
ಮುಂಬೈ: 180ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳನ್ನು ಚಿತ್ರಿಕರೀಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂದು ಗುರುತಿಸಲಾಗಿದೆ. ಈತನನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಂಧಿಸಲಾಗಿದ್ದು, ಈತ ಪರತ್ವಾಡ ನಗರದ ನಿವಾಸಿಯಾಗಿದ್ದಾನೆ. ಮಾರಾಷ್ಟ್ರದ ರಾಜ್ಯಸಭಾ ಬಿಜೆಪಿ ಸಂಸದ ಅನಿಲ್ ಬೊಂಡೆ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಈ ಅಶ್ಲೀಲ ವೀಡಿಯೋಗಳನ್ನು ಮಕ್ಕಳನ್ನು ಬ್ಲಾಕ್‌ಮೇಲ್ ಮಾಡುವುದ್ಕೆ ಹಾಗೂ ಅವರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ಎಳೆಯುವುದಕ್ಕೆ ಆರೋಪಿ ಬಳಸುತ್ತಿದ್ದ ಎಂದು ವರದಿಯಾಗಿದೆ. ಇವುಗಳಲ್ಲಿ ಕೆಲ ವೀಡಿಯೋಗಳನ್ನು ಇಂಟರ್‌ನೆಟ್‌ನಲ್ಲಿ ವ್ಯಾಪಕವಾಗಿ ಹರಿಬಿಡಲಾಗಿತ್ತು.
ವಾಟ್ಸಾಪ್ ಹಾಗೂ ಸ್ನ್ಯಾಪ್‌ಚಾಟ್ ಮೂಲಕ ಅಪ್ರಾಪ್ತರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗುತ್ತಿತ್ತು. ಈ ಸಂಬಂಧ ರಾಜ್ಯಸಭಾ ಸಂಸದ ಅನಿಲ್ ಬೊಂಡೆ ಅವರು ಅಮರಾವತಿಯ ಗ್ರಾಮೀಣ ಎಸ್‌ಪಿ ವಿಶಾಲ್ ಬೊಂಡೆ ಅವರಿಗೆ ಲಿಖಿತ ದೂರು ದಾಖಲಿಸಿದ್ದರು.
ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಬೇಕು ಹಾಗೂ ಈ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡದೇ ಹೋದರೆ ಎಸ್‌ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ವಾರ್ನಿಂಗ್ ನೀಡಿದ್ದರು. ಈ ಘಟನೆ ಬೆಳಕಿಗೆ ಬಂದ ನಂತರ ಕೆಲವು ಮುಸ್ಲಿಂ ಸಮುದಾಯದ ಸದಸ್ಯರು ಕೂಡ ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈತನ ಕೃತ್ಯದಿಂದ ತಮ್ಮ ಸಮುದಾಯದ ಘನತೆಗೆ ಕಳಂಕ ಬರುವಂತಾಗಿದೆ. ಹೀಗಾಗಿ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಆರೋಪಿ ಮೊಹಮ್ಮದ್ ಅಯಾಜ್ ಈ ಹಿಂದೆ AIMIM ಸಂಘಟನೆಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಆತ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವೀಡಿಯೊಗಳು ಮತ್ತು ಫೋಟೋಗಳಲ್ಲಿ ಕಂಡು ಬರುವಂತೆ ಆತ ಅವರು AIMIMನ ಅಮರಾವತಿ ವಿಭಾಗದ ಅಧ್ಯಕ್ಷ ಹಾಜಿ ಇರ್ಫಾನ್ ಖಾನ್ ಅವರಿಂದ ಪತ್ರವನ್ನು ಸ್ವೀಕರಿಸುತ್ತಿರುವುದು ಹಾಗೂ ಪಕ್ಷದ ಸಮಾವೇಶಗಳಲ್ಲಿ ಭಾಗವಹಿಸುತ್ತಿದ್ದಂತ ಫೋಟೋ ವೀಡಿಯೋಗಳಿವೆ. ಆದರೆ, ಪ್ರಕರಣ ಬೆಳಕಿಗೆ ಬಂದ ನಂತರ ಅಂತಹ ಹಲವಾರು ವೀಡಿಯೊಗಳನ್ನು ಆತನ ಇನ್‌ಸ್ಟಾಗ್ರಾಮ್ ಖಾತೆಯಿಂದ ಅಳಿಸಿ ಹಾಕಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಉತ್ತರ ಕನ್ನಡ: ಕಾಂಗ್ರೆಸ್ ಹುದ್ದೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು: ಕೈ ಪಾಳಯದಲ್ಲಿ ಭುಗಿಲೆದ್ದ ಆಕ್ರೋಶ, ಕೆಪಿಸಿಸಿಗೆ ದೂರು!
ಈ ಪ್ರಕರಣದಲ್ಲಿ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆತನಿಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಲಾಗಿದೆ. ಪೊಲೀಸರು ಆತನ ಮೊಬೈಲ್ ಫೋನ್ ಅನ್ನು ಜಪ್ತಿ ಮಾಡಿದ್ದು, ಈ ಮೊಬೈಲ್‌ನಲ್ಲಿ ಹಲವು ಅಶ್ಲೀಲ ವೀಡಿಯೋಗಳು ಇರುವುದು ಕಂಡು ಬಂದಿದೆ. ಸದ್ಯ ಪೊಲೀಸರು ಆರೋಪಿ ಈ ವೀಡಿಯೋಗಳನ್ನು ತನ್ನ ಸ್ನೇಹಿತರ ಜೊತೆಗೂ ಹಂಚಿಕೊಂಡಿದ್ದಾನ ಅಥವಾ ಇದರ ಹಿಂದೆ ಯಾವುದಾದರು ಕ್ರಿಮಿನಲ್ ಜಾಲ ಇದೆಯ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ವೀಡಿಯೋ ಬಗ್ಗೆಯೂ ಪೊಲೀಸರು ಸೈಬರ್ ಸೆಲ್ ಸಹಾಯದೊಂದಿಗೆ ತನಿಖೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಗ್ರಾಮ ಪಂಚಾಯತ್ ಸದಸ್ಯನ ಭೀಕರ ಹತ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ