ಕರ್ನಾಟಕದಲ್ಲಿ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿರುವ ವಕ್ಫ್ ಆಸ್ತಿ ವಿವಾದದ ಕುರಿತು ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಪ್ರಸ್ತಾಪ ಮಾಡಿದ್ದಾರೆ.
ಸಾಂಗ್ಲಿ (ನ.09): ಕರ್ನಾಟಕದಲ್ಲಿ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿರುವ ವಕ್ಫ್ ಆಸ್ತಿ ವಿವಾದದ ಕುರಿತು ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಪ್ರಸ್ತಾಪ ಮಾಡಿದ್ದಾರೆ. ಜೊತೆಗೆ ಕರ್ನಾಟಕದ ಬೆಳವಣಿಗೆ ಮುಂದಿಟ್ಟುಕೊಂಡು, ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಇಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಶುಕ್ರವಾರ ಚುನಾವಣಾ ಪ್ರಚಾರ ಮಾಡಿ ಮಾತನಾಡಿದ ಅಮಿತ್ ಶಾ, ‘ಬಾಳಾ ಸಾಹೇಬ್ ಠಾಕ್ರೆ ಬಗ್ಗೆ ಮಾತನಾಡುವ ಅವರ ಪುತ್ರ ಉದ್ಧವ್ ಠಾಕ್ರೆ, ಔರಂಗಾಬಾದ್ ಹೆಸರು ಬದಲಾವಣೆ ಪ್ರಸ್ತಾಪ ವಿರೋಧಿಸಿದರು. ಇದೀಗ ಅವರು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧ ಮಾಡುವವರ ಜೊತೆ ಕೈ ಜೋಡಿಸಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ ಒಂದಿಡೀ ಹಳ್ಳಿಯನ್ನೇ ವಕ್ಫ್ ಮಂಡಳಿ ಆಸ್ತಿಯೆಂದು ಘೋಷಿಸಲಾಗಿತ್ತು. ಹಾಗಿದ್ದರೆ ಹೇಳಿ, ನಾವು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಬೇಕೇ? ಬೇಡವೇ’ ಎಂದು ಪ್ರಶ್ನಿಸಿದರು.
undefined
ಕೆನಡಾಕ್ಕೆ ಭಾರತ ಎಚ್ಚರಿಕೆ: ‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ’ ಎಂಬ ಕೆನಡಾ ಸಚಿವ ಡೇವಿಡ್ ಮಾರಿಸನ್ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂಥ ಅಸಂಬದ್ಧ ಮತ್ತು ಆಧಾರರಹಿತ ಹೇಳಿಕೆಗಳಿಂದ ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ ಉಂಟಾಗಲಿದೆ ಎಂದು ಭಾರತ ಕೆನಡಾಕ್ಕೆ ಎಚ್ಚರಿಕೆ ನೀಡಿದೆ. ಅಲ್ಲದೆ, ‘ಕೆನಡಾದಲ್ಲಿನ ಭಾರತೀಯ ರಾಯಭಾರ ಕಚೇರಿಗಳ ಸಂಭಾಷಣೆ ಕದ್ದಾಲಿಕೆ ಮತ್ತು ಚಲನವಲನಗಳ ಮೇಲೆ ನಿಗಾ ಇಡುವ ಮೂಲಕ ಅವರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಇದು ರಾಜತಾಂತ್ರಿಕ ಒಪ್ಪಂದಗಳಿಗೆ ಪೂರ್ಣ ವಿರುದ್ಧವಾದುದು’ ಎಂಬ ಎಚ್ಚರಿಕೆಯ ಸಂದೇಶವನ್ನೂ ಕೆನಡಾಕ್ಕೆ ರವಾನಿಸಿದೆ.
ಕೊತ್ವಾಲ್ ಬಳಿ ₹100ಕ್ಕೆ ಕೆಲಸ ಮಾಡ್ತಿದ್ದ ಡಿಕೆಶಿ ಎಂದಾದರೂ ಕಣ್ಣೀರು ಹಾಕಿದ್ದಾರಾ?: ಎಚ್.ಡಿ.ದೇವೇಗೌಡ
ಕೆನಡಾ ಸಚಿವ ಮಾರಿಸನ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್, ‘ಸಚಿವ ಡೇವಿಡ್ ಮಾರಿಸನ್ ಇತ್ತೀಚೆಗೆ ಕೆನಡಾದ ಸಾರ್ವಜನಿಕ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸಮಿತಿ ಮುಂದೆ ಹಾಜರಾಗಿ ಭಾರತದ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ ಅಸಂಬದ್ಧ ಮತ್ತು ಆಧಾರರಹಿತ ಹೇಳಿಕೆಯನ್ನು ಭಾರತ ಸರ್ಕಾರ ತೀಕ್ಷ್ಣ ನುಡಿಗಳಲ್ಲಿ ಖಂಡಿಸುತ್ತದೆ. ಜೊತೆಗೆ ಭಾರತದ ಘನತೆಗೆ ಧಕ್ಕೆ ತರುವ ಉದ್ದೇಶಪೂರ್ವಕ ಕಾರ್ಯತಂತ್ರದ ಭಾಗವಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಕೆನಡಾ ಅಧಿಕಾರಿಗಳು ಇಂಥ ಸುದ್ದಿಯನ್ನು ಸೋರಿಕೆ ಮಾಡಿದೆ. ಇದು ಹಾಲಿ ಕೆನಡಾ ಸರ್ಕಾರ ರಾಜಕೀಯ ಕಾರ್ಯಸೂಚಿಸ ಬಗ್ಗೆ ಭಾರತ ಸರ್ಕಾರ ಹೊಂದಿರುವ ನಿಲುವನ್ನು ಮತ್ತಷ್ಟು ಖಾತರಿಪಡಿಸಿದೆ. ಇಂಥ ಬೇಜಾವಾಬ್ದಾರಿ ವರ್ತನೆಗಳು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.