‘ಗಾಂಧಿ ಕುಟುಂಬ ಸೇರಿದಂತೆ ಎಲ್ಲ ಭಾರತೀಯರ ರಕ್ಷಣೆ ನಮ್ಮ ಜವಾಬ್ದಾರಿ’!

Published : Dec 03, 2019, 05:05 PM IST
‘ಗಾಂಧಿ ಕುಟುಂಬ ಸೇರಿದಂತೆ ಎಲ್ಲ ಭಾರತೀಯರ ರಕ್ಷಣೆ ನಮ್ಮ ಜವಾಬ್ದಾರಿ’!

ಸಾರಾಂಶ

ಗಾಂಧಿ ಪರಿವಾರಕ್ಕೆ ಎಸ್’ಪಿಜಿ ಭದ್ರತೆ ವಾಪಸ್ ಪಡೆದ ಹಿನ್ನೆಲೆ| ಪ್ರಿಯಾಂಕಾ ಗಾಂಧಿ ಮನೆಗೆ ನುಗ್ಗಿದ ಆಗುಂತಕ ಕಾರು| ಭದ್ರತೆ ವಾಪಸ್ ಪಡೆದಿದ್ದಕ್ಕೆ ಸದನದಲ್ಲಿ ಕಾಂಗ್ರೆಸ್ ತೀವ್ರ ಪ್ರತಿಭಟನೆ| ‘ಗಾಂಧಿ ಪರಿವಾರವೂ ಸೇರಿದಂತೆ ಎಲ್ಲ ನಾಗರಿಕರ ರಕ್ಷಣೆ ನಮ್ಮ ಜವಾಬ್ದಾರಿ’| ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ| ಭದ್ರತಾ ಲೋಪದ ಆರೋಪದ ಮೇಲೆ ಮೂವರು ಸಿಬ್ಬಂದಿ ಅಮಾನತು|

ನವದೆಹಲಿ(ಡಿ.03): ಗಾಂಧಿ ಪರಿವಾರವೂ ಸೇರಿದಂತೆ ದೇಶದ ಎಲ್ಲ ನಾಗರಿಕರ ರಕ್ಷಣೆ ಸರ್ಕಾರದ ಜವಾಬ್ದಾರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗಾಂಧಿ ಕುಟುಂಬಕ್ಕೆ ನೀಡಲಾಗಿದ್ದ ಎಸ್’ಪಿಜಿ ಭದ್ರತೆ ವಾಪಸ್ ಪಡೆದ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಭದ್ರತೆ ವಾಪಸ್ ಪಡೆದಿದ್ದಕ್ಕೆ ಯಾರೂ ಹೆದರಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ನವದೆಹಲಿಯ ಪ್ರಿಯಾಂಕಾ ಗಾಂಧಿ ವಾದ್ರಾ ಮನೆ ಒಳಗೆ ಕಾರಿನಲ್ಲಿ ಆಗುಂತಕರು ಬಂದ ಕುರಿತು ಸ್ಪಷ್ಟನೆ ನೀಡಿದ ಅಮಿತ್ ಶಾ, ಅದೇ ಸಮಯದಲ್ಲಿ ರಾಹುಲ್ ಗಾಂಧಿ ಕೂಡ ಪ್ರಿಯಾಂಕಾ ಮನೆಗೆ ಬರುವವರಿದ್ದರು ಎಂದು ಹೇಳಿದರು.

SPG ಭದ್ರತೆ ಹಿಂತೆಗೆತ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಮನೆಗೆ 7 ಜನ ಅಪರಿಚಿತರ ಪ್ರವೇಶ!

ಘಟನೆಗೆ ಸಂಬಂಧಿಸಿದಂತೆ ಭದ್ರತಾ ಲೋಪದ ಆರೋಪದ ಮೇಲೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದರು.

ಗಾಂಧಿ ಪರಿವಾರಕ್ಕೆ ಎಸ್’ಪಿಜಿ ಭಧ್ರತೆ ವಾಪಸ್ ಪಡೆದ ಸರ್ಕಾರದ ಕ್ರಮ ಖಂಡಿಸಿ ಸದನದಲ್ಲಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಸದನಕ್ಕೆ ಉತ್ತರ ನೀಡಿದ ಅಮಿತ್ ಶಾ, ಗಾಂಧಿ ಪರಿವಾರವೂ ಸೇರಿದಂತೆ ದೇಶದ ಎಲ್ಲ ನಾಗರಿಕರ ರಕ್ಷಣೆ ನಮ್ಮ ಹೊಣೆ ಎಂದು ಮಾರ್ಮಿಕವಾಗಿ ಹೇಳಿದರು.

ಇನ್ನು ರಾಜ್ಯಸಭೆಯಲ್ಲಿ ಎಸ್‌ಪಿಜಿ ಭದ್ರತೆ ತಿದ್ದುಪಡಿ ಮಸೂದೆ ಪಾಸಾಗಿದ್ದು, ಗಾಂಧಿ ಪರಿವಾರವನ್ನು ಗುರಿಯಾಗಿಸಿಕೊಂಡು ಮಸೂದೆಗೆ ತಿದ್ದುಪಡಿ ತಂದಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ಸಿಇಒ ವಜಾಕ್ಕೆ ಕೇಂದ್ರ ಸೂಚನೆ ಸಾಧ್ಯತೆ
ಗುಲಾಮಿ ಮನಃಸ್ಥಿತಿ ಬಿಡಲು 2035ರ ಗಡುವು : ಮೋದಿ