
ನವದೆಹಲಿ[ಫೆ.22]: 24, 25 ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಪತರ್ನಿ ಮೆಲಾನಿಯಾ ಸೇರಿದಂತೆ ಸರ್ಕಾರಿ ಅಧಿಕಾರಿಗಳೊಂದಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಟ್ರಂಪ್ ಪತ್ನಿ ಮೆಲಾನಿಯಾ ದೆಹಲಿಯ ಸರಕಾರಿ ಶಾಲೆಗಳಿಗೆ ಭೇಟಿ ನೀಡಲಿದ್ದಾರೆ. ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಈ ಸರ್ಕಾರಿ ಶಾಲೆಯಲ್ಲಿ 'ಹ್ಯಾಪಿನೆಸ್ ಕ್ಲಾಸ್' ವೀಕ್ಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೀಗ ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಈ ಕಾರ್ಯಕ್ರಮದಿಂದ ದೆಹಲಿ ಸಿಸೆಂ ಕೇಜ್ರೀವಾಲ್ ಹಾಗೂ ಡಿಸಿಎಂ ಸಿಸೋಡಿಯಾರನ್ನು ಹೊರಗಗಿಡಲಾಗಿದೆ. ಸದ್ಯ ಈ ವಿಚರ ಭಾರೀ ಚರ್ಚೆ ಹುಟ್ಟು ಹಾಕಿಸದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷ ಕೇಂದ್ರ ಸರ್ಕಾರವೇ ಸಿಎಂ ಅರವಿಂದ ಕೇಜ್ರೀವಾಲ್ ಹಾಗೂ ಸಿಸೋಡಿಯಾರನ್ನು ಉದ್ದೇಶಪೂರ್ವಕವಾಗಿ ಹೊರಗಿಟ್ಟಿದೆ. ಆರಂಭದಲ್ಲಿ ತಯಾರಾದ ಪಟ್ಟಿಯನ್ವಯ ಸಿಎಂ ಹಾಗೂ ಡಿಸಿಎಂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದರು ಎಂದಿದೆ. ಫೆಬ್ರವರಿ 25ರಂದು ಮೆಲಾನಿಯಾ ಟ್ರಂಪ್ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ.
ಹೀಗಿದ್ದರೂ ಈ ಶಾಲೆ ದೆಹಲಿ ಸರಕಾರದ ಅಧೀನಕ್ಕೊಳಪಡುವುದರಿಂದ ಕಾರ್ಯಕ್ರಮ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದರೂ ಸಿಎಂ ಕೇಜ್ರಿವಾಲ್ ಮತ್ತು ಸಿಸೋಡಿಯಾ, ಮೆಲಾನಿಯಾ ಟ್ರಂಪ್ ಭೇಟಿ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಸರಕಾರದ ಮೂಲಗಳು ಹೇಳಿವೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ದೆಹಲಿ ಡಿಸಿಎಂ ಸಿಸೋಡಿಯಾ 'ಹ್ಯಾಪಿನೆಸ್ ಕ್ಲಾಸ್ ಗೆ ಪ್ರಶಂಸೆ ಸಿಕ್ಕರೆ, ನನಗೂ ಬಹಳ ಖುಷಿ. ಒಂದೂವರೆ ವರ್ಷದ ಹಿಂದೆ ಈ ತರಗತಿಗಳು ಆರಂಭವಾಗಿದ್ದು, ಈ ಮೂಲಕ ಮಕ್ಕಳಲ್ಲಿ ತಮ್ಮ ಹೆತ್ತವರ ಮೇಲೆ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಮಾಜದ ಪರ ಒಳ್ಳೆ ಅಭಿಪ್ರಾಯ ಮೂಡುತ್ತದೆ. ಶಿಕ್ಷಣದ ಮೇಲೆ ಗಮನ ಕೇಂದ್ರೀಕೃತವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನವಾಗುತ್ತದೆ' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ