
ವಿಶಾಖಪಟ್ಟಣ[ಡಿ.23]: ಮೂರು ರಾಜಧಾನಿಗಳನ್ನು ಸೃಷ್ಟಿಸುವ ನಿರ್ಧಾರದ ಕುರಿತು ಪರ- ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿರುವಾಗಲೇ, ಆಂಧ್ರಪ್ರದೇಶದಲ್ಲಿ ಹೊಸದಾಗಿ 12 ಜಿಲ್ಲೆಗಳನ್ನು ರಚನೆ ಮಾಡಲು ಜಗನ್ಮೋಹನರೆಡ್ಡಿ ನೇತೃತ್ವದ ಸರ್ಕಾರ ಚಿಂತನೆ ನಡೆಸಿದೆ.
ಸದ್ಯ ಆಂಧ್ರದಲ್ಲಿ 13 ಜಿಲ್ಲೆಗಳಿವೆ. ಆಡಳಿತವನ್ನು ವಿಕೇಂದ್ರೀಕರಣಗೊಳಿಸಲು ಜಿಲ್ಲೆಗಳ ಸಂಖ್ಯೆಯನ್ನು ಶೀಘ್ರದಲ್ಲೇ 25ಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂದು ಜಗನ್ ಅವರ ಆಪ್ತರೂ ಆಗಿರುವ ವೈಎಸ್ಸಾರ್ ಕಾಂಗ್ರೆಸ್ ಸಂಸದ ವಿಜಯಸಾಯಿ ರೆಡ್ಡಿ ಅವರು ತಿಳಿಸಿದ್ದಾರೆ.
ಆಂಧ್ರದ 13 ಜಿಲ್ಲೆಗಳನ್ನು 25 ಜಿಲ್ಲೆಗಳಾಗಿ ಮಾರ್ಪಡಿಸುವ ಮೂಲಕ ಎಲ್ಲ ಜಿಲ್ಲೆಗಳೂ ಅಭಿವೃದ್ಧಿ ಕಾಣುವಂತೆ ಮಾಡಲಾಗುವುದು ಎಂದು ಜಗನ್ ತಿಳಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ