪಕ್ಷಕ್ಕೆ ಸೇರಿದ್ದು. ಆದರೆ, ಬಿಜೆಪಿಯ ವಿಷಯದಲ್ಲಿ ಅದು ಮೋದಿಗೆ ಸೇರಿದ್ದು. ಇದು ಅವರ ನಿರಂಕುಶ ಸ್ವಭಾವವನ್ನು ತೋರಿಸುತ್ತದೆ. ಜನರನ್ನು ತಪ್ಪು ದಾರಿಗೆಳೆಯಲು ಸುಳ್ಳು ಹೇಳುವ ಮೋದಿ ‘ಸುಳ್ಳಿನ ಸರದಾರ’. ಅವರನ್ನು ನಂಬಬೇಡಿ ಎಂದು ಜನರಲ್ಲಿ ಮನವಿ ಮಾಡಿದರು. ದೇಶದಲ್ಲಿ ಪ್ರತಿ ಎರಡು ಗಂಟೆಗೆ ಐವರು ದಲಿತರು ಮತ್ತು ಬುಡಕಟ್ಟು ಜನಾಂಗದವರು ದೌರ್ಜನ್ಯ ಎದುರಿಸುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

click me!