ವಾಷಿಂಗ್ಟನ್: ಗೂಗಲ್ ಹಾಗೂ ಅಲ್ಫಾಬೆಟ್ ಸಿಇಒ ಆಗಿರುವ ಸುಂದರ್ ಪಿಚೈ ಅವರಿಗೆ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ನೀಡಿ ಶುಕ್ರವಾರ ಗೌರವಿಸಲಾಗಿದೆ. 2022ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಮಧುರೈ ಮೂಲದ ಸುಂದರ್ ಪಿಚೈ ಕೂಡಾ ಒಬ್ಬರು. ಈ ಹಿನ್ನೆಲೆಯಲ್ಲಿ ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಭಾರತದ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು (Taranjit Singh Sandhu) ಅವರು ದೇಶದ 3ನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಭೂಷಣ ಪ್ರಶಸ್ತಿಯನ್ನು ಸುಂದರ್ ಪಿಚೈ ಅವರಿಗೆ ನೀಡಿ ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ಪಿಚೈ,‘ನಾನು ಈ ಗೌರವ (Padma Bhushan award) ನೀಡಿದ್ದಕ್ಕೆ ಭಾರತ ಸರ್ಕಾರ (Government of India) ಹಾಗೂ ಭಾರತೀಯರಿಗೆ ಆಭಾರಿಯಾಗಿರುತ್ತೇನೆ. ನನ್ನನ್ನು ರೂಪಿಸಿದ ದೇಶದಿಂದ ಹೀಗೆ ಗೌರವಿಸಲ್ಪಡುವುದು ನನಗೆ ಅತ್ಯಂತ ಸಂತೋಷ ನೀಡಿದೆ. ಭಾರತವು ನನ್ನ ಭಾಗವಾಗಿದೆ. ನಾನೆಲ್ಲೇ ಹೋದರೂ ಅದು ನನ್ನೊಂದಿಗೆ ಇರುತ್ತದೆ ಎಂದು ಹೇಳಿದರು.
ಭಾರತದ ಡಿಜಿಟಲ್ ಭವಿಷ್ಯಕ್ಕೆ ಗೂಗಲ್ ಬದ್ಧ: Sundar Pichai
Google CEO ಸುಂದರ್ ಪಿಚೈ, ಮುಕೇಶ್ ಅಂಬಾನಿ ಜತೆ ಕ್ರಿಕೆಟ್ ಪಂದ್ಯ ವೀಕ್ಷಿಸಿದ ರವಿಶಾಸ್ತ್ರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ