
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಪ್ರದೇಶದಲ್ಲಿ ಮಂಗಳವಾರ ಉಗ್ರರಿಂದ ಅಪಹರಿಸಲ್ಪಟ್ಟಿದ್ದ ಪ್ರಾದೇಶಿಕ ಸೇನಾ ಯೋಧನ ಮೃತದೇಹ ಇಂದು ಪತ್ತೆಯಾಗಿದೆ. ಮೃತದೇಹದ ಮೇಲೆ ಗುಂಡೇಟುಗಳು ಕಂಡು ಬಂದಿವೆ ಎಂದು ವರದಿಯಾಗಿದೆ. ಮಂಗಳವಾರ ನಾಪತ್ತೆಯಾದ ವಿಷಯ ತಿಳಿಯುತ್ತಲೇ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದವು. ಶೋಧ ಕಾರ್ಯಾಚರಣೆ ನಡೆಸಿದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕೆರ್ನಾಗ್ ಅರಣ್ಯ ಪ್ರದೇಶದಲ್ಲಿ ಯೋಧನ ಶವ ಸಿಕ್ಕಿದೆ. ಹುತಾತ್ಮ ಯೋಧನನ್ನು ಅನಂತನಾಗ್‌ನ ಮುಖ್‌ಧಂಪೋರಾ ನೌಗಾಮ್‌ನ ನಿವಾಸಿ ಹಿಲಾಲ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.
ಅಕ್ಟೋಬರ್ 8ರಂದು ಪ್ರಾದೇಶಿಕ ಸೇನೆಯ 161 ನೇ ಘಟಕದಿಂದ (161 unit of the Territorial Army) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿತ್ತು. ಅನಂತನಾಗ್‌ನ ಅರಣ್ಯ ಪ್ರದೇಶದಲ್ಲಿ ಇಬ್ಬರು ಯೋಧರನ್ನು ಭಯೋತ್ಪಾದಕರು ಅಪಹರಿಸಿದ್ದರು. ಇಬ್ಬರಲ್ಲಿ ಒಬ್ರು ಅವರಿಂದ ತಪ್ಪಿಸಿಕೊಂಡು ಹೊರ ಬಂದಿದ್ದರು. ಆದರೆ ಹಿಲಾಲ್ ಅಹ್ಮದ್ ಭಟ್ ಅಲ್ಲಿಯೇ ಸಿಲುಕಿಕೊಂಡಿದ್ದರು. ಉಗ್ರರಿಂದ ತಪ್ಪಿಸಿಕೊಂಡ ಬಂದ ಗಾಯಾಳು ಯೋಧನನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಲ್ಲಿ ಪಾಕಿಸ್ತಾನಿಗಳ ಬಂಧನ; 22 ಜನರಿಗೆ ಆಧಾರ್ ಕಾರ್ಡ್ ಮಾಡಿಸಿಕೊಟ್ಟ ಪರ್ವೇಜ್ ಬಂಧನ!
ಅಕ್ಟೋಬರ್ 5 ರಂದು, ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಿಯಂತ್ರಣ ರೇಖೆ (ಎಲ್‌ಒಸಿ) ಗಡಿ ಪ್ರವೇಶಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹೊಡೆದುರಳಿಸಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಆಗಸ್ಟ್‌ನಲ್ಲಿಯೂ ಅನಂತನಾಗ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು.
ಉಗ್ರ ದಾಳಿಯಲ್ಲಿ ತಂದೆ, ಚಿಕ್ಕಪ್ಪ ಇಬ್ಬರನ್ನೂ ಕಳೆದುಕೊಂಡ ಶಗುನ್‌ಗೆ ಕಾಶ್ಮೀರ ಚುನಾವಣೆಯಲ್ಲಿ ಗೆಲುವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ