
ಮುಂಬೈ(ಡಿ.06): ಮಹತ್ವದ ಬೆಳವಣಿಗೆಯೊಂದರಲ್ಲಿ ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಎನ್ಸಿಪಿ ನಾಯಕ ಅಜಿತ್ ಪವಾರ್‌ಗೆ, ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲಿನ್‌ಚಿಟ್ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ನ ನಾಗಪುರ್ ನ್ಯಾಯಪೀಠಕ್ಕೆ ಎಸಿಬಿ ಅಫಿಡವಿಟ್ ಸಲ್ಲಿಸಿದ್ದು, ವಿದರ್ಭ ಪ್ರದೇಶದಲ್ಲಿ ನಡೆದಿರುವ ನೀರಾವರಿ ಹಗರಣಗಳಲ್ಲಿ ಅಜಿತ್ ಪವಾರ್ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದೆ.
ಅಜಿತ್ ಪವಾರ್ ಅವಧಿಯ 9 ನೀರಾವರಿ ಹಗರಣಗಳ ತನಿಖೆಗೆ ತಿಲಾಂಜಲಿ!
ಅಜಿತ್ ಪವಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಹಾರಾಷ್ಟ್ರದ ಅತ್ಯಂತ ಬರಪೀಡಿತ ಪ್ರದೇಶವಾದ ವಿದರ್ಭದಲ್ಲಿ ಹಲವು ನೀರಾವರಿ ಯೋಜನೆಗಳು ಜಾರಿಯಾಗಿದ್ದವು. ಆದರೆ ಈ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಎಸಿಬಿಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಭ್ರಷ್ಟಾಚಾರದಲ್ಲಿ ಅಜಿತ್ ಪವಾರ್ ಪಾತ್ರವನ್ನು ನಿರಾಕರಿಸಿರುವ ಎಸಿಬಿ, ಕ್ಲಿನ್‌ಚಿಟ್ ನೀಡುವ ಮೂಲಕ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದಿದೆ ಎಂಬ ಆರೋಪಕ್ಕೆ ಗುರಿಯಾಗಿದೆ.
9 ನೀರಾವರಿ ಹಗರಣ ಪ್ರಕರಣ ಹಿಂಪಡೆದ ಎಸಿಬಿ: ಇದು ಪವಾರ್ ಪವರ್?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ