ಬಿಜೆಪಿ ಅಧಿಕಾರಕ್ಕೆ ಬಂದರೆ, ಯೋಗಿ ಬದಿಗೆ ಸರಿಸಿ ಅಮಿತ್‌ ಶಾ ಪಿಎಂ ಆಗ್ತಾರೆ: ಅರವಿಂದ್ ಕೇಜ್ರಿವಾಲ್‌!

By Santosh Naik  |  First Published May 11, 2024, 4:27 PM IST

ಇನ್ನು ಎರಡು ತಿಂಗಳೊಳಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಯೋಗಿ ಆದಿತ್ಯನಾಥ್ ಕಳೆದುಕೊಳ್ಳಲಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.


ನವದೆಹಲಿ (ಮೇ.11):  ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬದಿಗೆ ಸರಿಸಿ ಗೃಹ ಸಚಿವ ಅಮಿತ್ ಶಾ ಭಾರತದ ಪ್ರಧಾನಿಯಾಗುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. ಈ ವರ್ಷ 75ನೇ ವರ್ಷಕ್ಕೆ ಕಾಲಿಡಲಿರುವ ಕಾರಣ ಪ್ರಧಾನಿ ಮೋದಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದಲಿದ್ದಾರೆ ಎಂದು ಹೇಳಿದ್ದಾರೆ. ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಒಂದು ದಿನದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಬಿಜೆಪಿ ಮತ್ತೆ ಕೇಂದ್ರದಲ್ಲಿ ಸರ್ಕಾರ ರಚಿಸಿದರೆ, ಎಲ್ಲಾ ಪ್ರಮುಖ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡು ತಿಂಗಳೊಳಗೆ ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಅವರು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳಿಸುತ್ತಾರೆ. ಬಿಜೆಪಿ ಪ್ರಮುಖ ನಾಯಕರ ರಾಜಕೀಯವನ್ನು ಕೊನೆ ಮಾಡುತ್ತಾರೆ. . ನಮ್ಮ ಸಚಿವರು, ಹೇಮಂತ್ ಸೋರೆನ್, ಮಮತಾ ಬ್ಯಾನರ್ಜಿ ಪಕ್ಷದ ಸಚಿವರು ಜೈಲಿನಲ್ಲಿದ್ದಾರೆ. ಅವರು ಮತ್ತೆ ಗೆದ್ದರೆ, ನಂತರ ಮಮತಾ ಬ್ಯಾನರ್ಜಿ, ಎಂಕೆ ಸ್ಟಾಲಿನ್, ತೇಜಸ್ವಿ ಯಾದವ್, ಪಿಣರಾಯಿ ವಿಜಯನ್, ಉದ್ಧವ್ ಠಾಕ್ರೆ ಮತ್ತು ಇತರ ವಿರೋಧ ಪಕ್ಷದ ನಾಯಕರೆಲ್ಲರೂ ಜೈಲಿನಲ್ಲಿರುತ್ತಾರೆ. ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೆ, ಎಂಎಲ್ ಖಟ್ಟರ್, ರಮಣ್ ಸಿಂಗ್ ಅವರ ರಾಜಕೀಯ ಮುಗಿದಿದೆ. ಈ ಚುನಾವಣೆಯಲ್ಲಿ ಗೆದ್ದರೆ 2 ತಿಂಗಳೊಳಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಅವರನ್ನು ಬದಲಾವನೆ ಮಾಡಲಿದ್ದಾರೆ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

75 ವರ್ಷ ತುಂಬಿದ ನಂತರ ಯಾವುದೇ ನಾಯಕ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಿಲ್ಲ ಎಂಬ ಬಿಜೆಪಿ ಅಲಿಖಿತ ನಿಯಮವನ್ನು ಉಲ್ಲೇಖಿಸಿದ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ಸೆಪ್ಟೆಂಬರ್ 17 ರಂದು 75 ವರ್ಷ ಪೂರ್ಣ ಮಾಡಲಿದ್ದಾರೆ. ಆ ಬಳಿಕ ಪ್ರಧಾನಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ ಎಂದಿದ್ದಾರೆ.

"ಈ ಜನರು ನಿಮ್ಮ ಪ್ರಧಾನಿ ಯಾರು ಎಂದು ಭಾರತ ಮೈತ್ರಿಕೂಟವನ್ನು ಕೇಳುತ್ತಾರೆ, ನಾನು ಬಿಜೆಪಿಗೆ ನಿಮ್ಮ ಪ್ರಧಾನಿ ಯಾರು ಎಂದು ಕೇಳುತ್ತೇನೆ? ಪಿಎಂ ಮೋದಿ ಸೆಪ್ಟೆಂಬರ್ 17 ರಂದು 75 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ, ಬಿಜೆಪಿಯಲ್ಲಿ 75 ವರ್ಷಗಳ ನಂತರ ಪಕ್ಷದಲ್ಲಿನ ನಾಯಕರು ನಿವೃತ್ತರಾಗುತ್ತಾರೆ. ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಮಿತ್ರಾ ಮಹಾಜನ್ ಮತ್ತು ಯಶವಂತ್ ಸಿನ್ಹಾ ಅವರು ನಿವೃತ್ತರಾಗುವಂತೆ ಒತ್ತಾಯಿಸಲಾಯಿತು ಮತ್ತು ಈಗ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 17 ರಂದು ನಿವೃತ್ತರಾಗಲಿದ್ದಾರೆ, ”ಎಂದು ಅವರು ಹೇಳಿದ್ದಾರೆ.
ಬಿಜೆಪಿ ಮೊದಲು ಯೋಗಿ ಆದಿತ್ಯನಾಥ್ ಅವರನ್ನು ಇವರು ಬದಿಗೆ ಸರಿಸಲಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪಿಎಂ ಮೋದಿ ಅವರು ಅಮಿತ್ ಶಾಗೆ ಮತ ಕೇಳುತ್ತಿದ್ದಾರೆ, ಅಮಿತ್ ಶಾ ಮೋದಿ ಅವರ ಭರವಸೆಯನ್ನು ಪೂರೈಸುತ್ತಾರೆಯೇ?" ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಕೇಜ್ರಿವಾಲ್ ಜಾಮೀನಿಗೆ ಪಾಕಿಸ್ತಾನದಲ್ಲಿ ಸಂಭ್ರಮ, ಮೋದಿಗೆ ಮತ್ತೊಂದು ಸೋಲು ಎಂದ ಪಾಕ್ ಮಾಜಿ ಸಚಿವ!

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಎಎಪಿ ಮುಖ್ಯಸ್ಥ ಒಂಬತ್ತು ಸಮನ್ಸ್‌ಗೆ ಪ್ರತಿಕ್ರಿಯೆ ನೀಡದೇ ಇದ್ದಾಗ ಅವರನ್ನು ಬಂಧಿಸಲಾಗಿತ್ತು.ದೆಹಲಿ ಹೈಕೋರ್ಟ್ ಕಳೆದ ತಿಂಗಳು ಇಡಿ ಕ್ರಮವನ್ನು ಎತ್ತಿಹಿಡಿದ ನಂತರ, ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಶುಕ್ರವಾರ ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ತಿಹಾರ್ ಜೈಲಿಗೆ ಮರಳಬೇಕಾಗುತ್ತದೆ.

Latest Videos

ಸರ್ವಾಧಿಕಾರದಿಂದ ದೇಶ ರಕ್ಷಿಸುವೆ: ಬಂಧಮುಕ್ತ ಕೇಜ್ರಿವಾಲ್‌ ಘೋಷಣೆ

ಗೋರಖ್‌ಪುರದ ಮಾಜಿ ಸಂಸದ ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರು. 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರ ನಾಯಕತ್ವದಲ್ಲಿ ಬಿಜೆಪಿ ಜಯಗಳಿಸಿತು. ಪ್ರಧಾನಿ ನರೇಂದ್ರ ಮೋದಿ ನಂತರ, ಯೋಗಿ ಆದಿತ್ಯನಾಥ್‌ ಹಿಂದುತ್ವದ ಪ್ರಮುಖ ಮುಖವಾಗಿದ್ದಾರೆ.

click me!