ಬಿಹಾರದಲ್ಲಿ ಸೇತುವೆ ಕುಸಿತದ ಸರಣಿ ಮುಂದುವರಿದಿದ್ದು, ವೈಶಾಲಿ ಜಿಲ್ಲೆಯ ರಾಘೋಪುರದಲ್ಲಿ ಶನಿವಾರ ಸಣ್ಣ ಸೇತುವೆಯೊಂದು ಕುಸಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಾಜಿಪುರ: ಬಿಹಾರದಲ್ಲಿ ಸೇತುವೆ ಕುಸಿತದ ಸರಣಿ ಮುಂದುವರಿದಿದ್ದು, ವೈಶಾಲಿ ಜಿಲ್ಲೆಯ ರಾಘೋಪುರದಲ್ಲಿ ಶನಿವಾರ ಸಣ್ಣ ಸೇತುವೆಯೊಂದು ಕುಸಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘20 ವರ್ಷ ಹಳೆಯದಾಗಿದ್ದ ಈ ಸೇತುವೆ ನೀರಿನ ರಭಸದಿಂದ ಹಾನಿಗೊಳಗಾಗಿತ್ತು. ಆದ್ದರಿಂದ ಅದರ ಬಳಕೆಯನ್ನು 2021ರಲ್ಲೇ ನಿಲ್ಲಿಸಲಾಗಿತ್ತು’ ಎಂದು ಜಿಲ್ಲಾಧಿಕಾರ ಹೇಳಿಕೆ ಬಿಡುಗಡೆ ಮಾಡಿದೆ.
ಮೋದಿಯವರಿಗೆ ಸೀಟು ಕಡಿಮೆ ಬಂದಿದ್ದಕ್ಕೆ ಸಂಭ್ರಮಿಸಿದವರು; ಬಾಂಗ್ಲಾದೇಶದಿಂದ ಪಾಠ ಕಲಿಯಬೇಕು: ಉಮಾ ಭಾರತಿ
ಇತ್ತೀಚಿನ ದಿನಗಳಲ್ಲಿ ಬಿಹಾರದ ಹಲವು ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಸೇತುವೆಗಳು ಕುಸಿದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್, ಕಿಶನ್‌ಗಂಜ್ ಜಿಲ್ಲೆಗಳು ಮತ್ತು ಇತರ ಸ್ಥಳಗಳಲ್ಲಿ ಸಣ್ಣ ಸೇತುವೆಗಳು ಕುಸಿದ ಘಟನೆಗಳು ವರದಿಯಾಗಿವೆ. ಹೀಗಾಗಿ ರಾಜ್ಯದ ಎಲ್ಲಾ ಸೇತುವೆಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ರಿಪೇರಿ ಮಾಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಸೂಚಿಸಿದ್ದರು.