ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬ?

Published : May 27, 2022, 09:00 AM IST
ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬ?

ಸಾರಾಂಶ

* ಗುರುವಾರ ಲಂಕಾ ತಲುಪಿದ ಮುಂಗಾರು * ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬ?

ನವದೆಹಲಿ(ಮೇ.27): ದೇಶದ ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ, ಆರ್ಥಿಕತೆ ಮೇಲೆ ಭಾರಿ ಪರಿಣಾಮ ಬೀರುವ ಮುಂಗಾರು ಮಾರುತಗಳು ಆರು ದಿನಗಳ ಸ್ತಬ್ಧತೆ ಬಳಿಕ ಇದೀಗ ಚಲನಶೀಲವಾಗಿದ್ದು, ದಕ್ಷಿಣ ಶ್ರೀಲಂಕಾವನ್ನು ಪ್ರವೇಶಿಸಿವೆ. ಇನ್ನು ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ. ಈ ಹಿಂದೆ ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆ ಅನ್ವಯ ಜೂ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶವಾಗಬೇಕಿತ್ತು. ಆದರೆ ಈಗಿನ ಹವಾಮಾನದ ಅನ್ವಯ ಕೇರಳಕ್ಕೆ ಮುಂಗಾರು ಪ್ರವೇಶದಲ್ಲಿ ಕೆಲ ದಿನಗಳ ವಿಳಂಬವಾಗುವ ಸಾಧ್ಯತೆ ಇದೆ.

ದಕ್ಷಿಣ ಅರಬ್ಬೀ ಸಮುದ್ರ, ಮಾಲ್ಡೀವ್‌್ಸ, ಲಕ್ಷದ್ವೀಪದ ಆಸುಪಾಸಿನಲ್ಲಿ ಮುಂದಿನ 48 ತಾಸುಗಳಲ್ಲಿ ಮುಂಗಾರು ತಲುಪಲು ಪೂರಕವಾದ ವಾತಾವರಣವಿದೆ. ಇದರ ಫಲವಾಗಿ ಮುಂದಿನ ಎರಡು ದಿನಗಳಲ್ಲಿ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇದರ ಜತೆಗೆ ಕೇರಳಕ್ಕೆ ಮುಂಗಾರು ಪ್ರವೇಶದ ಬಗ್ಗೆ ನಿರಂತರ ನಿಗಾ ಇಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಸಾನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್‌ ಅನ್ನು ತಲುಪಿದ್ದ ಮುಂಗಾರು, ಮೇ 27ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಇದರಲ್ಲಿ 4 ದಿನಗಳ ವ್ಯತ್ಯಾಸವಾಗುವ ಸಾಧ್ಯತೆ ಇದೆ ಎಂದೂ ತಿಳಿಸಿತ್ತು.

ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ

2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ (್ಕWಆಇಐಖ) ಬೆಳೆ ವಿಮಾ ಯೋಜನೆಯನ್ನು ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರದ ಆದೇಶದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ದಾಳಿಂಬೆ ಮತ್ತು ಪಪ್ಪಾಯಿ ಬೆಳೆದ ರೈತರು ವಿಮಾ ಕಂತನ್ನು ಪಾವತಿಸಲು ಜೂನ್‌ 30 ಕೊನೆಯ ದಿನವಾಗಿದೆ.

ಬೆಳೆ ಸಾಲ ಪಡೆದ ರೈತರು ಸಂಬಂಧಿತ ಬ್ಯಾಂಕ್‌ಗಳ ಮೂಲಕ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕ್‌ ಅಥವಾ ಸಾಮಾನ್ಯ ಸೇವಾ ಕೇಂದ್ರ ಮೂಲಕ ಈ ಯೋಜನೆಯಡಿ ನೋಂದಾಯಿಸಬಹುದಾಗಿದೆ. ಪಹಣಿ ಪತ್ರಿಕೆ, ಬ್ಯಾಂಕ್‌ ಖಾತೆ ಪುಸ್ತಕದ ಪ್ರತಿ ಮತ್ತು ಆಧಾರ್‌ ಕಾರ್ಡ್‌ನ ಪ್ರತಿ ಸೇರಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಗದಗ ತೋಟಗಾರಿಕೆ ಉಪ ನಿರ್ದೇಶಕರು ಪ್ರಕ​ಟ​ಣೆ​ಯ​ಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು