ಪಾಕ್‌ ಪ್ರಜೆಗಳ ಹುಡುಕಿ ಹೊರದಬ್ಬಿ: ಸಿಎಂಗಳಿಗೆ ಅಮಿತ್‌ ಶಾ ಫೋನ್‌

Published : Apr 26, 2025, 08:50 AM ISTUpdated : Apr 26, 2025, 09:22 AM IST
ಪಾಕ್‌ ಪ್ರಜೆಗಳ ಹುಡುಕಿ ಹೊರದಬ್ಬಿ: ಸಿಎಂಗಳಿಗೆ ಅಮಿತ್‌ ಶಾ ಫೋನ್‌

ಸಾರಾಂಶ

ಪಹಲ್ಗಾಂ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನಿಯರಿಗೆ ನೀಡಿದ್ದ 14 ರೀತಿಯ ವೀಸಾ ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ಏ.27ರ ಗಡುವಿನೊಳಗೆ ಪಾಕ್‌ ಪ್ರಜೆಗಳು ದೇಶಬಿಡುವುದನ್ನು ಖಚಿತಪಡಿಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. 

ನವದೆಹಲಿ (ಏ.26): ಪಹಲ್ಗಾಂ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನಿಯರಿಗೆ ನೀಡಿದ್ದ 14 ರೀತಿಯ ವೀಸಾ ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ಏ.27ರ ಗಡುವಿನೊಳಗೆ ಪಾಕ್‌ ಪ್ರಜೆಗಳು ದೇಶಬಿಡುವುದನ್ನು ಖಚಿತಪಡಿಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಶುಕ್ರವಾರ ಖುದ್ದಾಗಿ ಕರೆ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಗಡುವು ಮೀರಿ ಯಾವೊಬ್ಬ ಪಾಕಿಯೂ ಭಾರತದಲ್ಲಿ ಇರದಂತೆ ನೋಡಿಕೊಳ್ಳಿ. ಎಲ್ಲರನ್ನೂ ಆದಷ್ಟು ಬೇಗ ಹುಡುಕಿ, ಹೊರಹಾಕಿ’ ಎಂದು ಸೂಚಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಆದೇಶ ಜಾರಿಯನ್ನು ಖಚಿತಪಡಿಸಲು ಮುಂದಾಗಿದ್ದಾರೆ.

ಪಾಕಿಸ್ತಾನದ ವಿರುದ್ಧದ ರಾಜತಾಂತ್ರಿಕ ಕ್ರಮದ ಭಾಗವಾಗಿ, ದೀರ್ಘಾವಧಿ ವೀಸಾ ಪಡೆದಿರುವ ಪಾಕಿಸ್ತಾನದ ಹಿಂದೂಗಳ ಹೊರತಾಗಿ, ಪಾಕ್‌ ಪ್ರಜೆಗಳಿಗೆ ನೀಡಲಾಗಿದ್ದ ಸಾರ್ಕ್‌ ಸೇರಿ ಎಲ್ಲಾ ವೀಸಾಗಳನ್ನು ಏ.27ರಿಂದ ರದ್ದು ಮಾಡಲಾಗಿದೆ.  ಜೊತೆಗೆ, ದೇಶ ತೊರೆಯಲು 48 ಗಂಟೆಗಳ ಗಡುವನ್ನೂ ವಿಧಿಸಲಾಗಿದೆ. ಅದರ ಬೆನ್ನಲ್ಲೇ, ತಮ್ಮ ವ್ಯಾಪ್ತಿ ಪ್ರದೇಶದಲ್ಲಿ ಯಾವೊಬ್ಬ ಪಾಕ್‌ ಪ್ರಜೆಯೂ ಉಳಿಯದಂತೆ ನೋಡಿಕೊಳ್ಳಿ ಎಂದು ಸಿಎಂಗಳಿಗೆ ಅಮಿತ್‌ ಶಾ ಸೂಚನೆ ನೀಡಿದ್ದಾರೆ.

ಸರ್ವಪಕ್ಷಗಳ ಒತ್ತಾಯ: ಪಹಲ್ಗಾಂ ದಾಳಿ ಸಂಬಂಧ ಸರ್ವಪಕ್ಷ ಸಭೆ ನಡೆದಿದ್ದು, ಈ ವೇಳೆ, ‘ಉಗ್ರರ ಎಲ್ಲಾ ಶಿಬಿರಗಳನ್ನು ನಾಶಪಡಿಸಿ’ ಎಂದು ಎಲ್ಲಾ ಪಕ್ಷದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ ಹಾಗೂ ‘ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಸರ್ಕಾರದೊಂದಿಗೆ ನಿಲ್ಲುತ್ತೇವೆ’ ಎಂಬ ಭರವಸೆಯನ್ನೂ ನೀಡಿದ್ದಾರೆ. ಉಗ್ರದಾಳಿಯಲ್ಲಿ ಅಸುನೀಗಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ಸಭೆ ಆರಂಭವಾಗಿದ್ದು, ಸರ್ಕಾರ ದಾಳಿಯ ಕುರಿತು ಸಂಪೂರ್ಣ ಚಿತ್ರಣವನ್ನು ಸರ್ಕಾರ ನೀಡಿತು. 

ಪಹಲ್ಗಾಂ ರಕ್ಕಸರಿಗಾಗಿ ಕಾರ್ಯಾಚರಣೆ: ಉಗ್ರಗಾಮಿಗಳ ಬೇಟೆ ಶುರು

ಇದರ ಆಧಾರದಲ್ಲಿ ಎಲ್ಲಾ ಪಕ್ಷಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿವೆ. ಸರ್ಕಾರದ ಪರವಾಗಿ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌, ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಉಪಸ್ಥಿತರಿದ್ದರು. ಅಂತೆಯೆ, ಕಾಂಗ್ರೆಸ್‌, ಎನ್‌ಸಿಪಿ, ಎಂಐಎಂ, ಬಿಜೆಡಿ, ಆಪ್‌ ಡಿಎಂಕೆ ಸೇರಿದಂತೆ ಪ್ರಮುಖ ಪಕ್ಷಗಳ ನಾಯಕರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?