
ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ತಾಂತ್ರಿಕ ದೋಷಗಳ ಕಾರಣದಿಂದ ರದ್ದುಗೊಂಡಿದೆ. ವಿಮಾನಯಾನ ಇಲಾಖೆ ಮೂಲಗಳ ಪ್ರಕಾರ, AI 159 ಸಂಖ್ಯೆ ಹೊಂದಿರುವ ಏರ್ ಇಂಡಿಯಾ ವಿಮಾನವು ನವದೆಹಲಿಯಿಂದ ಅಹಮದಾಬಾದ್‌ಗೆ ಆಗಮಿಸಿ, ನಂತರ ಲಂಡನ್‌ಗೆ ಪ್ರಯಾಣಿಸಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ವಿಮಾನ ಸೇವೆಯನ್ನು ಕೊನೆಯ ಕ್ಷಣದಲ್ಲಿ ಸ್ಥಗಿತಗೊಳಿಸಲಾಯಿತು. ತಾಂತ್ರಿಕ ದೋಷಕ್ಕೆ ಒಳಗಾದ ಎರಡನೇ ವಿಮಾನ ಇದಾಗಿದೆ. ಸೋಮವಾರ ಕೂಡ ಒಂದು ವಿಮಾನವನ್ನು ಇದೇ ಮಾರ್ಗದಲ್ಲಿ ರದ್ದು ಗೊಳಿಸಲಾಗಿತ್ತು.
ಇದೀಗ ಮಧ್ಯಾಹ್ನ 1:10 ಕ್ಕೆ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಸಂಖ್ಯೆ AI 159, ಬೋಯಿಂಗ್ 788, ತಾಂತ್ರಿಕ ದೋಷದಿಂದಾಗಿ ರದ್ದುಗೊಂಡಿದೆ.
ಮುಂಬೈನಿಂದ ಅಹಮದಾಬಾದ್‌ಗೆ ಹೋಗುವ ಏರ್ ಇಂಡಿಯಾದ AI2493 ವಿಮಾನವು ಏರ್‌ಬಸ್ A321-211 ವಿಮಾನ (VT-PPL) ನಿಂದ ಕಾರ್ಯನಿರ್ವಹಿಸಬೇಕಿತ್ತು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಇನ್ನು ಮಂಗಳವಾರ ಬೆಳಗಿನ ಜಾವ, ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯ್ತು.
ಇನ್ನು ಮತ್ತೊಂದು ಕಡೆ ಮಸ್ಕತ್ - ಕೊಚ್ಚಿ - ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನ 6E 2706 ಬಾಂಬ್ ಬೆದರಿಕೆ ಬಂದ ನಂತರ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ, ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸೋಮವಾರ, ದೆಹಲಿಯಿಂದ ರಾಂಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಹಿಂತಿರುಗಿತು. ಇನ್ನು ಇದಕ್ಕೂ ಮೊದಲು ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಗಾಳಿಯಲ್ಲಿ ತಾಂತ್ರಿಕ ದೋಷದಿಂದಾಗಿ ಹಾಂಗ್ ಕಾಂಗ್‌ಗೆ ಹಿಂತಿರುಗಿತು. ನವದೆಹಲಿಗೆ ಹೊರಟಿದ್ದ ವಿಮಾನವು ಹಾಂಗ್ ಕಾಂಗ್‌ನಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು "ಸಾಕಷ್ಟು ಮುನ್ನೆಚ್ಚರಿಕೆ ಕ್ರಮವಾಗಿ" ತಪಾಸಣೆಗೆ ಒಳಪಟ್ಟಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ AI315 ವಿಮಾನ ದಕ್ಷಿಣ ಚೀನಾದ ನಗರದ ವಿಮಾನ ನಿಲ್ದಾಣಕ್ಕೆ ಮರಳಿತು.
ಜೂನ್ 12 ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ಹೊರಟಿದ್ದ ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬಿಜೆ ವೈದ್ಯಕೀಯ ಕಾಲೇಜು ಆವರಣದ ಕೆಲವು ಕಟ್ಟಡಗಳಿಗೆ ಅಪ್ಪಳಿಸಿ ಭೀಕರ ವಿಮಾನ ಅಪಘಾತದ ಸಂಭವಿಸಿ 270 ಜನರು ಸಾವನ್ನಪ್ಪಿದ ನಂತರ ಹಲವಾರು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷಗಳು ಕಂಡು ಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ