
ಅಹಮ್ಮದಾಬಾದ್ ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಮೇಘನಿ ನಗರ ಪ್ರದೇಶದಲ್ಲಿ ಪ್ರಯಾಣಿಕರು, ಸಿಬ್ಬಂದಿಗಳು ಸೇರಿ ಸುಮಾರು 242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಡಿದೆ. ಸುಮಾರು 180 ಮಂದಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕೂಡ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ಸ್ಥಳದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಗೆ ಸಂಬಂಧಿಸಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ವೈರಲ್ ಆಗಿದೆ.
ತಾಂತ್ರಿಕ ದೋಷದ ಕಾರಣಕ್ಕೆ ಟೇಕ್ ಆಫ್ ಆದ 15 ಕಿ ಮೀಟರ್ ದೂರದಲ್ಲಿ 600 ರಿಂದ 700 ಅಡಿ ಎತ್ತರದಲ್ಲಿ ಹಾರಿರುವಾಗ ವಿಮಾನ ಪತನವಾಗಿದೆ. ಜನ ವಸತಿ ಕಟ್ಟಡ ಮೇಲೆ ಮತ್ತು ಅಲ್ಲೇ ಇರುವ ಹಾರ್ಸ್ ಕ್ಯಾಂಪ್ ಬಳಿ ವಿಮಾನ ಬಿದ್ದಿದೆ ಎಂದು ವರದಿ ತಿಳಿಸಿದೆ.
ವಿಮಾನವು ಅಹಮ್ಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ತೆರಳುತ್ತಿತ್ತು. ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
AI-171 ನಂಬರ್ ನ ಬೋಯಿಂಗ್ -787-8 ಮಾದರಿಯ ವಿಮಾನ 1.10ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನ 1.38ಕ್ಕೆ ತಡವಾಗಿ ಟೇಕ್ ಆಫ್ ಆಗಿದೆ ಎಂದು ವರದಿಗಳು ತಿಳಿಸಿವೆ. ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ದಟ್ಟ ಹೊಗೆ ಆವರಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಅಪಘಾತದ ನಂತರ, ಎಲ್ಲ ವಿಮಾನ ಮಾರ್ಗಗಳನ್ನು, ಭೂ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಸ್ಥಳಕ್ಕೆ ಭಾರೀ ಭದ್ರತೆಯೊಂದಿಗೆ ಪೊಲೀಸ್ ಪಡೆ, ಅಗ್ನಿಶಾಮಕ, ವೈದ್ಯರ ತಂಡ ಆಗಮಿಸಿದೆ. ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು. ಇದರಲ್ಲಿ 10 ಮಂದಿ ವಿಮಾನ ಸಿಬ್ಬಂದಿಗಳು ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳ ದೃಢೀಕರಣ ನಿರೀಕ್ಷೆಯಲ್ಲಿದೆ.
ಏರ್ ಇಂಡಿಯಾ ಟ್ವೀಟ್ ಮಾಡಿ ದೃಢಪಡಿಸಿದೆ.
ಟಾಟಾ ಗ್ರೂಪ್ ಕೂಡ ತನ್ನ ಒಡೆತನದ ಏರ್ ಇಂಡಿಯಾ ಪತನದ ಬಗ್ಗೆ ಸಂತಾಪ್ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ