1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಕೊರೋನಾ ಲಸಿಕೆ: ಸರ್ವ ಪಕ್ಷ ಸಭೆಯಲ್ಲಿ ನಿರ್ಧಾರ!

By Suvarna News  |  First Published Dec 4, 2020, 4:59 PM IST

ಕೊರೋನಾ ವೈರಸ್ ನಿಯಂತ್ರಿಸಲು ಎಲ್ಲಾ ದೇಶಗಳು ಲಸಿಕೆಗಾಗಿ ಕಾಯುತ್ತಿದೆ. ಈ ವಿಚಾರದಲ್ಲಿ ಭಾರತ ಇತರ ದೇಶಗಳಿಗಿಂತ ಮುಂದಿದೆ. ಇದೀಗ ಲಸಿಕೆ ವಿತರಣೆ, ನೀಡುವಿಕೆ ಕುರಿತು ಭಾರತ ಚರ್ಚೆ ನಡೆಸುತ್ತಿದೆ. ಮೊದಲ ಹಂತದಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತು ನಡೆಸಿದೆ ಸರ್ವ ಪಕ್ಷ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತ ವಿವರ ಇಲ್ಲಿದೆ.


ನವದೆಹಲಿ(ಡಿ.04): ಕೊರೋನಾ ಲಸಿಕೆ ಕುರಿತು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ನಡೆಸಿದೆ. ಕೇಂದ್ರ ಆರೋಗ್ಯ ಇಲಾಖೆ ಆಯೋಜಿಸಿದ ಸಭೆಯಲ್ಲಿ ಕೆಲ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಮೊದಲಿಗೆ ಕೊರೋನಾ ಲಸಿಕೆಯನ್ನು 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆಯಲ್ಲಿ ಹೇಳಿದೆ.

ರಕ್ಷಣಾ, ಹೂಡಿಕೆ, ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಭಾರತ-UK ಜೊತೆಯಾಗಿ ಹೆಜ್ಜೆ: ಮೋದಿ!.

Tap to resize

Latest Videos

 ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿರುವ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಕೊರೋನಾ ಲಸಿಕೆ ನೀಡಲಾಗುವುದು. ಬಳಿಕ 2 ಕೋಟಿ ಫ್ರಂಟ್‌ಲೈನ್ ವರ್ಕರ್ಸ್‌‌ಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. 

ಆರೋಗ್ಯ ಇಲಾಖೆ ಆಯೋಜಿಸಿದ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಆರಂಭದಲ್ಲಿ ನೀಡುವ ಲಸಿಕೆಯನ್ನು ವೈದ್ಯರು, ನರ್ಸ್, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಹೇಳಿದೆ. ಫ್ರಂಟ್‌ಲೈನ್ ವರ್ಕರ್‌ಗಳಾದ ಪೊಲೀಸರು, ಸ್ವಚ್ಚತಾ ಸಿಬ್ಬಂದಿಗಳು, ಭದ್ರತಾ ಸಿಬ್ಬಂಧಿಗಳು ಸೇರಿದಂತೆ ಹಲವರಿಗೆ 2 ಕೋಟಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಸರ್ವ ಪಕ್ಷ ಸಭೆಯಲ್ಲಿ ವಿವರಿಸಿದೆ. 

ಈ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್, ಟಿಎಂಸಿಯಿಂದ ಸುದೀಪ್ ಬಂಡೋಪಾದ್ಯಾಯ, ಎನ್‌ಸಿಪಿಯಿಂದ ಶರದ್ ಪವಾರ್, ಟಿಆರ್‌ಎಸ್‌ನಿಂದ ನಾಗೇಶ್ವರ ರಾವ್, ಶಿವಸೇನೆಯಿಂದ ವಿನಾಯಕ್ ರಾವತ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷದ 13 ಮುಖಂಡರು ಸಭೆಯಲ್ಲಿ ಮಾತನಾಡಿದ್ದಾರೆ.

ಕೊರೋನಾ ವಕ್ಕರಿಸಿದ ಬಳಿಕ ಕೇಂದ್ರ ಸರ್ಕಾರ ಕೊರೋನಾ ಕುರಿತು ಕರೆದ 2ನೇ ಸರ್ವ ಪಕ್ಷ ಸಭೆ ಇದಾಗಿತ್ತು. ಇನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಪ್ರಹ್ಮಾದ್ ಜೋಶಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

click me!