
ಸಿಕ್ಕಿಂ (ಡಿ.23): ಭಾರತೀಯ ಸೇನಾಪಡೆ ಚಲಿಸುತ್ತಿದ್ದ ಟ್ರಕ್ ವೊಂದು ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿರುವ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ. ತವಾಂಗ್ ಬರುವಾಗ ಝೀಮಾ ಪ್ರದೇಶದಲ್ಲಿ ಪ್ರಯಾಣ ಬೆಳೆಸುತ್ತಿದ್ದ ಸೇನಾ ವಾಹನ ತಿರುವು ಪಡೆಯುವಾಗ ತೀವ್ರ ಕಡಿದಾದ ಪ್ರದೇಶದಲ್ಲಿ ಕಂದಕಕ್ಕೆ ಜಾರಿ ಬಿದ್ದು ದುರಂತ ಸಂಭವಿಸಿದ್ದು, ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ವರದಿ ತಿಳಿಸಿದೆ. ಯೋಧರೆಲ್ಲರೂ ಮರಳಿ ಗೌಹಾಟಿಗೆ ಬರುತ್ತಿದ್ದರು. ಹುತಾತ್ಮರಾದವರಲ್ಲಿ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 13 ಯೋಧರು ಎಂದು ತಿಳಿದುಬಂದಿದೆ.
ರಕ್ಷಣಾ ಸಚಿವರ ಸಂತಾಪ: ಈ ದುರಂತದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ತುಂಬಾ ನೋವಿನ ಸಂಗತಿಯಾಗಿದೆ. ಹುತಾತ್ಮರಾದ ಯೋಧರ ಸೇವೆಯನ್ನು ಸದಾ ಸ್ಮರಿಸುತ್ತದೆ. ಹುತಾತ್ಮರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಗಾಯಳುಗಳು ಶೀಘ್ರ ಗುಣಮುಖರಾಗಲು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ