
ನವದೆಹಲಿ: ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆವ ರಾಜ್ಯಗಳು ಸೇರಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಾರಾಂಶ ಪರಿಷ್ಕರಣೆಯನ್ನು (ಎಸ್ಎಸ್ಆರ್) ನಡೆಸಲಾಗುವುದು ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ಸೇರಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಜನವರಿ 1, 2027 ಅರ್ಹತಾ ದಿನಾಂಕವಾಗಿರುತ್ತದೆ ಎಂದು ಆಯೋಗ ತಿಳಿಸಿದೆ. ಆದರೆ ಪ್ರಸ್ತುತ ಎಸ್ಐಆರ್ ನಡೆದಿರುವ ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಇದು ಸದ್ಯಕ್ಕೆ ನಡೆಯದು.
ವಿಶೇಷ ಸಾರಾಂಶ ಪರಿಷ್ಕರಣೆ (SSR) ಅರ್ಹ ಮತದಾರರನ್ನು, ವಿಶೇಷವಾಗಿ ಯುವ ಮತದಾರರು ಮತ್ತು ಮೊದಲ ಬಾರಿಗೆ ಮತದಾರರನ್ನು ನೋಂದಾಯಿಸುವುದು, ಮತದಾರರ ಪಟ್ಟಿಯ ನಮೂದುಗಳನ್ನು ಸರಿಪಡಿಸುವುದು ಮತ್ತು ಮತದಾರರ ಪಟ್ಟಿಗಳ ಶುದ್ಧತೆಯನ್ನು ಸುಧಾರಿಸುವ ಗುರಿ ಹೊಂದಿದೆ.
ಮತದಾನದ ಹಕ್ಕು ಎಂಬುದು ಪ್ರತಿಯೊಬ್ಬ ನಾಗರಿಕನ ಜೀವಿಸುವ ಹಕ್ಕಿನಷ್ಟೇ ಪವಿತ್ರವಾದದ್ದು. ಎಸ್ಐಆರ್ನಲ್ಲಿರುವ ಲೋಪದೋಷಗಳ ವಿರುದ್ಧ ಹಾಗೂ ದೇಶದ ಮತದಾರರ ಹಕ್ಕುಗಳ ರಕ್ಷಣೆಗಾಗಿ ನಾವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ನಮ್ಮ ಈ ಕಾನೂನು ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಗುರುವಾರ ಆಗಮಿಸಿದ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಸ್ಐಆರ್ನಲ್ಲಿ ಕಂಡುಬಂದಿರುವ ಹಲವು ಗಂಭೀರ ಅಕ್ರಮಗಳು ಮತ್ತು ಲೋಪದೋಷಗಳನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದೇವೆ. ‘ರೈಟ್ ಟು ವೋಟ್ ಈಸ್ ರೈಟ್ ಟು ಲೈವ್’ ಈ ದೇಶದ ಪ್ರಜಾಪ್ರಭುತ್ವ ಮತ್ತು ರಾಜ್ಯದ ಮತದಾರರ ಹಿತಾಸಕ್ತಿಯನ್ನು ಕಾಪಾಡಲು ನಾವೆಲ್ಲರೂ ಒಗ್ಗಟ್ಟಾಗಿ ನಿಂತು ಬೃಹತ್ ಪ್ರತಿಭಟನೆ ನಡೆಸಿದ್ದೇವೆ ಮತ್ತು ಮುಂದೆಯೂ ಈ ಹೋರಾಟ ಮುಂದುವರಿಸಲಿದ್ದೇವೆ ಎಂದರು.
ದೆಹಲಿಯ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಅವರು ನನ್ನನ್ನು ವಾಹನಕ್ಕೆ ಹತ್ತುವಂತೆ ಸೂಚಿಸಿದ ಸಣ್ಣ ವಿಚಾರವನ್ನೇ ಮುಂದಿಟ್ಟುಕೊಂಡು, ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ನಾಯಕರು ‘ಇದು ದೊಡ್ಡ ಅವಮಾನ’ ಎಂದು ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ. ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ. ಅವರ ಸಂಪೂರ್ಣ ಆಶೀರ್ವಾದದೊಂದಿಗೆ ನಾವು ರಾಜ್ಯದಲ್ಲಿ ಸರ್ಕಾರವನ್ನು ಮುನ್ನಡೆಸುತ್ತಿದ್ದೇವೆ. ನಮ್ಮ ನಾಯಕರ ನಡವಳಿಕೆಯಲ್ಲಿ ಅಪಾರ ಮಾನವೀಯತೆ ಮತ್ತು ಶಕ್ತಿ ಇದೆ. ಇಂತಹ ಸಣ್ಣ ವಿಚಾರಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ವಿಪಕ್ಷಗಳು ನಿಲ್ಲಿಸಬೇಕು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ