ಈ ಅಪಘಾತದಲ್ಲಿ ಕನಿಷ್ಠ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಇದು ಕಳೆದ ಎರಡು ತಿಂಗಳಲ್ಲಿ ಸುಧಾರಿತ ಲಘು ಹೆಲಿಕಾಪ್ಟರ್ ಧ್ರುವ್ ಅನ್ನು ಒಳಗೊಂಡ ಮೂರನೇ ಅಪಘಾತವಾಗಿದೆ ಎಂದು ತಿಳಿದುಬಂದಿದೆ.
ಹೊಸದೆಹಲಿ (ಮೇ 4, 2023): ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್‌ವೊಂದು ಪತನವಾಗಿದ್ದು, ವಿಮಾನದಲ್ಲಿದ್ದ ಮೂವರು ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೂರು ಜನರಿದ್ದ ಸುಧಾರಿತ ಲಘು ಹೆಲಿಕಾಪ್ಟರ್ ಧ್ರುವ್ ಇಂದು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಪತನಗೊಂಡಿದೆ. ಕಿಶ್ತ್ವಾರ್ ಜಿಲ್ಲೆಯ ಮರ್ವಾ ಪ್ರದೇಶದ ಮಚ್ನಾದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ತಿಳಿದುಬಂದಿದೆ.
ಈ ಅಪಘಾತದಲ್ಲಿ ಕನಿಷ್ಠ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಆರಂಭಿಕ ವರದಿಗಳು ಹೇಳಿದ್ದವು. ಇದು ಕಳೆದ ಎರಡು ತಿಂಗಳಲ್ಲಿ ಸುಧಾರಿತ ಲಘು ಹೆಲಿಕಾಪ್ಟರ್ (ALH) ಧ್ರುವ್ ಅನ್ನು ಒಳಗೊಂಡ ಮೂರನೇ ಅಪಘಾತವಾಗಿದೆ ಎಂದು ತಿಳಿದುಬಂದಿದೆ. ಇನ್ನು, ಈ ಪ್ರಕರಣ ಸಂಬಂಧ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿತ್ತು.
ಇದನ್ನು ಓದಿ: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳು ನಾಪತ್ತೆ..!
An Army ALH Dhruv Helicopter crashed near Kishtwar, Jammu & Kashmir. Pilots have suffered injuries but are safe. Further details awaited: Army Officials. pic.twitter.com/ya41m7CRfn
— ANI (@ANI)ನಂತರ, ರಕ್ಷಣಾ ಕಾರ್ಯದ ಬಳಿಕ ಹೇಳಿಕೆ ನೀಡಿದ ಸೇನಾ ಅಧಿಕಾರಿಗಳು ಹೆಲಿಕಾಪ್ಟರ್ ಪತನದಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಒಬ್ಬರು ತಾಂತ್ರಿಕ ಸಿಬ್ಬಂದಿ ಇದ್ದರು. ಈ ಮೂವರೂ ಸಿಬ್ಬಂದಿ ಗಾಯಗೊಂಡಿದ್ದು, ಇವರನ್ನು ಉಧಮ್‌ಪುರದ ಕಮಾಂಡ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದೂ ಹೇಳಿದರು. ಅಲ್ಲದೆ, ಈ ಅವಘಡದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದೂ ಹೇಳಿದ್ದಾರೆ.
ಅಲ್ಲದೆ ಈ ಅವಘಡ ಸಂಬಂಧ ಮೊದಲು ಮಾಹಿತಿ ನೀಡಿದ್ದ ಸೇನಾ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಬಳಿ ಸೇನೆಯ ALH ಧ್ರುವ ಹೆಲಿಕಾಪ್ಟರ್ ಪತನಗೊಂಡಿದೆ. ಪೈಲಟ್‌ಗಳಿಗೆ ಗಾಯಗಳಾಗಿದ್ದು, ಆದರೂ ಅವರು ಸುರಕ್ಷಿತವಾಗಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದಿದ್ದರು. ಹಾಗೂ, ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಸೇನಾ ಹೆಲಿಕಾಪ್ಟರ್‌ನಲ್ಲಿ ಇಬ್ಬರಿಂದ ಮೂವರು ಇದ್ದರು ಎಂದು ತಿಳಿದುಬಂದಿದೆ. ಅವರು ಗಾಯಗೊಂಡಿದ್ದಾರೆ ಎಂದು ಆರಂಭಿಕ ವರದಿಗಳು ಹೇಳುತ್ತಿವೆ ಎಂದೂ ತಿಳಿಸಿದ್ದರು.
ಇದನ್ನೂ ಓದಿ: Goa: ಮಹದಾಯಿ ರಕ್ಷಿತಾರಣ್ಯದಲ್ಲಿ ಭಾರಿ ಕಾಡ್ಗಿಚ್ಚು: ಒಟ್ಟು 11 ವಿವಿಧ ಬೆಟ್ಟಗಳಿಗೆ ಹರಡಿರುವ ಬೆಂಕಿ
ಆದರೆ, ದೂರದಲ್ಲಿರುವ ಮತ್ತು ದಟ್ಟವಾದ ಕಾಡುಗಳನ್ನು ಹೊಂದಿರುವ ಪ್ರದೇಶದಲ್ಲಿ ಯಾವುದೇ ದೂರಸಂಪರ್ಕ ಜಾಲವಿಲ್ಲದ ಕಾರಣ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಭಾರತದ ವೈಮಾನಿಕ, ರಕ್ಷಣಾ ಉದ್ಯಮಕ್ಕೆ ಕರ್ನಾಟಕವೇ ತವರು ಮನೆ..!