
ಹೈದರಾಬಾದ್(ಜೂ.22): ಗಲ್ವಾನ್ ಸಂಘರ್ಷದ ಬಳಿಕ ಲಡಾಖ್ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಯ ವಿಮಾನಗಳು ಅನುಮಾನಾಸ್ಪದವಾಗಿ ಹಾರಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ಎದುರಾಗಬಹುದಾದ ಯಾವುದೇ ಸನ್ನಿವೇಶವನ್ನು ಎದುರಿಸಲು ಭಾರತೀಯ ವಾಯು ಪಡೆ ಕೂಡ ಸಜ್ಜಾಗಿದೆ ಎಂದು ವಾಯು ಪಡೆ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ ಹೇಳಿದ್ದಾರೆ.
ಸ್ಥಳೀಯರಿಗೆ ಉದ್ಯೋಗ; ಭಾರತದಲ್ಲಿರುವ ಚೀನಾ ಕಂಪನಿಗಳ ಪ್ಲಾನ್!
ಹೈದಾರಾಬಾದ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಚೀನಾದ ಯುದ್ಧ ವಿಮಾನಗಳು ಅನಿರೀಕ್ಷಿತವಾಗಿ ಹಾರಾಟ ನಡೆಸುತ್ತವೆ. ಆದರೆ, ಈ ಬಾರಿ ಚೀನಾದ ಅನುಮಾನಾಸ್ಪದ ನಡೆ ಹೆಚ್ಚಾಗಿ ಕಂಡು ಬರುತ್ತಿದೆ. ಈ ಬೆಳವಣಿಗೆಯ ಬಗ್ಗೆ ವಾಯುಪಡೆಗೆ ಅರಿವಿದೆ ಎಂದಿದ್ದಾರೆ.
ಅಲ್ಲದೇ ಚೀನಾವನ್ನು ಎದುರಿಸಲು ಕಾರ್ಯತಂತ್ರವನ್ನು ರೂಪಿಸಲಾಗಿದೆ. ಹಿಗಾಗಿ ವಾಯು ಪಡೆಯ ವಿಮಾನಗಳನ್ನು ಮುಂಚೂಣಿ ನೆಲೆಗಳಿಗೆ ಕಳಹಿಸಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ