
ಹೈದ್ರಾಬಾದ್(ಜ.05): ತಂದೆ- ಮಗಳು ಒಂದೇ ಇಲಾಖೆಯಲ್ಲಿ ಕೆಲಸಕ್ಕೆ ಸೇರುವುದು, ತಂದೆಯ ಕಿರಿಯ ಸಿಬ್ಬಂದಿಯಾಗಿ ಮಗಳು ಕೆಲಸ ಮಾಡುವುದು ಹೊಸದಲ್ಲ. ಆದರೆ ಆಂಧ್ರಪ್ರದೇಶದ ತಿರುಪತಿ ನಗರ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಯಿತು.
ಹಿರಿಯ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಗಳು ಎದುರಾದ, ಕಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ತಂದೆಯೇ ಸೆಲ್ಯೂಟ್ ಹೊಡೆದ ಪ್ರಕರಣ ಎಲ್ಲರ ಗಮನ ಸೆಳೆಯಿತು. ಗುಂಟೂರಿನಲ್ಲಿ ಡಿಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿರುವ ಜೆಸ್ಸಿ ಪ್ರಶಾಂತಿ, ಪೊಲೀಸ್ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತಿರುಪತಿಗೆ ಆಗಮಿಸಿದ್ದರು. ಈ ವೇಳೆ ಅಲ್ಲಿಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಶ್ಯಾಮ್ ಸುಂದರ್ ಎದುರಾದರು.
ಹಿರಿಯ ಅಧಿಕಾರಿ ತಮ್ಮ ಮಗಳೇ ಆದರೂ, ಶ್ಯಾಮ್‌ಸುಂದರ್ ಮಗಳಿಗೆ ಸೆಲ್ಯೂಟ್ ಮಾಡಿದರು. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ