
ನವದೆಹಲಿ(ಜು.08): ದೇಶಾದ್ಯಂತ ಈಗಾಗಲೇ ಅಸ್ತಿತ್ವದಲ್ಲಿರುವ 194 ಐತಿಹಾಸಿಕ ಲೈಟ್‌ಹೌಸ್‌ಗಳನ್ನು ಅಭಿವೃದ್ಧಿಪಡಿಸಿ, ಅವುಗಳನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿಸಲು ನಿರ್ಧರಿಸಿರುವುದಾಗಿ ಹಡಗು ಸಚಿವಾಲಯ ಮಂಗಳವಾರ ತಿಳಿಸಿದೆ.
ಹಂಪಿ ಸೇರಿ ಪ್ರಮುಖ ಐತಿಹಾಸಿಕ ತಾಣಗಳೀಗ ಪ್ರವಾಸಿಗರಿಗೆ ಮುಕ್ತ!
ಈ ಸಂಬಂಧ ಕೇಂದ್ರ ಹಡಗು ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ್ದು, ಲೈಟ್‌ಹೌಸ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಮತ್ತು ಲೈಟ್‌ಹೌಸ್‌ನ ಶ್ರೀಮಂತ ಇತಿಹಾಸವನ್ನು ಜನರಿಗೆ ತಿಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ 100ಕ್ಕೂ ಅಧಿಕ ವರ್ಷ ಹಳೆಯದಾದ ಲೈಟ್‌ಹೌಸ್‌ಗಳನ್ನು ಗುರುತಿಸಲಾಗುತ್ತಿದೆ ಎಂದಿದ್ದಾರೆ.
ಕೊರೋನಾ ಭೀತಿ: ಪ್ರವಾಸಿಗರು ಬಾರದಂತೆ ಬಸ್ ತಡೆದ ಗ್ರಾಮಸ್ಥರು
ಅಲ್ಲದೇ ಯೋಜನೆಯ ಪ್ರಕಾರ ಲೈಟ್‌ಹೌಸ್ ಅನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿಸಿಸಲು ಮ್ಯೂಸಿಯಂ, ಅಕ್ವೇರಿಯಂ, ಮಕ್ಕಳಿಗಾಗಿ ವಿವಿಧ ಆಟ ಮತ್ತು ಗಾರ್ಡನ್ ನಿರ್ಮಿಸಿ ಜನರನ್ನು ಆಕರ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ