Lok Sabha Elections 2024: ಕಾಂಗ್ರೆಸ್‌ ಗೆದ್ದರೆ ಅಯೋಧ್ಯೆಗೆ ಬಾಬ್ರಿ ಬೀಗ: ಅಮಿತ್ ಶಾ ಗುಡುಗು

By Kannadaprabha News  |  First Published May 9, 2024, 7:03 AM IST

‘ಈ ಬಾರಿಯ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿ ಒಂದು ವೇಳೆ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಬ್ರಿ ಬೀಗವನ್ನು ಹಾಕಲಾಗುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಗುಡುಗಿದ್ದಾರೆ. 
 


ಲಖೀಂಪುರ ಖೇರಿ (ಉ.ಪ್ರ) (ಮೇ.09): ‘ಈ ಬಾರಿಯ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿ ಒಂದು ವೇಳೆ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಬ್ರಿ ಬೀಗವನ್ನು ಹಾಕಲಾಗುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಗುಡುಗಿದ್ದಾರೆ. ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಶಾ, ರಾಮ ಮಂದಿರ ನಿಷ್ಪ್ರಯೋಜಕ ಎನ್ನುವ ಅರ್ಥದಲ್ಲಿ ಮಾತನಾಡಿದ್ದ ಎಸ್‌ಪಿ ನಾಯಕ ರಾಮ್ ಗೋಪಾಲ್ ಯಾದವ್ ಮಾತನ್ನು ಉಲ್ಲೇಖಿಸಿ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. 

‘ರಾಮ್ ಗೋಪಾಲ್ ಯಾದವ್, ಮಂದಿರ ನಿಷ್ಪ್ರಯೋಜಕ ಎನ್ನುತ್ತಾರೆ. ನೆನಪಿಟ್ಟುಕೊಳ್ಳಿ, ಅದು ಆಗದಿದ್ದರೂ ವಿಪಕ್ಷಗಳು ಅಧಿಕಾರಕ್ಕೆ ಬಂದರೆ, ಅವರು ಮಂದಿರಕ್ಕೆ ಬಾಬ್ರಿ ಬೀಗ ಹಾಕುತ್ತಾರೆ. ಕಾಂಗ್ರೆಸ್‌ನವರು 70 ವರ್ಷಗಳಿಂದ ಮಂದಿರದ ವಿವಾದವನ್ನು ಹಾಗೆಯೇ ಮುಂದುವರೆಸಿಕೊಂಡು ಬಂದಿದ್ದರು. ಅವರ ಮತಬ್ಯಾಂಕ್ ಯಾರೆಂದು ಎಲ್ಲರಿಗೂ ತಿಳಿದಿದೆ. ಶ್ರೀರಾಮನ ಕೆಲಸದಿಂದ ಹಿಂದೆ ಸರಿಯುವವರನ್ನು ಉತ್ತರ ಪ್ರದೇಶ ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಶಾ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

Tap to resize

Latest Videos

undefined

ಸೋನಿಯಾ 20 ಸಲ ವಿಫಲ ಪ್ರಯತ್ನ: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಹುಲ್‌ ಗಾಂಧಿ ಅವರನ್ನು 20 ಬಾರಿ ರಾಜಕೀಯದಲ್ಲಿ ಲಾಂಚ್‌ ಮಾಡಲು ಪ್ರಯತ್ನಿಸಿದರು. ಆದರೆ ಪ್ರತಿ ಪ್ರಯತ್ನದಲ್ಲೂ ಅವರಿಗೆ ಸೋಲಾಯಿತು. ಇದೀಗ ಇದೀಗ ರಾಹುಲ್‌ ಗಾಂಧಿ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದು, ಈ ಬಾರಿಯೂ ಅವರನ್ನು ರಾಜಕೀಯ ಮುನ್ನಲೆಗೆ ತರುವ ಪ್ರಯತ್ನ ವಿಫಲವಾಗಲಿದೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ವ್ಯಂಗ್ಯವಾಡಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ನಡೆಸಿ ಮಾತನಾಡಿದರು.

ಹಿಂದೂ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ: ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್‌

ಒಂದು ಕಡೆ ಮೋದಿ ಮೊದಲ ಪ್ರಯತ್ನದಲ್ಲೇ ಚಂದ್ರಯಾನ-3 ಉಡ್ಡಯನ ಯಶಸ್ವಿಯಾಗಿದೆ. ಇನ್ನೊಂದು ಕಡೆ ಸೋನಿಯಾ ಗಾಂಧಿ ಅವರು ರಾಹುಲ್‌ ಯಾನದ ಉಡ್ಡಯನ (ರಾಜಕೀಯ ಮುನ್ನಲೆಗೆ ತರುವ ಪ್ರಯತ್ನ)ಕ್ಕೆ ಸುಮಾರು 20 ಬಾರಿ ಪ್ರಯತ್ನ ಮಾಡಿದರು. ಆದರೆ ಪ್ರತಿ ಬಾರಿಯೂ ಅವರ ಯೋಜನೆ ವಿಫಲವಾಯಿತು. ಇದೀಗ 21ನೇ ಪ್ರಯತ್ನದ ಭಾಗವಾಗಿ ರಾಹುಲ್ ಗಾಂಧಿ ಅವರು ಅಮೇಥಿಯಿಂದ ರಾಯ್‌ಬರೇಲಿಗೆ ಪರಾರಿಯಾಗಿದ್ದಾರೆ. ಆದರೆ ರಾಯ್‌ಬರೇರಿಯಲ್ಲೂ ಅವರು ಸೋಲಲಿದ್ದಾರೆ. ಬಿಜೆಪಿ ಅಭ್ಯರ್ಥಿ ಅವರು ದೊಡ್ಡ ಅಂತರದಿಂದ ಗೆಲ್ಲಲಿದ್ದಾರೆ ಎಂದು ಶಾ ಭವಿಷ್ಯ ನುಡಿದರು.

click me!