
ನವದೆಹಲಿ(ಮಾ.26): ಭೂಸೇನೆ ಮತ್ತು ನೌಕಾಪಡೆಯಲ್ಲಿ ಮಹಿಳೆಯರಿಗೆ ಪರ್ಮನೆಂಟ್ ಕಮಿಷನ್ (ಕಾಯಂ ಉದ್ಯೋಗ) ನೀಡುವಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಈ ಕುರಿತು ಅವಕಾಶವಂಚಿತರು ಸಲ್ಲಿಸಿರುವ ತಕರಾರು ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿದೆ.
ಹೆಚ್ಚಿದ ಹಿಮಪಾತ: ಗರ್ಭಿಣಿ ಮಹಿಳೆಯನ್ನು ಹೊತ್ತು ಆಸ್ಪತ್ರೆಗೆ ನಡೆದ ಸೈನಿಕರು
ಸೇನಾಪಡೆಗಳಲ್ಲಿ ಮಹಿಳೆಯರಿಗೆ ಶಾರ್ಟ್ ಸರ್ವೀಸ್ ಕಮಿಷನ್ (ಎಸ್‌ಎಸ್‌ಸಿ: 14 ವರ್ಷ ಅಥವಾ 20 ವರ್ಷದ ಸೇವೆ) ಬದಲು ಕಾಯಂ ಉದ್ಯೋಗ ನೀಡಬೇಕೆಂದು ಕಳೆದ ವರ್ಷ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅದರಂತೆ ಎಸ್‌ಎಸ್‌ಸಿಯಲ್ಲಿರುವ ಮಹಿಳೆಯರನ್ನು ಕಾಯಂ ಉದ್ಯೋಗಕ್ಕೆ ಆಯ್ಕೆ ಮಾಡಲು ವಾರ್ಷಿಕ ರಹಸ್ಯ ವರದಿ (ಎಸಿಆರ್) ಪಡೆಯುವ ಪದ್ಧತಿಯನ್ನು ಸೇನೆಯಲ್ಲಿ ಜಾರಿಗೆ ತರಲಾಗಿದೆ. ಈ ವರದಿಯಲ್ಲಿ ಮಹಿಳೆಯರ ದೈಹಿಕ ಕ್ಷಮತೆ ಮತ್ತು ಆರೋಗ್ಯವನ್ನು ಮಾತ್ರ ಪರಿಗಣಿಸಲಾಗುತ್ತದೆಯೇ ಹೊರತು ಅವರ ಸಾಧನೆಯನ್ನು ಪರಿಗಣಿಸುತ್ತಿಲ್ಲ. ಹೀಗಾಗಿ ನಮಗೆ ತಾರತಮ್ಯವಾಗುತ್ತಿದೆ ಎಂದು ಕೆಲವರು ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ.
ಭಾರತ ಸೇನೆ ನಂ.4 ಶಕ್ತಿಶಾಲಿ: ಜಗತ್ತಿನಲ್ಲಿ ಈಗ ಯುದ್ಧ ನಡೆದರೆ ಚೀನಾ ಗೆಲ್ಲುವ ಸಾಧ್ಯತೆ!
ಈ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾ| ಡಿ.ವೈ.ಚಂದ್ರಚೂಡ್ ಅವರ ಪೀಠ, ಮಹಿಳೆಯರಿಗೆ ಕಾಯಂ ಉದ್ಯೋಗ ನೀಡಲು ಸೇನೆ ಅನುಸರಿಸುತ್ತಿರುವ ನಿಯಮ ಏಕಪಕ್ಷೀಯ ಹಾಗೂ ಅತಾರ್ಕಿಕವಾಗಿದೆ. ನಮ್ಮ ದೇಶದಲ್ಲಿ ಸ್ವಾತಂತ್ರ್ಯಾನಂತರದಿಂದಲೂ ಸಾಮಾಜಿಕ ವ್ಯವಸ್ಥೆಯನ್ನು ಪುರುಷರೇ ಪುರುಷರಿಗಾಗಿ ರೂಪಿಸುತ್ತಿದ್ದು, ಇಲ್ಲಿ ಸಮಾನತೆಯ ಬಗ್ಗೆ ಮಾತನಾಡುವುದು ಪ್ರಹಸನವಾಗುತ್ತದೆ. ಈ ತಾರತಮ್ಯ ಹೋಗಲಾಡಿಸಲು ಮತ್ತು ಮಹಿಳೆಯರಿಗೆ ಎಲ್ಲ ಅವಕಾಶಗಳನ್ನು ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ