Air India Express: ಕೊನೆಗೂ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಬಿಕ್ಕಟ್ಟು ಅಂತ್ಯ!

By Govindaraj SFirst Published May 10, 2024, 12:03 PM IST
Highlights

ವೇತನ ಸೇರಿದಂತೆ ಇತರೆ ವಿಷಯ ಮುಂದಿಟ್ಟುಕೊಂಡು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕ ರಜೆ ಹಾಕಿದ್ದ ಏರಿಂಡಿಯಾ ಏಕ್ಸ್‌ಪ್ರೆಸ್‌ನ 300ಕ್ಕೂ ಹೆಚ್ಚು ಸಿಬ್ಬಂದಿ ತಮ್ಮ ಅಘೋಷಿತ ಮುಷ್ಕರ ಕೈಬಿಟ್ಟು ಗುರುವಾರ ಕೆಲಸಕ್ಕೆ ಮರಳಿದ್ದಾರೆ.

ನವದೆಹಲಿ (ಮೇ.10): ವೇತನ ಸೇರಿದಂತೆ ಇತರೆ ವಿಷಯ ಮುಂದಿಟ್ಟುಕೊಂಡು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕ ರಜೆ ಹಾಕಿದ್ದ ಏರಿಂಡಿಯಾ ಏಕ್ಸ್‌ಪ್ರೆಸ್‌ನ 300ಕ್ಕೂ ಹೆಚ್ಚು ಸಿಬ್ಬಂದಿ ತಮ್ಮ ಅಘೋಷಿತ ಮುಷ್ಕರ ಕೈಬಿಟ್ಟು ಗುರುವಾರ ಕೆಲಸಕ್ಕೆ ಮರಳಿದ್ದಾರೆ. ಹೀಗಾಗಿ ಕಳೆದ 2 ದಿನಗಳಿಂದ ಬಿಕ್ಕಟ್ಟು ಕೊನೆಗೂ ಸುಖಾಂತ್ಯವಾದಂತೆ ಆಗಿದೆ. ಸಿಬ್ಬಂದಿಗಳ ಬೇಡಿಕೆ ಕುರಿತು ಪರಿಶೀಲಿಸುವುದಾಗಿ ಏರಿಂಡಿಯಾ ಆಡಳಿತ ಮಂಡಳಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮತ್ತು 30 ಸಿಬ್ಬಂದಿಗಳ ವಜಾ ಆದೇಶ ಹಿಂಪಡೆಯುವ ಭರವಸೆ ನೀಡಿದ ಬೆನ್ನಲ್ಲೇ ಮುಷ್ಕರ ನಿರತ ಸಿಬ್ಬಂದಿ ಕರ್ತವ್ಯಕ್ಕೆ ಮರಳಿದ್ದಾರೆ.

ಇದಕ್ಕೂ ಮೊದಲು ಗುರುವಾರ ಬೆಳಗ್ಗೆ 30 ಸಿಬ್ಬಂದಿಗಳನ್ನು ವಜಾ ಮಾಡಲಾಗಿತ್ತು. ಉಳಿದವರಿಗೆ ಕರ್ತವ್ಯಕ್ಕೆ ಮರಳಲು ಸಂಜೆ 4 ಗಂಟೆಯ ಗಡುವು ನೀಡಲಾಗಿತ್ತು. ಅದರ ಬೆನ್ನಲ್ಲೇ ಪ್ರಕರಣ ಸುಖಾಂತ್ಯವಾಗಿದೆ. ಕಳೆದ 2 ದಿನಗಳಲ್ಲಿ ಏರಿಂಡಿಯಾ ಎಕ್ಸ್‌ಪ್ರೆಸ್‌ನ 160ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದಾದ ಹಿನ್ನೆಲೆಯಲ್ಲಿ ದೇಶವ್ಯಾಪಿ ಸಾವಿರಾರು ಪ್ರಯಾಣಿಕರು ಸಮಸ್ಯೆಗೆ ತುತ್ತಾಗಿದ್ದರು. ಏರಿಂಡಿಯಾದಲ್ಲಿ ವಿಲೀನ ಬಳಿಕ ತಮಗೆ ವೇತನ ಸೇರಿದಂತೆ ನಾನಾ ವಿಷಯದಲ್ಲಿ ತಾರತಮ್ಯ ಮಾಡಲಾಗಿದೆ ಎಂದು 300ಕ್ಕೂ ಹೆಚ್ಚು ಸಿಬ್ಬಂದಿ ಮಂಗಳವಾರ ರಾತ್ರಿಯಿಂದಲೇ ಸಾಮೂಹಿಕ ರಜೆ ಹಾಕಿ, ಮೊಬೈಲ್‌ ಸ್ವಿಚಾಫ್‌ ಮಾಡಿಕೊಂಡಿದ್ದರು.

70ಕ್ಕೂ ಹೆಚ್ಚು ಫ್ಲೈಟ್ ಕ್ಯಾನ್ಸಲ್: ಪಿಟಿಐ ಸುದ್ದಿಸಂಸ್ಥೆಯ ವರದಿ ಪ್ರಕಾರ 200 ಕ್ಯಾಬಿನ್ ಸಿಬ್ಬಂದಿ ಹೀಗೆ ದಿಢೀರ್ ರಜೆ ಮೇಲೆ ಹೋಗಿದ್ದಾರೆ ಎಂದು ವರದಿ ಆಗಿದೆ. ಹೀಗಾಗಿ ಕೊಚ್ಚಿ, ಕೋಲ್ಕತ್ತಾ, ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಬಹುತೇಕ ವಿಮಾನ ನಿಲ್ದಾಣಗಳಿಂದ ಪ್ರಯಾಣಿಸಬೇಕಾದ ಏರ್ ಇಂಡಿಯಾ ವಿಮಾನಗಳ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿ ಆಗಿದೆ. 

ಹೇಳದೇ ಕೇಳದೇ ಸಾಮೂಹಿಕ ರಜೆ ಹಾಕಿದ ಸಿಬ್ಬಂದಿಗೆ ಪರ್ಮನೆಂಟ್ ರಜೆ ನೀಡಿದ ಏರ್ ಇಂಡಿಯಾ..!

ಇತ್ತ ಏರ್ ಇಂಡಿಯಾವೂ ಏರ್ ಏಷ್ಯಾ ಇಂಡಿಯಾವನ್ನು ಕೂಡ ತನ್ನೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯಲ್ಲಿ ಇದ್ದು, ಇದು ಮಾರ್ಚ್‌ನಲ್ಲಿ ಆರಂಭವಾದ ಬೇಸಿಗೆಯ ಸ್ಕೆಡ್ಯೂಲ್‌ನಂತೆ ಪ್ರತಿದಿನವೂ 360 ವಿಮಾನಗಳ ಹಾರಾಟ ನಡೆಸುತ್ತದೆ. ಆದರೆ ಈ ವಿಲೀನ ಪ್ರಕ್ರಿಯೆ ಆರಂಭವಾದಾಗಿನಿಂದ ಕ್ಯಾಬಿನ್ ಸಿಬ್ಬಂದಿಯ ಮಧ್ಯೆ ಅಸಮಾಧಾನವಿದೆ.  ಪ್ರಸ್ತುತ ಏರ್ ಇಂಡಿಯಾವನ್ನು ಟಾಟಾ ಗ್ರೂಪ್ ನಿರ್ವಹಿಸುತ್ತಿದೆ. ಏರ್‌ಲೈನ್‌ನ ನಿರ್ವಹಣೆ ಮತ್ತು ಕ್ಯಾಬಿನ್ ಸಿಬ್ಬಂದಿ ಸದಸ್ಯರ ನಡುವಿನ ವಿವಾದಗಳಿಗೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯ ಕಾರಣಕ್ಕೆ 2023ರ ಡಿಸೆಂಬರ್‌ನಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯವೂ ಏರ್ ಇಂಡಿಯಾಗೆ ನೋಟೀಸ್ ಜಾರಿ ಮಾಡಿತ್ತು.

click me!