
ಹೈದರಾಬಾದ್ (ಮಾರ್ಚ್ 13, 2023): ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹಿರಿಯ ನಾಯಕ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ನಲ್ಲಾರಿ ಕಿರಣ್ ಕುಮಾರ್ ರೆಡ್ಡಿ ಪಕ್ಷದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಕಿರಣ್ ರೆಡ್ಡಿ ಅವರಿಗೆ ಕೇಂದ್ರದಲ್ಲಿ ಮಹತ್ವದ ಹುದ್ದೆ ಇಲ್ಲವೇ, ಮುಂಬರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಬಿಂಬಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹೈದರಾಬಾದ್ ಪ್ರವಾಸ (Hyderabad Tour) ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಕಿರಣ್ ಕುಮಾರ್ ರೆಡ್ಡಿ (Kiran Kumar Reddy) ಅವರು ಭೇಟಿ ಮಾಡಿದ ಬೆನ್ನಲ್ಲೇ, ಅವರು ರಾಜೀನಾಮೆ (Resign) ಪ್ರಕಟಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಕಿರಣ್ ರೆಡ್ಡಿ, 2009ರಿಂದ 2010ರವರೆಗೆ ಆಂಧ್ರ ಪ್ರದೇಶ (Andhra Pradesh) ವಿಧಾನಸಭೆ ಸ್ಪೀಕರ್ ಆಗಿ (Assembly Speaker), 2010ರಲ್ಲಿ ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿ (Chief Minister) ಸೇವೆ ಸಲ್ಲಿಸಿದ್ದರು.
ಇದನ್ನು ಓದಿ: ಧ್ರುವನಾರಾಯಣ ಅಂತ್ಯಕ್ರಿಯೆ ಮುನ್ನ ಪುತ್ರನಿಗೆ ಕೈ ಟಿಕೆಟ್ ಘೋಷಿಸಿ: ಕಾಂಗ್ರೆಸ್‌ಗೆ ಪೀಕಲಾಟ
ಕೇಂದ್ರದ ಯುಪಿಎ ಸರ್ಕಾರವು (UPA Government) 2014 ರಲ್ಲಿ ಆಂಧ್ರವನ್ನು ವಿಭಜಿಸಿ ಪ್ರತ್ಯೇಕ ತೆಲಂಗಾಣ (Telangana) ರಾಜ್ಯವನ್ನು ರಚಿಸಿದಾಗ ಕಿರಣ್ ಕುಮಾರ್ ರೆಡ್ಡಿ ಮುಖ್ಯಮಂತ್ರಿಯಾಗಿದ್ದರು. ಅವರು ರಾಜ್ಯ ವಿಭಜನೆಯನ್ನು ವಿರೋಧಿಸಿದ್ದರು ಮತ್ತು ವಿಧಾನಸಭೆಯ ಒಳಗೆ ಹಾಗೂ ಹೊರಗೆ ಸಹ ಈ ಕ್ರಮವನ್ನು ವಿರೋಧಿಸಿದ್ದರು. ಈ ವಿಭಜನೆಯಿಂದ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ನಷ್ಟವಾಯಿತು. ಇದು ನಾಯಕರ ದೊಡ್ಡ ವಲಸೆಯನ್ನು ಅನುಭವಿಸಿತು ಮತ್ತು ಆಂಧ್ರಪ್ರದೇಶದಲ್ಲಿ ಪಕ್ಷವು ಒಂದೇ ಒಂದು ಲೋಕಸಭೆ ಅಥವಾ ವಿಧಾನಸಭೆ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.
ಬಳಿಕ ತಮ್ಮದೇ ಆದ ಪ್ರತ್ಯೇಕ ಜೈ ಸಮೈಕ್ಯಾಂದ್ರ ಎಂಬ ಪ್ರಾದೇಶಿಕ ಪಕ್ಷ ಕಟ್ಟಿ 2014ರ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡಿದ್ದರು. 2018ರಲ್ಲಿ ಮರಳಿ ಕಾಂಗ್ರೆಸ್ ಸೇರಿದ್ದರಾದರೂ, ಪಕ್ಷದಲ್ಲಿ ಹೆಚ್ಚು ಸಕ್ರಿಯರಾಗಿರಲಿಲ್ಲ. ಅವರಿಗೆ ಪ್ರಮುಖ ಸಾಂಸ್ಥಿಕ ಪಾತ್ರವನ್ನು ನೀಡಲಾಗುತ್ತದೆ ಎಂಬ ನಿರೀಕ್ಷೆಯಿತ್ತು ಆದರೆ, ಪಕ್ಷ ಅವರನ್ನು ಕಡೆಗಣಿಸಿತ್ತು. ಕಿರಣ್ ಕುಮಾರ್ ರೆಡ್ಡಿಯನ್ನು ಉದಯಪುರ ಚಿಂತನ ಶಿಬಿರಕ್ಕೆ ಆಹ್ವಾನಿಸದಿರುವುದು ಪಕ್ಷದ ಹಲವರಿಗೆ ಅಚ್ಚರಿ ಮೂಡಿಸಿತ್ತು.
ಇದನ್ನೂ ಓದಿ: ಆಲಮಟ್ಟಿಜಂಗಮರ ಕಥೆಯಂಥಾದ ಕಾಂಗ್ರೆಸ್, ಜೆಡಿಎಸ್ ಕನಸು: ಸಚಿವ ಗೋವಿಂದ ಕಾರಜೋಳ
ಇದೀಗ ಅವರು ಮತ್ತೊಮ್ಮೆ ಕಾಂಗ್ರೆಸ್ ತೊರೆದಿದ್ದು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಂದು ಸಾಲಿನ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಹಾಗೂ, ಇವರು ಬಿಜೆಪಿಗೆ ಸೇರ್ಪಡೆಯಾಗುವುದು ಬಹುತೇಕ ಖಚಿತ ಎಂದೂ ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ