ಸಹಕಾರಿ ಒಕ್ಕೂಟಗಳೊಂದಿಗೆ ಅಮೂಲ್ ವಿಲೀನ: ಅಮಿತ್ ಷಾ

Published : Oct 10, 2022, 04:16 PM IST
ಸಹಕಾರಿ ಒಕ್ಕೂಟಗಳೊಂದಿಗೆ ಅಮೂಲ್ ವಿಲೀನ: ಅಮಿತ್ ಷಾ

ಸಾರಾಂಶ

ಹೈನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಗೆ ಕಾರಣವಾದ ಗುಜರಾತ್ ಸಹಕಾರಿ ಹಾಲು ಒಕ್ಕೂಟ ಅಮೂಲ್ ಹಾಲು ಒಕ್ಕೂಟವನ್ನು ರಾಜ್ಯದ ಇತರ ಐದು ಹಾಲು ಒಕ್ಕೂಟದೊಂದಿಗೆ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಷಾ ಹೇಳಿದ್ದಾರೆ.

ಗುವಾಹಟಿ: ಹೈನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಗೆ ಕಾರಣವಾದ ಗುಜರಾತ್ ಸಹಕಾರಿ ಹಾಲು ಒಕ್ಕೂಟ ಅಮೂಲ್ ಹಾಲು ಒಕ್ಕೂಟವನ್ನು ರಾಜ್ಯದ ಇತರ ಐದು ಹಾಲು ಒಕ್ಕೂಟದೊಂದಿಗೆ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಷಾ ಹೇಳಿದ್ದಾರೆ. ಅವರು ಗುವಾಹಟಿಯಲ್ಲಿ ನಡೆದ ಈಶಾನ್ಯ ಸಹಕಾರ ಪರಿಷತ್ತಿನ (ಎನ್‌ಇಸಿ) 70 ನೇ ಸಭೆಯಲ್ಲಿ ಸರ್ವಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ವಿಲೀನ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಶಾ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ನೈಸರ್ಗಿಕ ಉತ್ಪನ್ನಗಳ ಪ್ರಮಾಣೀಕರಣಕ್ಕಾಗಿ ನೈಸರ್ಗಿಕ ಮತ್ತು ಡಿಜಿಟಲ್ ಕೃಷಿಗೆ ಆದ್ಯತೆ ನೀಡುತ್ತಿದೆ  ಎಂದು ಇದೇ ಕಾರ್ಯಕ್ರಮದಲ್ಲಿ ಹೇಳಿದರು. ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ನೈಸರ್ಗಿಕ ಸಾವಯವ ಕೃಷಿ ಮತ್ತು ಡಿಜಿಟಲ್ ಕೃಷಿಗೆ ಆದ್ಯತೆ ನೀಡುತ್ತಿದೆ. ನೈಸರ್ಗಿಕ ಉತ್ಪನ್ನಗಳ ಪ್ರಮಾಣೀಕರಣಕ್ಕಾಗಿ ಅಮುಲ್ ಮತ್ತು ಇತರ ಐದು ಸಹಕಾರ ಸಂಘಗಳನ್ನು ವಿಲೀನಗೊಳಿಸಿ ಬಹು-ರಾಜ್ಯ ಸಹಕಾರಿ ಸಂಘವನ್ನು ರಚಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಅಮಿತ್ ಷಾ  ಹೇಳಿದರು. 

ಕೋಲಾರ-ಚಿಕ್ಕಬಳ್ಳಾಪುರ ಗೋಲ್ಡನ್ ಡೈರಿ ಫೈಟ್!
ಎಂಎಸ್‌ಸಿಎಸ್ ತನ್ನ ಪ್ರಮಾಣೀಕರಣದ ನಂತರ ಉತ್ಪನ್ನಗಳ ರಫ್ತು ಮಾಡುವುದನ್ನು ಖಚಿತಪಡಿಸುತ್ತದೆ ಇದರಿಂದ ಲಾಭವು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹೋಗುತ್ತದೆ ಎಂದು ಅವರು ಹೇಳಿದರು. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ತನ್ನ ಉತ್ಪನ್ನಗಳನ್ನು ಅಮುಲ್ ಬ್ರಾಂಡ್‌ನಲ್ಲಿ ಮಾರಾಟ ಮಾಡುತ್ತದೆ. ಇದಕ್ಕೂ ಮುನ್ನ ಶುಕ್ರವಾರ ಗ್ಯಾಂಗ್‌ಟಾಕ್‌ನಲ್ಲಿ ನಡೆದ ಈಶಾನ್ಯ ಸಹಕಾರಿ ಡೈರಿ ಸಮಾವೇಶದಲ್ಲಿ ಮಾತನಾಡಿದ ಶಾ, ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಹಾಲಿನ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು. ಕೇವಲ ದೇಶೀಯ ಮಾರುಕಟ್ಟೆಯಲ್ಲಿನ ಬೇಡಿಕೆಯನ್ನು ಪೂರೈಸಲು ಮಾತ್ರವಲ್ಲದೆ ನೆರೆಹೊರೆಯ ದೇಶಗಳ ಬೇಡಿಕೆಯನ್ನು ಪೂರೈಸುವ ಗುರಿ ತಲುಪಬೇಕು ಎಂದು ಅವರು ಹೇಳಿದ್ದಾರೆ. 

ಅಮಿತ್‌ ಶಾ ಚಪ್ಪಲಿ ಎತ್ತಿಕೊಟ್ಟ ತೆಲಂಗಾಣ ಬಿಜೆಪಿ ಮುಖ್ಯಸ್ಥ: ಗುಜರಾತಿಗಳ ಗುಲಾಮ ಎಂದ ಟಿಆರ್‌ಎಸ್‌


ಭೂತಾನ್ (Bhutan), ನೇಪಾಳ, ಬಾಂಗ್ಲಾದೇಶ (Bangladesh) ಮತ್ತು ಶ್ರೀಲಂಕಾದಂತಹ (Sri Lanka) ದೇಶಗಳಿಗೆ ಹಾಲನ್ನು ತಲುಪಿಸಲು ನಮಗೆ ದೊಡ್ಡ ಅವಕಾಶವಿದೆ ಮತ್ತು ಈ ವಿಶ್ವ ಮಾರುಕಟ್ಟೆಯನ್ನು ತಲುಪಲು ಸರ್ಕಾರವು ರಫ್ತು ಕೇಂದ್ರವಾಗಿ ಕಾರ್ಯನಿರ್ವಹಿಸುವ ಬಹು-ರಾಜ್ಯ ಸಹಕಾರಿ ಸಂಸ್ಥೆಯನ್ನು ಸ್ಥಾಪಿಸುತ್ತಿದೆ ಎಂದು ಅವರು ಹೇಳಿದ್ದರು. ಭಾರತೀಯ ಆರ್ಥಿಕತೆಯು ಪ್ರಸ್ತುತ ವಿಶ್ವದಲ್ಲಿ ಐದನೇ ಸ್ಥಾನದಲ್ಲಿದೆ ಮತ್ತು ಈಶಾನ್ಯ ರಾಜ್ಯಗಳ (Northeastern states) ಆರ್ಥಿಕತೆಯು ಭಾರತವೂ ವಿಶ್ವದಲ್ಲಿ ಎರಡನೇ ಸ್ಥಾನವನ್ನು ಗಳಿಸಲು ಕೊಡುಗೆ ನೀಡುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿತ್ತು.

ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳು ಪ್ರವಾಹ ನಿಯಂತ್ರಣ, ನೀರಾವರಿ (irrigation), ಪ್ರವಾಸೋದ್ಯಮ (tourism) ಹಾಗೂ ರಾಜ್ಯದಲ್ಲಿ ಅರಣ್ಯೀಕರಣ ಮತ್ತು ಕೃಷಿಗಾಗಿ (agriculture) NESAC ಅನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಮತ್ತು ಅದರ ಗರಿಷ್ಠ ಮತ್ತು ಉತ್ತಮ ಬಳಕೆಗಾಗಿ ತಮ್ಮ ರಾಜ್ಯಗಳಲ್ಲಿ NESAC ಗೆ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಅಮಿತ್ ಷಾ ಒತ್ತಾಯಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು
ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ