
Mass casualty event: Washington DC: ವಾಷಿಂಗ್ಟನ್ ವಿಮಾನ ಅಪಘಾತ: ವಾಷಿಂಗ್ಟನ್ ಡಿಸಿ ಬಳಿಯ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣ (ಡಿಸಿಎ) ಬಳಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಪಿಎಸ್‌ಎ ಏರ್‌ಲೈನ್ಸ್‌ನ ಪ್ರಯಾಣಿಕ ವಿಮಾನ ಹಾಗೂ ಸೇನಾ ಹೆಲಿಕಾಪ್ಟರ್ ನಡುವೆ ಗಾಳಿಯಲ್ಲಿ ಡಿಕ್ಕಿ ಹೊಡೆದು ನದಿಗೆ ಬಿದ್ದಿದೆ.
ಏರ್‌ಲೈನ್ ಮೂಲಗಳ ಪ್ರಕಾರ, ವಿಮಾನದಲ್ಲಿ ನಾಲ್ವರು ಸಿಬ್ಬಂದಿ ಸೇರಿದಂತೆ 60ಕ್ಕೂ ಪ್ರಯಾಣಿಕರಿದ್ದರು ಎನ್ನಲಾಗಿದೆ. ಪಿಎಸ್ಎ ಏರ್ಲೈನ್ಸ್ ಅಮೆರಿಕನ್ ಏರ್ಲೈನ್ಸ್ನ ಅಂಗಸಂಸ್ಥೆಯಾಗಿದೆ.
ವಿಮಾನ ನಿಲ್ದಾಣ ಕ್ಲೋಸ್:
ರಾಯಿಟರ್ಸ್ ವರದಿಯ ಪ್ರಕಾರ, ಅಪಘಾತದ ನಂತರ ವಾಷಿಂಗ್ಟನ್ ಡಿಸಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಟೇಕಾಫ್ ಮತ್ತು ಲ್ಯಾಂಡಿಂಗ್‌ಗಳನ್ನು ನಿಲ್ಲಿಸಲಾಗಿದೆ. ಈ ವಿಚಾರವಾಗಿ ಅಮೆರಿಕದ ಸೆನೆಟರ್ ಟೆಡ್ ಕ್ರೂಜ್ ಟ್ವೀಟ್ ಮಾಡಿ ಅಪಘಾತದಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆದಾಗ್ಯೂ, ಸಾವಿನ ನಿಖರ ಸಂಖ್ಯೆಯನ್ನು ಇನ್ನೂ ದೃಢಪಡಿಸಲಾಗಿಲ್ಲ.
ರೇಗನ್ ಏರ್‌ಪೋರ್ಟ್ ವಾಷಿಂಗ್ಟನ್ ಡಿಸಿಯಲ್ಲಿ ಲ್ಯಾಂಡಿಂಗ್ ಮಾಡುವಾಗ ಅಮೆರಿಕನ್ ಏರ್‌ಲೈನ್ಸ್ ವಿಮಾನವು ಹೆಲಿಕಾಪ್ಟರ್‌ಗೆ ಅಪ್ಪಳಿಸಿದ ಕಾರಣ ಚದುರಿಬಿದ್ದ ಜೀವಗಳಿಗೆ ಹುಡುಕಾಟ ನಡೆಸಿದ್ದಾರೆ. ಘಟನೆಯ ಕುರಿತು ಅಮೆರಿಕನ್ ಏರ್‌ಲೈನ್ಸ್ ಹೇಳಿಕೆ ನೀಡಿದ್ದು, ಪಿಎಸ್‌ಎ ನಿರ್ವಹಿಸುತ್ತಿದ್ದ ಅಮೆರಿಕನ್ ಈಗಲ್ ಫ್ಲೈಟ್ 5342 ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಂತರ ನೀಡಲಾಗುವುದು ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ