
ನವದೆಹಲಿ (ಜ. 08): 2005ರಲ್ಲಿ ತನ್ನನ್ನು ಪೋರ್ಚುಗಲ್‌ನಿಂದ ಭಾರತಕ್ಕೆ ಗಡೀಪಾರು ಮಾಡಿದ್ದು ಅಕ್ರಮ ಹಾಗೂ ನ್ಯಾಯಬದ್ಧವಲ್ಲ. ಭಾರತೀಯ ಅಧಿಕಾರಿಗಳು ಗಡೀಪಾರು ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ಅಬು ಸಲೇಂ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸಲು ಹಾಗೂ ವಕೀಲರ ಜೊತೆ ಮಾತನಾಡಲು ತನ್ನನ್ನು ಮಹಾರಾಷ್ಟ್ರದ ತಾಲೋಜಾ ಜೈಲಿನಿಂದ ದೆಹಲಿಯ ತಿಹಾರ್ ಜೈಲಿಗೆ ಸ್ಥಳಾಂತರಿಸಬೇಕು ಎಂದು ಅಬು ಸಲೇಂ ಕೋರಿಕೆ ಸಲ್ಲಿಸಿದ್ದಾನೆ. ಆದರೆ, ಮುಖ್ಯನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರಿದ್ದ ಪೀಠ, ಅಬು ಸಲೇಂಗೆ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಹಾಕುವಂತೆ ಸೂಚನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ