'ಬಿಜೆಪಿ ವಿತರಿಸೋ ಲಸಿಕೆ ಹಾಕಿಸ್ಕೊಳ್ಳಲ್ಲ, ನಮ್ಮ ಸರ್ಕಾರ ಬಂದ್ರೆ ಉಚಿತ ವ್ಯಾಕ್ಸಿನ್'

Published : Jan 02, 2021, 04:02 PM ISTUpdated : Jan 02, 2021, 06:52 PM IST
'ಬಿಜೆಪಿ ವಿತರಿಸೋ ಲಸಿಕೆ ಹಾಕಿಸ್ಕೊಳ್ಳಲ್ಲ, ನಮ್ಮ ಸರ್ಕಾರ ಬಂದ್ರೆ ಉಚಿತ ವ್ಯಾಕ್ಸಿನ್'

ಸಾರಾಂಶ

ಸಮಾಜವಾದಿ ಪಕ್ಷದ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿವಾದಾತ್ಮಕ ಹೇಳಿಕೆ| ಬಿಜೆಪಿ ವಿತರಿಸುವ ಲಸಿಕೆ ಹಾಕಿಸಿಕೊಳ್ಳುವುದಿಲ್ಲ, ನನಗೆ ಅವರು ಕೊಡುವ ಲಸಿಕೆ ಮೇಲೆ ನಂಬಿಕೆ ಇಲ್ಲ

ಲಕ್ನೋ(ಜ.02): ಸಮಾಜವಾದಿ ಪಕ್ಷದ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಾವು ಬಿಜೆಪಿ ವಿತರಿಸುವ ಲಸಿಕೆ ಹಾಕಿಸಿಕೊಳ್ಳುವುದಿಲ್ಲ, ನನಗೆ ಅವರು ಕೊಡುವ ಲಸಿಕೆ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಈ ಮೂಲಕ ಭಾರತ ಸರ್ಕಾರ ನೀಡಲಿರುವ ಲಸಿಕೆಯನ್ನು ಬಿಜೆಪಿಯ ಲಸಿಕೆ ಎಂದು ಹೇಳಿದ್ದಾರೆ.

"

ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಯಾದವ್ 'ನಮ್ಮ ಸರ್ಕಾರ ಅಧಿಕಾರಕ್ಕೇರಿದರೆ ಜನರಿಗೆ ಉಚಿತವಾಗಿ ಲಸಿಕೆ ವಿತರಿಸುತ್ತೇವೆ' ಎಂದೂ ಹೇಳಿದ್ದಾರೆ. ಇನ್ನು ದೇಶಾದ್ಯಂತ ಇಂದು ಕೊರೋನಾ ಲಸಿಕೆಯ ಡ್ರೈ ರನ್ ನಡೆಯುತ್ತಿದೆ. ಈ ಮೂಲಕ ಸರ್ಕಾರ ಎಷ್ಟು ಸಜ್ಜಾಗಿದೆ ಎಂದು ತಿಳಿಯುತ್ತದೆ. ಹೀಗಿರುವಾಗಲೇ ಅಖಿಲೇಶ್ ಯಾದವ್ ತಮ್ಮ ಹೇಳಿಕೆ ಮೂಲಕ ವಿವಾದೊಂದನ್ನು ಹುಟ್ಟು ಹಾಕಿದ್ದಾರೆ.

ಇನ್ನು ಅತ್ತ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾತನಾಡುತ್ತಾ 'ಮೊದಲ ಹಂತದಲ್ಲಿ ದೇಶಾದ್ಯಂತ ಮೂರು ಕೋಟಿ ಮಂದಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡಲಾಗುವುದು' ಎಂದಿದ್ದಾರೆ. ಇದರಲ್ಲಿ ಒಂದು ಕೋಟಿ ಹೆಲ್ತ್ ವರ್ಕರ್ಸ್ ಹಾಗೂ ಎರಡು ಕೋಟಿ ಫ್ರಂಟ್ ಲೈನ್ ವರ್ಕರ್ಸ್ ಇರಲಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!