
ಲಖನೌ (ಜೂನ್ 26, 2023): ‘ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ಗುರಾಯಿಸುವಿಕೆಗೆ ನಿಷೇಧ ಇದೆ’ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ತನ್ಮೂಲಕ ಮುಸ್ಲಿಂ ಜೋಡಿಯ ಲಿವಿಂಗ್ ಟುಗೆದರ್ ವಿರುದ್ಧ ಪರೋಕ್ಷವಾಗಿ ತೀರ್ಪು ನೀಡಿದೆ.
ಲಿವ್ ಇನ್ ಸಂಬಂಧದಲ್ಲಿರುವ ಅಂತರ್‌ಧರ್ಮೀಯ ಜೋಡಿಯೊಂದು, ತಮಗೆ ಯುವತಿಯ ಕುಟುಂಬದಿಂದ ಹಾಗೂ ಪೊಲೀಸರಿಂದ ಕಿರುಕುಳವಾಗುತ್ತಿದೆ. ಹೀಗಾಗಿ ರಕ್ಷಣೆ ನೀಡಿ ಎಂದು ಹೈಕೋರ್ಟ್ ಮೊರೆ ಹೋಗಿತ್ತು. ಇದನ್ನು ವಜಾಗೊಳಿಸಿದ ಕೋರ್ಟು, ಈ ಮೇಲಿನ ಅಭಿಪ್ರಾಯ ಹೇಳಿದೆ. ಈ ಮೂಲಕ ಲಿವ್ ಇನ್ ಸಂಬಂಧಕ್ಕೆ ಅಸಮ್ಮತಿ ವ್ಯಕ್ತಪಡಿಸಿದೆ.
ಇದನ್ನು ಓದಿ: ಪತಿ, ಮಕ್ಕಳನ್ನು ಬಿಟ್ಟು ಲಿವ್ ಇನ್ ಸಂಗಾತಿ ಜತೆ ವಾಸಿಸಲು ವಿವಾಹಿತ ಮಹಿಳೆಗೆ ಅನುಮತಿ ನೀಡಿದ ಹೈಕೋರ್ಟ್
‘ಇಸ್ಲಾಂನಲ್ಲಿ ಗಂಡ-ಹೆಂಡತಿ ಬಿಟ್ಟು ಇತರರ ನಡುವೆ (ಅನೈತಿಕ ಸಂಬಂಧ ಹಾಗೂ ವಿವಾಹಪೂರ್ವ ಲೈಂಗಿಕತೆ) ಲೈಂಗಿಕ ಕ್ರಿಯೆ ನಡೆಸುವುದು ನಿಷಿದ್ಧ. ಇದಕ್ಕೆ ‘ಝೀನಾ’ ಎನ್ನುತ್ತಾರೆ. ಅಂತೆಯೇ ವಿವಾಹದ ಮುನ್ನವೇ ಚುಂಬನ, ಗುರಾಯಿಸುವುದು ಹಾಗೂ ಸ್ಪರ್ಶಿಸುವುದು ಕೂಡ ಇಸ್ಲಾಂ ಪ್ರಕಾರ ‘ಹರಾಮ್’ ಆಗಿದೆ’ ಎಂದು ಕೋರ್ಚ್ ಅಭಿಪಟ್ಟಿತು ಹಾಗೂ ರಕ್ಷಣೆ ಕೋರಿದ್ದ ಜೋಡಿಯ ಅರ್ಜಿ ವಜಾ ಮಾಡಿತು.
16 ವರ್ಷಕ್ಕೆ ಲೈಂಗಿಕತೆ ಬಗ್ಗೆ ನಿರ್ಧರಿಸುವ ಸಾಮರ್ಥ್ಯವಿದೆ: ಮೇಘಾಲಯ ಹೈಕೋರ್ಟ್
ಶಿಲ್ಲಾಂಗ್: 16 ವರ್ಷದ ಬಾಲಕ ಅಥವಾ ಬಾಲಕಿಯು ಲೈಂಗಿಕತೆಗೆ ಸಂಬಂಧಿಸಿದಂತೆ ‘ಪ್ರಜ್ಞಾಪೂರ್ವಕ ನಿರ್ಧಾರ’ ವನ್ನು ಕೈಗೊಳ್ಳಲು ಸಮರ್ಥರಾಗಿರುತ್ತಾರೆ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ. ಲೈಂಗಿಕ ಕ್ರಿಯೆ ನಡೆಸಿದ್ದ ಇಬ್ಬರು ಅಪ್ರಾಪ್ತ ಪ್ರೇಮಿಗಳ ಪೈಕಿ 16 ವರ್ಷದ ಬಾಲಕನ ವಿರುದ್ಧ ಪೋಕ್ಸೊ ಕಾಯಿದೆಯಡಿ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿದ ನ್ಯಾಯಮೂರ್ತಿ ವಾನ್ಲುರಾ ಡಿಂಗ್ಡೋಹ್ ಏಕಸದಸ್ಯ ಪೀಠವು ‘ಇದು ಲೈಂಗಿಕ ದೌರ್ಜನ್ಯದ ಪ್ರಕರಣವಲ್ಲ. ಬಾಲಕಿ ಮತ್ತು ಬಾಲಕ ಪರಸ್ಪರ ಪ್ರೀತಿಸುತ್ತಿದ್ದರಿಂದ ಇದು ಸಂಪೂರ್ಣವಾಗಿ ಒಮ್ಮತದ ಕ್ರಿಯೆಯಾಗಿದೆ’ ಎಂದು ಈ ಆದೇಶ ನೀಡಿದೆ.
ಇದನ್ನೂ ಓದಿ: ಮದುವೆಯಾಗಿದ್ದ ಹಂತಕ ಸಾನೆ, ಸರಸ್ವತಿ: ಮನೋಜ್ ಕೆಂಪು ಕಣ್ಣಿಂದಲೇ ಬಯಲಾಯ್ತು ಕೊಲೆ!
ಈ ಪ್ರಕರಣದಲ್ಲಿ ಬಾಲಕಿಯು ‘ಆತ (ಬಾಲಕ) ತನಗೆ ಯಾವುದೇ ಬಲವಂತ ಮಾಡಿಲ್ಲ ಹಾಗೂ ಪರಸ್ಪರ ಸಮ್ಮತಿಯ ಮೇರೆಗೆ ನಾವು ಲೈಂಗಿಕ ಕ್ರಿಯೆ ನಡೆಸಿದ್ದೆವು’ ಎಂದು ಹೇಳಿಕೆ ನೀಡಿದ್ದಾಳೆ. ಆದರೆ ಇದು ದೌರ್ಜನ್ಯ ಎಂದು ಬಾಲಕಿ ಕುಟುಂಬ ಕೋರ್ಟ್ ಮೆಟ್ಟಿಲೇರಿತ್ತು. ಇತ್ತೀಚೆಗಷ್ಟೇ ಲೈಂಗಿಕ ಕ್ರಿಯೆಗೆ ಸಮ್ಮತಿಯ ವಯಸ್ಸು ನಿರ್ಧರಿಸುವಂತೆ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು ಎಂಬುದು ಇಲ್ಲಿ ಗಮನಾರ್ಹ.
ಇದನ್ನೂ ಓದಿ: ಲಿವ್ ಇನ್ ಸಂಗಾತಿ ತುಂಡು ತುಂಡಾಗಿ ಕತ್ತರಿಸಿದ ಪಾಪಿಗೆ ಏಡ್ಸ್: ಆಕೆ ಮಗಳಿದ್ದಂತೆ, ಸೂಸೈಡ್ ಮಾಡ್ಕೊಂಡ್ಳು ಎಂದ!
ಇದನ್ನೂ ಓದಿ: Delhi Shraddha Murder Case: ಮಹಿಳಾ ಹಕ್ಕು ಹೋರಾಟದ ಸೋಗು, ಗರ್ಲ್‌ಫ್ರೆಂಡನ್ನು 35 ಪೀಸ್ ಮಾಡಿದ ಪಾತಕಿ ಅಫ್ತಾಬ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ