
ಚೆನ್ನೈ[ಡಿ.22]: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ಹಿಂಸಾಚಾರದಲ್ಲೂ ತೊಡಗಿಸಿಕೊಂಡಿದ್ದಾರೆ. ಇವೆಲ್ಲದರ ನಡುವೆ ಪ್ರತಿಭಟನೆ ವೇಳೆ ನಡೆದ ಘಟನೆಯೊಂದನ್ನು ಅನೇಕರು ಹಾಡಿ ಹೊಗಳಿದ್ದಾರೆ. ಈ ಅಪರೂಪದ ದೃಶ್ಯ CAA ವಿರುದ್ಧದ ಪ್ರತಿಭಟನೆ ನಡೆಯುತ್ತಿದ್ದರೂ ಹಿಂದೂ ಹಾಗೂ ಮುಸಲ್ಮಾನರ ನಡುವಿನ ಬಾಂಧವ್ಯ ಹಾಗೂ ಏಕತೆಯ ನಡುವೆ ಯಾವುದೇ ಬಿರುಕಿಲ್ಲ ಎಂಬುವುದನ್ನು ತೋರಿಸಿಕೊಟ್ಟಿದೆ.
ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ CAA ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ನಮಾಜ್ ನಿಲ್ಲಿಸಿ ಶಬರಿಮಲೆಗೆ ತೆರಳುತ್ತಿದ್ದ ಭಕ್ತರಿಗೆ ದಾರಿ ಮಾಡಿಕೊಟ್ಟಿರುವುದು ನೋಡಬಹುದಾಗಿದೆ. ಈ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದ್ದು, ಪ್ರತಿಭಟನಾಕಾರರು ರಸ್ತೆಯಲ್ಲೇ ನಮಾಜ್ ಮಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಶಬರಿಮಲೆ ಅಯ್ಯಪ್ಪ ಭಕ್ತರು ಅದೇ ದಾರಿಯಲ್ಲಿ ಬಂದಿದ್ದಾರೆ. ಇಲ್ಲಿ ಜನರ ಬಹುದೊಡ್ಡ ಗುಂಪೇ ನೆರೆದಿತ್ತು. ಹೀಗಿರುವಾಗ ಈ ಗುಂಪಿನಿಂದ ವ್ಯಕ್ತಿಯೊಬ್ಬ ಹೊರಬಂದು, ಶಬರಿಮಲೆಗೆ ತೆರಳುತ್ತಿದ್ದ ಭಕ್ತರಿಗೆ ದಾರಿ ಮಾಡಿಕೊಟ್ಟಿದ್ದಾರೆ.
ಕೊಯಂಬತ್ತೂರಿನಲ್ಲಿ CAA ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸುಮಾರು 15 ಸಾವಿರ ಮಂದಿ ಪಾಲ್ಗೊಂಡಿದ್ದರು. ಈ ಪ್ರತಿಭಟನೆಗೆ ಆಲ್ ಜಮಾತ್ ಹಾಗೂ ಇಸ್ಲಾಮಿಕ್ ಸಂಘಟನೆಗಳು ಕರೆ ಕೊಟ್ಟಿದ್ದವು. ತಮಿಳುನಾಡಿನ ಹಲವಾರು ನಗರಗಳಲ್ಲಿ ಕಳೆದ ಕೆಲ ವಾರಗಳಿಂದ ಪ್ರತಿಭಟನೆ ನಡೆಯುತ್ತಿದೆ. ಜನರು ಈ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ