4 ತಿಂಗಳಲ್ಲಿ ಭವ್ಯ ರಾಮ ಮಂದಿರ: ಅಮಿತ್ ಶಾ ಭರವಸೆಗೆ ಏನಂತೀರ?

Published : Dec 16, 2019, 05:05 PM IST
4 ತಿಂಗಳಲ್ಲಿ ಭವ್ಯ ರಾಮ ಮಂದಿರ: ಅಮಿತ್ ಶಾ ಭರವಸೆಗೆ ಏನಂತೀರ?

ಸಾರಾಂಶ

ಇನ್ನು ನಾಲ್ಕು ತಿಂಗಳಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆ| ಶೀಘ್ರ ರಾಮ ಮಂದಿರ ನಿರ್ಮಾಣದ ಭರವಸೆ ನೀಡಿದ ಅಮಿತ್ ಶಾ| 'ಭಾರತೀಯರ ಬೇಡಿಕೆಯಂತೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಶತಸಿದ್ಧ'| ಜನರ ಭಾವನೆಗಳನ್ನು ಗೌರವಿಸುವ ಉದಾರ ಮನಸ್ಸು ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದ ಶಾ|

ಪಾಕುಡ್(ಡಿ.16): ಸುಪ್ರೀಂಕೋರ್ಟ್ ಆದೇಶದನ್ವಯ ಇನ್ನು ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಜಾರ್ಖಂಡ್'ನ ಪಾಕುಡ್'ನಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಶಾ, ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಆದೇಶದ ಪಾಲನೆಗೆ ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ ಎಂದು ಹೇಳಿದರು.


‘ರಾಮಮಂದಿರ ನಿರ್ಮಾಣಕ್ಕೆ ಪ್ರತೀ ಕುಟುಂಬ 11 ರುಪಾಯಿ, ಒಂದು ಕಲ್ಲು ಕೊಡಿ’

ದಶಕಗಳಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಭಾರತೀಯರ ಬೇಡಿಕೆಯಾಗಿದೆ. ಅದರಂತೆ ಇನ್ನು ಕೇವಲ ನಾಲ್ಕು ತಿಂಗಳಲ್ಲಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಅಮಿತ್ ಶಾ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಗೃಹ ಸಚಿವ, ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿ ಮಾಡುವ, ದೇಶವನ್ನು ಸುರಕ್ಷಿತವಾಗಿರುವ ಶಕ್ತಿ ಇಲ್ಲ ಎಂದು ಲೇವಡಿ ಮಾಡಿದರು.

ಅಯೋಧ್ಯೆಯಲ್ಲಿ 1008 ಅಡಿ ಎತ್ತರದ ಚಿನ್ನದ ರಾಮಮಂದಿರ ನಿರ್ಮಾಣ?

ಜನರ ಭಾವನೆಗಳನ್ನು ಗೌರವಿಸುವ ಉದಾರ ಮನಸ್ಸು ಕಾಂಗ್ರೆಸ್ ಪಕ್ಷಕ್ಕಿಲ್ಲ. ಇಲ್ಲದಿದ್ದರೆ ದಶಕಗಳ ಹಿಂದೆಯೇ ರಾಮ ಮಂದಿರ ನಿರ್ಮಾಣವಾಗುತ್ತಿತ್ತು ಎಂದು ಅಮಿತ್ ಶಾ ಗುಡುಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ಸಿಇಒ ವಜಾಕ್ಕೆ ಕೇಂದ್ರ ಸೂಚನೆ ಸಾಧ್ಯತೆ
ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ