
ದೆಹಲಿ (ಜೂ.12): ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ದೇಶದ 28 ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳು (ನೀತಿ ಆಯೋಗ) NITI Aayog Governing Council ಸಭೆಯಲ್ಲಿ ಭಾಗವಹಿಸಿದ್ದಾರೆ. ಒಕ್ಕೂಟ ವ್ಯವಸ್ಥೆಗೆ ಇದೊಂದು ಮೈಲಿಗಲ್ಲು.
ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು 'ವಿಕಸಿತ ಭಾರತಕ್ಕಾಗಿ ಸಮಗ್ರ ಮಾನವ ಅಭಿವೃದ್ಧಿ 2047' ಎಂಬ ವಿಷಯದ ಅಡಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಯಾವುದೇ ಬಾಯ್‌ಕಾಟ್ ಅಥವಾ ಗೈರುಹಾಜರಿಲ್ಲದೆ ಕರ್ನಾಟಕ, ಕೇರಳ ತಮಿಳು ನಾಡು ಸೇರಿದಂತೆ ಎಲ್ಲ ಮುಖ್ಯಮಂತ್ರಿಗಳು ಭಾಗಿಯಾಗುವ ಮೂಲಕ ರಾಜಕೀಯ ಜಗಳಗಳನ್ನು ಬದಿಗಿಟ್ಟು ಏಕತೆಯ ಸಂದೇಶ ಸಾರಿದ್ದಾರೆ.
ಈ ಹಿಂದೆ ಹಿಂದೆ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ನೀತಿ ಆಯೋಗ(NITI Aayog) ಸಭೆಗಳನ್ನು ಬಾಯ್‌ಕಾಟ್ ಮಾಡುತ್ತಿದ್ದರು. ಆದರೆ ಈ ಬಾರಿ ಇದನ್ನೂ ಪೂರ್ಣವಾಗಿ ತೊರೆಯಲಾಗಿದೆ. ಎಲ್ಲಾ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳ ಅಭಿವೃದ್ಧಿ ಯೋಜನೆಗಳನ್ನು ಮಂಡಿಸಿ, ರಾಷ್ಟ್ರೀಯ ಅಭಿವೃದ್ಧಿಗೆ ಒಂದಾದರು.
ಮುಖ್ಯಮಂತ್ರಿಗಳ ಜೊತೆಗೆ, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳು ಸಹ ಚರ್ಚೆಗಳಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಬಗ್ಗೆ ಪ್ರಧಾನಿ ಮೋದಿಯವರು ಮಾತನಾಡಿ, ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಗಳ ಪೂರ್ಣ ಭಾಗವಹಿಸಿರುವುದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದರು. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಕಲ್ಪನೆಯನ್ನು ಕೇಂದ್ರ ಮತ್ತು ರಾಜ್ಯಗಳ ನಡುವಿನ ನಿಕಟ ಸಹಯೋಗದಿಂದ ಮಾತ್ರ ಸಾಧಿಸಬಹುದು ಎಂದು ಪ್ರತಿಪಾದಿಸಿದರು
ಹಿಂದಿನ ಸಭೆಗಳಲ್ಲಿ ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್, ಅರವಿಂದ್ ಕೇಜ್ರಿವಾಲ್, ಸಿದ್ದರಾಮಯ್ಯ, ಪಿಣರಾಯಿ ವಿಜಯನ್, ಸೇರಿದಂತೆ ಹಲವು ವಿರೋಧ ಪಕ್ಷ ಮುಖ್ಯಮಂತ್ರಿಗಳು ಸಭೆಗೆ ಗೈರುಹಾಜರಾಗಿದ್ದರು. ಆದರೆ ಈ ಬಾರಿ ಯಾರೂ ಹಿಂದೆ ಸರಿಯದೆ ಭಾಗವಹಿಸಿದ್ದು ಗಮನಾರ್ಹ.
ಈ ಸಭೆಯು ರಾಜ್ಯಗಳ ನಡುವಿನ ಸಹಕಾರ ಹೆಚ್ಚಿಸುವ ಮೂಲಕ ಭಾರತದ ಒಟ್ಟಾರೆ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ದೇಶದ ಪ್ರಗತಿಗೆ ಒತ್ತು ನೀಡುವ ಮಾದರಿಯಾಗಿ ಈ ಬೆಳವಣಿಗೆಯನ್ನು ನೋಡಲಾಗುತ್ತಿದೆ.
ANI ಸಂಪಾದಕಿ ಸ್ಮಿತಾ ಪ್ರಕಾಶ್ ಅವರು ಈ ಬೆಳವಣಿಗೆಯನ್ನು ಸ್ವಾಗತಿಸಿದ್ದು, ರಾಜಕೀಯ ಬಿಕ್ಕಟ್ಟುಗಳನ್ನು ಬದಿಗಿಟ್ಟು ಎಲ್ಲಾ ಮುಖ್ಯಮಂತ್ರಿಗಳು NITI Aayogಗೆ ತಮ್ಮ ಪ್ರಸ್ತಾಪಗಳನ್ನು ಮಂಡಿಸಿದ್ದಾರೆ. ದೇಶದ ಜನರು ನಿರೀಕ್ಷಿಸುವ ಸ್ಪರ್ಧಾತ್ಮಕ ಒಕ್ಕೂಟದ ನಿಜವಾದ ರೂಪ' ಎಂದು ಹೇಳಿದ್ದಾರೆ.
This means a lot actually. The political bickering was set aside, no boycotts and sulking. All chief ministers made their pitch to Niti Aayog, in the true spirit of competitive federalism, what electorate expect. https://t.co/FdFZPJImSV
— Smita Prakash (@smitaprakash) June 12, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ