ಪುಣೆ: ಕ್ರಿಕೆಟ್ ಆಡುವ ವೇಳೆ ಜನನಾಂಗಕ್ಕೆ ಕ್ರಿಕೆಟ್ ಬಾಲ್ ಬಡಿದು 11 ವರ್ಷದ ಬಾಲಕ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಸ್ನೇಹಿತರ ಜೊತೆಗೆ ಕ್ರಿಕೆಟ್ ಆಡುವ ವೇಳೆ ಈ ದುರಂತ ನಡೆದಿದ್ದು, ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ ಬಾಲಕನನ್ನು ಶಂಭು ಕಾಳಿದಾಸ್ ಖಂಡ್ವೆ ಅಲಿಯಶ್ ಶೌರ್ಯ ಎಂದು ಗುರುತಿಸಲಾಗಿದೆ.
ಬೇಸಿಗೆ ರಜಾದಿನಗಳಾಗಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಇದ್ದು, ಈ ಬಾಲಕ ಕೂಡ ಓರಗೆಯ ಸ್ನೇಹಿತರೊಂದಿಗೆ ಕ್ರಿಕೆಟ್ ಆಟ ಆಡುತ್ತಾ ರಜಾ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾಗ ಈ ದುರಂತ ನಡೆದಿದೆ. ಶೌರ್ಯ ಬೌಲಿಂಗ್ ಮಾಡುತ್ತಿದ್ದು, ಈ ವೇಳೆ ಬ್ಯಾಟರ್ ಹೊಡೆದ ಬಾಲ್ ಸೀದಾ ಬಂದು ಶೌರ್ಯನ ಖಾಸಗಿ ಭಾಗಕ್ಕೆ ಬಡಿದಿದೆ ಪರಿಣಾಮ ನೋವು ತಡೆಯಲಾಗದೇ ಬಾಲಕ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಈತನ ಸ್ನೇಹಿತರೆಲ್ಲಾ ಅಲ್ಲಿಗೆ ಬಂದು ಆತನನ್ನು ಮಾತನಾಡಿಸಿ ಆರೈಕೆ ಮಾಡಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಪ್ರಜ್ಞಾಶೂನ್ಯನಾಗಿದ್ದಾನೆ. ಕೂಡಲೇ ಅಲ್ಲಿದ್ದ ಇತರರು ಸೇರಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಿಸಿದ ಸ್ವಲ್ಪ ಹೊತ್ತಿನಲ್ಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ತಲೆಗೆ ಚೆಂಡು ಬಡಿದು ಮೈದಾನದಲ್ಲೇ ಕುಸಿದು ಬಿದ್ದ ಟೀಂ ಇಂಡಿಯಾ ವೇಗಿ
ಪುಣೆಯ ಲೋಹೆಗಾಂವ್ ಪ್ರದೇಶದ ಮೈದಾನವೊಂದರಲ್ಲಿ ಈ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಸಹಜ ಸಾವು ಪ್ರಕರಣ ದಾಖಲಾಗಿದೆ.ಘಟನೆಯ ದೃಶ್ಯಾವಳಿಗಳು ಅಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಬಾಲಕ ಬಾಲ್ ಬಡಿದ ಕೆಲ ಸೆಕೆಂಡ್‌ಗಳಲ್ಲಿ ಕೆಳಗೆ ಬೀಳುತ್ತಿರುವುದು ಹಾಗೂ ಬ್ಯಾಟಿಂಗ್ ಮಾಡುತ್ತಿದ್ದ ಬಾಲಕ ಆತನನ್ನು ಎದ್ದೇಳಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ.
ಬಾಲ್ ಟ್ಯಾಂಪರಿಂಗ್: ಮತ್ತೊಬ್ಬ ಕ್ರಿಕೆಟಿಗ ಬ್ಯಾನ್..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ