
ನವದೆಹಲಿ(ಏ.29): ಕೊರೋನಾ ಪಾಸಿಟಿವಿಟಿ ದರ ಶೇ.15ಕ್ಕಿಂತ ಹೆಚ್ಚಿರುವ ದೇಶದ 150 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾಪವನ್ನು ಉನ್ನತ ಮಟ್ಟದ ತಜ್ಞರ ಸಮಿತಿಯು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.
"
ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗಿದೆ. ಆದರೆ ಅಂತಿಮ ನಿರ್ಧಾರ ಹೊರಬಿದ್ದಿಲ್ಲ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜತೆ ಚರ್ಚಿಸಿದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಬೇಕಿದೆ.
‘ಆದರೆ ಈ ವಿಷಯದಲ್ಲಿ ತಡ ಮಾಡುವಂತಿಲ್ಲ. ಸೋಂಕಿನ ಸರಪಳಿ ಕತ್ತರಿಸಲು ತ್ವರಿತವಾಗಿ ಈ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ ಕೂಡಾ ಇತ್ತೀಚೆಗೆ ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್ಡೌನ್ ಜಾರಿ ಮಾಡಬೇಕು ಎಂದು ಸಲಹೆ ನೀಡಿದ್ದರು.
"
15%ಗಿಂತ ಹೆಚ್ಚಿರುವ ರಾಜ್ಯದ ಜಿಲ್ಲೆಗಳು
ಕೊಡಗು 20.7%, ರಾಯಚೂರು 18.5%, ಕೋಲಾರ 18.2%, ಬೆಂಗಳೂರು ನಗರ 17.6%, ಹಾಸನ 17.6%, ತುಮಕೂರು 17.3%, ಕಲಬುರಗಿ 16.8%, ಬಳ್ಳಾರಿ 16.3%, ಚಿಕ್ಕಮಗಳೂರು 15.3%, ಚಾಮರಾಜನಗರ 15.2%
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ