
ಬಾರಾಮತಿ (ಜ.28) ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡು ಐವರು ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಸೇರಿದಂತೆ ಐವರು ದೇಹಗಳು ಸುಟ್ಟು ಕರಕಲಾಗಿದೆ. ಬಾರಮತಿಯಲ್ಲಿ ನಡೆದ ಈ ದುರಂತಕ್ಕೆ ಇಡೀ ದೇಶವೇ ಮರುಗಿದೆ. ಘಟನೆಗೆ ಪ್ರಧಾನಿ ಮೋದಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ಇದೀಗ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನದ ವಿಡಿಯೋ ಬಹಿರಂಗವಾಗಿದೆ. ಅಜಿತ್ ಪವಾರ್ ಅಂತಿಮ ಕ್ಷಣಗಳ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮುಂಬೈನಿಂದ ಬಾರಮತಿಗೆ ತೆರಳಿದ್ದ ಅಜಿತ್ ಪವಾರ್ ಲಾರ್ಜಿತ್ 45 ವಿಮಾನದಲ್ಲಿ ಪ್ರಯಾಣಿಸಿದ್ದರು. ಪೈಲೆಟ್ ಸೇರಿದಂತೆ ಐವರು ಮುಂಬೈನಿಂದ ಪ್ರಾಯಣ ಬೆಳೆಸಿದ್ದರು. ಬಾರಮತಿಯಲ್ಲಿ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಾಗಿದೆ. ಅಜಿತ್ ಪವಾರ್ ವಿಮಾನ ಪತನದ ವಿಡಿಯೋ ಬಹಿರಂಗವಾಗಿದೆ. ಎರಡನೇ ಬಾರಿಗೆ ಲ್ಯಾಂಡಿಂಗ್ ಮಾಡುವಾಗ ವಿಮಾನ ಪತನಗೊಂಡಿದೆ. ರಸ್ತೆಯಲ್ಲಿರುವ ಸಿಸಿಟಿವಿ ವಿಡಿಯೋದಲ್ಲಿ ಅಜಿತ್ ಪವಾರ್ ಅಂತಿಮ ಕ್ಷಣದ ವಿಡಿಯೋ ಬಹಿರಂಗವಾಗಿದೆ.
ಬೆಳಗ್ಗೆ 8.46ಕ್ಕೆ ವಿಮಾನ ಪತನಗೊಂಡಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ವಿಮಾನ ಪತನಗೊಳ್ಳುತ್ತಿದ್ದಂತ ದಟ್ಟ ಬೆಂಕಿ ಜ್ವಾಲೆ ಕಾಣಿಸಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದೆ.
ಅಜಿತ್ ಪವಾರ್ ವಿಮಾನ ಪತನದ ಕುರಿತು ತನಿಖೆ ತೀವ್ರಗೊಂಡಿದೆ. ಬಾರಮತಿಯಲ್ಲಿ ರನ್ ವೇ ಗೋಚರತೆ ಸ್ಪಷ್ಟವಾಗಿರಲಿಲ್ಲ. ಆದರೂ ಪೈಲೆಟ್ ಲ್ಯಾಂಡಿಂಗ್ ಪ್ರಯತ್ನ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಮೊದಲ ಲ್ಯಾಂಡಿಂಗ್ ಪ್ರಯತ್ನ ವಿಫಲವಾಗಿತ್ತು. ಹೀಗಾಗಿ ಪೈಲೆಟ್ ಎರಡನೇ ಬಾರಿಗೆ ಲ್ಯಾಂಡಿಂಗ್ ಮಾಡುವ ಪ್ರಯತ್ನ ಮಾಡಿದ್ದಾರೆ. ಗೋಚರತೆ ಸ್ಪಷ್ಟತೆ ಇದೆ ಎಂದು ವಿಮಾನ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿದೆ.
ಏರ್ ಟ್ರಾಫಿಕ್ ಕಂಟ್ರೋಲ್ ರೂಂನಿಂದ ಲ್ಯಾಂಡಿಂಗ್‌ಗೆ ಯಾವುದೇ ಅನುಮತಿ ಸಿಕ್ಕಿರಲಿಲ್ಲ. ರೀಡ್ ಬ್ಯಾಕ್ ಮೆಸೇಜ್ ಇಲ್ಲದೆ ಎರಡನೇ ಬಾರಿ ಲ್ಯಾಂಡಿಂಗ್ ಪ್ರಯತ್ನ ಮಾಡಲಾಗಿದೆ. ರನ್ ವೇ ಗಿಂತ ಹೊರಗೆ ವಿಮಾನ ಲ್ಯಾಂಡಿಂಗ್ ಮಾಡಲಾಗಿದೆ. ಮರು ಕ್ಷಣವೇ ವಿಮಾನ ಪತನಗೊಂಡಿದೆ. ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮೇ ಡೇ ಸಂದೇಶಗಳು ರವಾನೆಯಾಗಿಲ್ಲ. ಹೀಗಾಗಿ ತಾಂತ್ರಿಕ ದೋಷಕ್ಕಿಂತ ಪೈಲೆಟ್ ದೋಷವೇ ಹೆಚ್ಚಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಜಿತ್ ಪವಾರ್ ವಿಮಾನ ಪತನ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಇತ್ತ ನಾಗರೀಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿಮಾನ ಪತನ ತನಿಖೆ ಕುರಿತು ಪ್ರಾಥಮಿಕ ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನ ಲ್ಯಾಂಡಿಂಗ್‌ಗೆ ಸ್ಪಷ್ಟ ಗೋಚರತೆ ಇರಲಿಲ್ಲ ಎಂದಿದ್ದಾರೆ.ಅಪಘಾತದ ಸಂಪೂರ್ಣ ತನಿಖೆ ನಡೆಯಲಿದೆ ಎಂದು ರಾಮಮೋಹನ್ ನಾಯ್ಡು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ