ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್‌ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ (ಫ್ಲೈಟ್ AI171) ಇಂದು ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಭೀಕರ ಅಪಘಾತಕ್ಕೀಡಾಗಿ, ವಿಮಾನದಲ್ಲಿ ಸಿಬ್ಬಂದಿ ಸಹಿತ 242 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಸೀಟ್ ನಂಬರ್ 11ಎ ನಲ್ಲಿದ್ದ ಓರ್ವ ವ್ಯಕ್ತಿ ಸಣ್ಣ ಪುಟ್ಟ ಗಾಯಗಳೊಂದಿಗೆ ಬದುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ 241 ಮಂದಿ ಮೃತಪಟ್ಟಿದ್ದಾರೆ.
ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಈ ದುರ್ಘಟನೆ ಸುದ್ದಿ ತೀವ್ರವಾಗಿ ದುಃಖಕರವಾಗಿದೆ. ನಾನು ವೈಯಕ್ತಿಕವಾಗಿ ಈ ಘಟನೆ ಮೇಲೆ ನಿಗಾ ಇಟ್ಟಿದ್ದೇನೆ. ರಕ್ಷಣಾ ಹಾಗೂ ತುರ್ತು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ಎಂದಿದ್ದಾರೆ.
ಬ್ರಿಟನ್ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ತಮ್ಮ ಸಂತಾಪ ಸೂಚಿಸಿ, ಲಂಡನ್‌ಗೆ ಹೊರಟಿದ್ದ ವಿಮಾನವು ಭಾರತದಲ್ಲಿ ಅಪಘಾತಕ್ಕೀಡಾದ ಸುದ್ದಿ ಶಾಕಿಂಗ್ ಆಗಿದೆ. ತೀವ್ರ ದುಃಖದ ಈ ಕ್ಷಣದಲ್ಲಿ ಪ್ರಯಾಣಿಕರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ ಎಂದಿದ್ದಾರೆ.
ಲಂಡನ್ ಗ್ಯಾಟ್‌ವಿಕ್ ವಿಮಾನ ನಿಲ್ದಾಣದಿಂದ ಕೂಡ ಪ್ರತಿಕ್ರಿಯೆ ಬಂದಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟಿದ್ದ AI171 ವಿಮಾನವು ಇಂದು ಸಂಜೆ 6:25ಕ್ಕೆ ಲಂಡನ್‌ಗೆ ಆಗಮಿಸಬೇಕಾಗಿತ್ತು. ಆದರೆ ಅದು ಅಪಘಾತಕ್ಕೀಡಾಗಿದೆ ಎಂಬುದು ದೃಢವಾಗಿದೆ ಎಂದಿದೆ.
ಏರ್ ಇಂಡಿಯಾ ಅಧ್ಯಕ್ಷ ಎನ್. ಚಂದ್ರಶೇಖರನ್ ಹೇಳಿಕೆ ಬಿಡುಗಡೆ ಮಾಡಿ "AI171 ರ ಈ ದುರಂತ ಸುದ್ದಿ ನಮ್ಮನ್ನು ಆಘಾತಕ್ಕೆ ಒಳಪಡಿಸಿದೆ. ದುರಂತದಲ್ಲಿ ಮಡಿದವರ ಎಲ್ಲರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ಗಮನವು ಪೀಡಿತರಿಗೆ ಸಹಾಯ ಮಾಡುವತ್ತ ಇದೆ. ತುರ್ತು ಕೇಂದ್ರ ಸಕ್ರಿಯಗೊಂಡಿದ್ದು, ಕುಟುಂಬಗಳಿಗೆ ಮಾಹಿತಿ ನೀಡಲು ವಿಶೇಷ ತಂಡ ರಚಿಸಲಾಗಿದೆ.
ಕೈಗಾರಿಕೋದ್ಯಮಿ ಗೌತಮ್ ಅದಾನಿಯವರು ತಮ್ಮ ಟ್ವೀಟಿನಲ್ಲಿ ಸಂತಾಪ ಸೂಚಿಸಿ, "ಈ ದುಃಖದ ಸಮಯದಲ್ಲಿ ನಾವು ಪೀಡಿತರ ಕುಟುಂಬಗಳೊಂದಿಗೆ ಇದ್ದೇವೆ. ಅಗತ್ಯವಿರುವ ಎಲ್ಲಾ ಸಹಾಯ ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ