
ತಿರುವನಂತಪುರ[ಡಿ.22]: 30 ವರ್ಷಗಳ ಹಿಂದೆ ಬರೆದಿದ್ದ ಪುಸ್ತಕವೊಂದರಲ್ಲಿ ನಾಯರ್ ಮಹಿಳೆಯರ ಬಗ್ಗೆ ಅಪಮಾನಕಾರಿ ಅಂಶ ಉಲ್ಲೇಖಿಸಿದ್ದಾರೆ ಎಂಬ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕೇರಳ ನ್ಯಾಯಾಲಯವೊಂದು ಬಂಧನ ವಾರಂಟ್ ಹೊರಡಿಸಿದೆ.
ಸಮನ್ಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಾಗೂ ತಮ್ಮ ವಕೀಲರನ್ನೂ ಕೋರ್ಟಿಗೆ ಕಳುಹಿಸದ ಕಾರಣ ಈ ವಾರಂಟ್ ಅನ್ನು ನ್ಯಾಯಾಲಯ ಜಾರಿಗೊಳಿಸಿದೆ. 1989ರಲ್ಲಿ ತರೂರ್ ಅವರು ‘ದ ಗ್ರೇಟ್ ಇಂಡಿಯನ್ ನಾವಲ್’ ಎಂಬ ಪುಸ್ತಕ ಬರೆದಿದ್ದರು.
ಅದರಲ್ಲಿ ನಾಯರ್ ಸಮುದಾಯದ ಮಹಿಳೆಯರ ಬಗ್ಗೆ ಅಪಮಾನಕಾರಿ ಅಂಶಗಳಿದ್ದವು ಎಂಬ ಸಂಬಂಧ ತಿರುವನಂತಪುರ ಕೋರ್ಟಲ್ಲಿ ವಿಚಾರಣೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ