
ಅನಂತಪುರ(ಮಾ.08): ಟಾಲಿವುಡ್ ಸಿನಿಮಾ ರಂಗದ ನಟ ಹಾಗೂ ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ ಅವರು ಛಾಯಾಗ್ರಾಹಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಪಕ್ಷದ ಕಾರ್ಯಕರ್ತರೊಬ್ಬರ ನಿವಾಸದ ಮುಂದೆ ನಡೆದಿದೆ. ಹಿಂದೂಪುರ ನಗರಸಭೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವನ್ನು ಛಾಯಾಗ್ರಾಹಕ ಸೆರೆ ಹಿಡಿಯುತ್ತಿದ್ದರು.
ಈ ವೇಳೆ ಶಾಸಕ ಬಾಲಕೃಷ್ಣ ಅವರು ಎಲ್ಲವನ್ನೂ ವಿಡಿಯೋ ಮಾಡದಂತೆ ತಾಕೀತು ಮಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ಘಟನೆ ಖಂಡಿಸಿ ಶಾಸಕನ ವಿರುದ್ಧ ಹಿಂದೂಪುರದ ಅಂಬೇಡ್ಕರ್ ಸರ್ಕಲ್ನಲ್ಲಿ ಛಾಯಾಗ್ರಾಹಕರ ಸಂಘಟನೆ ಪ್ರತಿಭಟನೆ ನಡೆಸಿದೆ. ಕೊನೆಗೆ ಟಿಡಿಪಿ ಕಪಾಳಕ್ಕೆ ಹೊಡೆಸಿಕೊಂಡ ಮತ್ತು ನಟರು ಇಬ್ಬರ ಹೇಳಿಕೆಯನ್ನು ಒಳಗೊಂಡ ವಿಡಿಯೋವನ್ನು ಬಿಡುಗಡೆ ಮಾಡಿ ತಿಪ್ಪೆ ಸಾರಿಸಲು ಯತ್ನಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ