ಆಂಧ್ರಪ್ರದೇಶ ರೈಲು ದುರಂತ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, 18 ರೈಲು ರದ್ದು, 22 ಮಾರ್ಗ ಬದಲಾವಣೆ

Published : Oct 30, 2023, 08:56 AM ISTUpdated : Oct 30, 2023, 12:16 PM IST
ಆಂಧ್ರಪ್ರದೇಶ ರೈಲು ದುರಂತ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, 18 ರೈಲು ರದ್ದು, 22 ಮಾರ್ಗ ಬದಲಾವಣೆ

ಸಾರಾಂಶ

ಆಂಧ್ರಪ್ರದೇಶ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶಾಖಪಟ್ಟಣ: ಆಂಧ್ರಪ್ರದೇಶ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.  ಆಂಧ್ರಪ್ರದೇಶದ ವಿಜಿನಗರಮ್ ಜಿಲ್ಲೆಯ ಸಮೀಪ ಹೌರಾ-ಚೆನ್ನೈ  ಮಾರ್ಗದಲ್ಲಿ ನಿನ್ನೆ ಸಂಜೆ ವೇಳೆಗೆ ಎರಡು ಪ್ರಯಾಣಿಕ ರೈಲುಗಳ ಮಧ್ಯೆ ಅಪಘಾತ ಸಂಭವಿಸಿ  ಈ ದುರಂತ ಸಂಭವಿಸಿತ್ತು. 

ಈ ರೈಲು ಅಪಘಾತದಿಂದಾಗಿ 18 ರೈಲುಗಳ ಪ್ರಯಾಣವನ್ನು ರದ್ದು ಮಾಡಲಾಗಿದ್ದು, 22ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಿಶಾಖಪಟ್ಟಣಂ ಮತ್ತು ಪಲಾಸ ನಡುವಿನ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಅಳಮಂಡ ಮತ್ತು ಕಂಟಕಪಲ್ಲಿ (Kantakapalle) ನಡುವೆ ಹಳಿಗಳ ಮೇಲೆ ನಿಂತಿದ್ದಾಗ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು (Vizag-Raigad passenger train) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿ ದುರಂತ ಸಂಭವಿಸಿದೆ.

ಕೇರಳದ ಸಮಾವೇಶದಲ್ಲಿ ಬಾಂಬ್‌ ಬ್ಲಾಸ್ಟ್: ಯಾವುದಿದು ಜೆಹೊವ್ಹಾಸ್‌ ವಿಟ್ನೆಸ್ಸೆಸ್‌ ಸಮುದಾಯ?

ಸಿಗ್ನಲಿಂಗ್ ಅನ್ನು ಲೋಕೋ ಪೈಲಟ್ ಗಮನಿಸಲಿಲ್ಲ. ಮಾನವ ದೋಷದಿಂದಲೇ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.   ಹಾನಿಗೊಳಗಾದ ಹಾಗೂ ಹಳಿ ತಪ್ಪಿದ ಕೋಚ್‌ಗಳನ್ನು ಹೊರತುಪಡಿಸಿ ಉಳಿದ ಕೋಚ್‌ಗಳನ್ನು ಸ್ಥಳದಿಂದ ತೆರವು ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ. ನಿನ್ನೆ ಸಂಜೆ  ಘಟನಾ ಸ್ಥಳದಿಂದ ಸೆರೆಯಾದ ಚಿತ್ರಗಳಲ್ಲಿ ಕೋಚ್‌ಗಳು ಉರುಳಿ ಬಿದ್ದಿರುವುದು ಹಾಗೂ ಜನರು ಸುತ್ತಲೂ ನಿಂತಿರುವುದನ್ನು ತೋರಿಸಿವೆ. 40 ಜನರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರೂ ಆಂಧ್ರಪ್ರದೇಶದವರೇ ಆಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವಿಜಿನಗರಮ್‌ ಜಿಲ್ಲಾಡಳಿತ ಮಾಹಿತಿ ನೀಡಿದೆ.  ದುರಂತದಲ್ಲಿ 13 ಜನ ಸಾವಿಗೀಡಾಗಿರುವುದನ್ನು  ವಿಜಿನಗರಮ್ ಜಿಲ್ಲಾಧಿಕಾರಿ ನಾಗಲಕ್ಷ್ಮಿ ಖಚಿತಪಡಿಸಿದ್ದಾರೆ.

ಕೇರಳ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ, ಐವರ ಸ್ಥಿತಿ ಚಿಂತಾಜನಕ!

ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ  10 ಲಕ್ಷ  ರೂ ಪರಿಹಾರವನ್ನು ಘೋಷಿಸಲಾಗಿದೆ.  ಹಾಗೆಯೇ ಘಟನೆಯಲ್ಲಿ ಗಂಬೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ.  ಹಾಗೆಯೇ ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಸಚಿವರು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್‌ಆರ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೂ ಮಾತನಾಡಿದ್ದಾರೆ. ಅಪಘಾತದ ಬಗ್ಗೆ ಜಗನ್‌ ತೀವ್ರ ಆಘಾತ ವ್ಯಕ್ತಪಡಿಸಿದ್ದು ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಆದೇಶಿಸಿದ್ದಾರೆ.

ಭಾರತದಿಂದ ಇಂಗ್ಲೆಂಡ್‌ಗಿತ್ತು ಲಕ್ಸುರಿ ಬಸ್‌ : 1970ರವರೆಗೂ ಇದ್ದ ಈ ಬಸ್‌ ಸೇವೆ ಬಗ್ಗೆ ಇಲ್ಲಿದೆ ಡಿಟೇಲ್ಸ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ
ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌