
ನವದೆಹಲಿ: ಅಡ್ಡ ಮತದಾನದಿಂದಾಗಿ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ರಾಜ್ಯಸಭೆಗೆ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಬಿಜೆಪಿ, ಕಾಂಗ್ರೆಸ್ ಆಡಳಿತದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸರ್ಕಾರದ ಬಹುಮತ ಸಾಬೀತುಪಡಿಲಸು ಆಗ್ರಹಿಸಿ ಪಟ್ಟು ಹಿಡಿದು ಗಲಭೆ ಎಬ್ಬಿಸಿದ ಹಿನ್ನೆಲೆಯಲ್ಲಿ 15 ಬಿಜೆಪಿ ಶಾಸಕರನ್ನು ಸ್ಪೀಕರ್ ಸದನದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ. ಸದನದ ನಿಯಮಕ್ಕೆ ವಿರುದ್ಧವಾಗಿ ಘೊಷಣೆ ಕೂಗಿದ ಹಿನ್ನೆಲೆಯಲ್ಲಿ 15 ಬಿಜೆಪಿ ಶಾಸಕರನ್ನು ಸ್ಪೀಕರ್ ಸದನದಿಂದ ಉಚ್ಚಾಟಿಸಿದ್ದಾರೆ. ನಿನ್ನೆ ನಡೆದ ರಾಜ್ಯಸಭಾ ಚುನಾವಣೆ ವೇಳೆ 6 ಕಾಂಗ್ರೆಸ್ ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಇದರಿಂದ ಅಲ್ಲಿ ಬಿಜೆಪಿಯ ರಾಜ್ಯಸಭಾ ಸದಸ್ಯರು ಗೆದ್ದಿದ್ದಾರೆ.
ಇಂದು ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ 15 ಬಿಜೆಪಿ ಶಾಸಕರನ್ನು ಉಚ್ಚಾಟಿಸುವ ನಿರ್ಧಾರವನ್ನು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ತೆಗೆದುಕೊಂಡಿದ್ದಾರೆ. ಸ್ಪೀಕರ್ ಅವರ ಕೊಠಡಿಯೊಳಗೆ ಈ 15 ಶಾಸಕರು ಘೋಷಣೆಗಳನ್ನು ಕೂಗಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕರ ಅಡ್ಡಮತದಾನ, ಹಿಮಾಚಲ ಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿ ಅಭಿಷೇಕ್ ಮನು ಸಿಂಘ್ವಿಗೆ ಸೋಲು!
ಜೈರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಣ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್, ಮತ್ತು ಇಂದರ್ ಸಿಂಗ್ ಗಾಂಧಿ ಹಿಮಾಚಲ ವಿಧಾನಸಭೆಯಿಂದ ಉಚ್ಛಾಟಿತರಾದ ಬಿಜೆಪಿ ಶಾಸಕರು.
ಇಂದು ಮುಂಜಾನೆಯಷ್ಟೇ ಶಾಸಕ ಜೈರಾಮ್ ಠಾಕೂರ್ ಅವರು ಇಂದು ನಮ್ಮನ್ನು ಕಲಾಪದಿಂದ ಹೊರಹಾಕುವ ಸಾಧ್ಯತೆ ಇದೆ ಎಂಬಆತಂಕವನ್ನು ವ್ಯಕ್ತಪಡಿಸಿದ್ದರು. ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಅನ್ನು ಅಂಗೀಕರಿಸಲು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸಬಹುದು ಎಂಬ ಆತಂಕವಿದೆ ಎಂದು ಅವರು ಹೇಳಿದ್ದರು. ಆದರೆಂತೆ ಈಗ 15 ಶಾಸಕರನ್ನು ಉಚ್ಚಾಟಿಸಲಾಗಿದೆ.
ವಿಧಾನಸಭೆಗೆ ತಮ್ಮ ಮಾರುತಿ ಅಲ್ಟೋ ಕಾರಿನಲ್ಲಿ ಆಗಮಿಸಿದ ಸರಳತೆ ಮೆರೆದ ಮುಖ್ಯಮಂತ್ರಿ!
ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಇದ್ದ ಏಕೈಕ ರಾಜ್ಯಸಭಾ ಸೀಟನ್ನು ನಿನ್ನೆ ಬಿಜೆಪಿ ಗೆದ್ದಿತ್ತು. ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದರು. ಕಾಂಗ್ರೆಸ್‌ನ ಆರು ಶಾಸಕರ ಅಡ್ಡಮತದಾನದಿಂದಾಗಿ ಸಿಂಘ್ವಿ ಸೋಲನುಭವಿಸಬೇಕಾಯಿತು. ಹಿಮಾಚಲದಲ್ಲಿ ಆಡಳಿತದಲ್ಲಿರುವ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂಬುದನ್ನು ರಾಜ್ಯಸಭಾ ಚುನಾವಣೆ ಖಚಿತಪಡಿಸಿದೆ ಎಂದ ಠಾಕೂರ್ ಅವರು ಹಿಮಾಚಲ ಸಿಎಂ ಸುಖ್ವೀಂದರ್ ಸಿಂಗ್ ಸುಖು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನೊಂದೆಡೆ ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ರಾಜೀನಾಮೆ ನಿರ್ಧಾರವು ಕೂಡ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ತೋರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹಿಮಾಚಲ ಕಾಂಗ್ರೆಸ್ ಪಕ್ಷವೂ ತನ್ನ ಸರ್ಕಾರವನ್ನು ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ. ರಾಜೀನಾಮೆ ನೀಡಲು ಮುಂದಾಗಿರುವ ವಿಕ್ರಮಾದಿತ್ಯ ಸಿಂಗ್ ಅವರು ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ಮತ್ತು ಶಿಮ್ಲಾ ಗ್ರಾಮಾಂತರದ ಶಾಸಕರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ