
ನವದೆಹಲಿ (ಮೇ.12): ಬಿಜೆಪಿ ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಎಲ್ಲಾ ವಿಪಕ್ಷ ನಾಯಕರನ್ನೂ ಜೈಲಿಗೆ ತಳ್ಳಲಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಎಲ್ಲಾ ಪ್ರತಿಪಕ್ಷ ನಾಯಕರೂ ಜೈಲಿಗೆ ಹೋಗಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.
ಅಬಕಾರಿ ಹಗರಣದಲ್ಲಿ ಮಧ್ಯಂತರ ಜಾಮೀನು ಪಡೆದು ಶುಕ್ರವಾರವಷ್ಟೇ ಬಿಡುಗಡೆಯಾಗಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಶನಿವಾರ ತಮ್ಮ ಪಕ್ಷದ ಮುಖ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ‘ಬಿಜೆಪಿ ಈ ಬಾರಿ ಅಧಿಕಾರಕ್ಕೆ ಮರಳುವುದಿಲ್ಲ. ಇಂಡಿಯಾ ಒಕ್ಕೂಟ ಗೆದ್ದು ಜೂ.4ರಂದು ಸರ್ಕಾರ ರಚಿಸಲಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ 20 ತಾಸುಗಳಲ್ಲಿ ನಾನು ರಾಜಕೀಯ ಪಂಡಿತರು ಹಾಗೂ ಜನರ ಜೊತೆಗೆ ಮಾತನಾಡಿದೆ. ಅವರೆಲ್ಲರೂ ಬಿಜೆಪಿ ಗೆಲ್ಲುವುದಿಲ್ಲ ಎಂದು ಹೇಳಿದರು’ ಎಂದು ತಿಳಿಸಿದರು.
ಟೆಂಪೋ ಬಿಲಿಯನೇರ್‌ಗಳ ಕೈಗೊಂಬೆ ರಾಜ ಪ್ರಧಾನಿ ಮೋದಿ: ರಾಹುಲ್ ಗಾಂಧಿ ವಾಗ್ದಾಳಿ
ನಾನೇಕೆ ರಾಜೀನಾಮೆ ನೀಡಲಿಲ್ಲ?: ಕೇಂದ್ರದಲ್ಲಿ ಇಂಡಿಯಾ ಕೂಟ ಸರ್ಕಾರ ರಚಿಸಲಿದೆ. ಆಪ್ ಅದರ ಭಾಗವಾಗಲಿದೆ. ನಾವು ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ಪಡೆಯುತ್ತೇವೆ. ನನಗೆ ಮುಖ್ಯಮಂತ್ರಿ ಸ್ಥಾನ ಮುಖ್ಯವಲ್ಲ. ಆದರೆ ನಾನು ಸಿಎಂ ಹುದ್ದೆಗೆ ಏಕೆ ರಾಜೀನಾಮೆ ನೀಡಲಿಲ್ಲ ಅಂದರೆ, ನಕಲಿ ಪ್ರಕರಣದಲ್ಲಿ ನನ್ನನ್ನು ಬಲವಂತವಾಗಿ ಕೆಳಗಿಳಿಸಲು ಷಡ್ಯಂತ್ರ ನಡೆದಿದೆ ಎಂದೂ ಕೇಜ್ರಿವಾಲ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ