ಆಂಧ್ರದಲ್ಲೀಗ ದೇಗುಲಗಳೂ ಕೋವಿಡ್‌ ಆರೈಕೆ ಕೇಂದ್ರಗಳು!

Published : May 19, 2021, 01:19 PM ISTUpdated : May 19, 2021, 01:20 PM IST
ಆಂಧ್ರದಲ್ಲೀಗ ದೇಗುಲಗಳೂ ಕೋವಿಡ್‌ ಆರೈಕೆ ಕೇಂದ್ರಗಳು!

ಸಾರಾಂಶ

* ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಸರ್ಕಾರ ಸೋಂಕು ನಿಗ್ರಹಕ್ಕೆ ಮಹತ್ವದ ಹೆಜ್ಜೆ * ಆಂಧ್ರದಲ್ಲೀಗ ದೇಗುಲಗಳೂ ಕೋವಿಡ್‌ ಆರೈಕೆ ಕೇಂದ್ರಗಳು * ದೇವಾಲಯಗಳಲ್ಲಿ ಈಗಾಗಲೇ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಸಿದ್ಧತೆಗಳನ್ನು ರಾಜ್ಯ ಮುಜರಾಯಿ ಇಲಾಖೆ ಮಾಡಿಕೊಂಡಿದೆ

ಅಮರಾವತಿ(ಮೇ.19): ಕೊರೋನಾ ವೈರಸ್‌ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ದೇಗುಲಗಳನ್ನು ಆಂಧ್ರಪ್ರದೇಶ ಸರ್ಕಾರವು ಕೋವಿಡ್‌ ಆರೈಕೆ ಕೇಂದ್ರಗಳನ್ನಾಗಿ ಪರಿವರ್ತಿಸಿದೆ. ಈ ಮೂಲಕ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಸರ್ಕಾರ ಸೋಂಕು ನಿಗ್ರಹಕ್ಕೆ ಮಹತ್ವದ ಹೆಜ್ಜೆ ಇಟ್ಟಂತಾಗಿದೆ.

ಅಣ್ಣಾವರಂ, ದ್ವಾರಕಾದ ತಿರುಮಲ, ವಿಜಯವಾಡ, ಕಾನಿಪಾಕಂ, ಶ್ರೀಕಾಳಹಸ್ತಿ, ಶ್ರೀಕಾಕುಲಂ, ಮಹಾನಂದಿ, ಸಿಂಹಾಚಲಂ, ಶ್ರೀಶೈಲಂ ಮತ್ತು ಪೇದಕಾಕಿನಿ ದೇವಾಲಯಗಳಲ್ಲಿ ಈಗಾಗಲೇ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಸಿದ್ಧತೆಗಳನ್ನು ರಾಜ್ಯ ಮುಜರಾಯಿ ಇಲಾಖೆ ಮಾಡಿಕೊಂಡಿದೆ. ರಾಜ್ಯದ 16 ಪ್ರಮುಖ ದೇವಾಲಯಗಳಲ್ಲಿ 1000 ಹಾಸಿಗೆಯ ವ್ಯವಸ್ಥೆ ಹಾಗೂ ಸಣ್ಣ ದೇವಸ್ಥಾನಗಳಲ್ಲಿ 25 ಹಾಸಿಗೆಗಳನ್ನು ಸಿದ್ಧ ಮಾಡಿಕೊಳ್ಳಲಾಗಿದ್ದು, ಸೋಂಕಿತರಿಗೆ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.

ಮತ್ತೊಂದೆಡೆ ಆಂಧ್ರಪ್ರದೇಶ ಸರ್ಕಾರ ಈಗಾಗಲೇ 13 ಜಿಲ್ಲೆಗಳಲ್ಲಿ 52,471 ಹಾಸಿಗೆಗಳ ಸಾಮರ್ಥ್ಯದ 115 ಕೋವಿಡ್‌ ಆರೈಕೆ ಕೇಂದ್ರಗಳನ್ನು ತೆರೆದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!