
ನವದೆಹಲಿ (ಮೇ.11): ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ಹೊರತುಪಡಿಸಿ ಸೇವೆಗಳ ಆಡಳಿತದ ಮೇಲೆ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯನಿರ್ವಾಹಕ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್‌ನ ತೀರ್ಪಿನ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಗುರುವಾರ ಸೇವಾ ಕಾರ್ಯದರ್ಶಿ ಆಶಿಶ್ ಮೋರ್ ಅವರನ್ನು ತಮ್ಮ ಹುದ್ದೆಯಿಂದ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನಿರ್ಧಾರವು ರಾಷ್ಟ್ರ ರಾಜಧಾನಿಯಲ್ಲಿನ ಕೆಲಸವನ್ನು ವೇಗಗೊಳಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದಕ್ಕೂ ಮುನ್ನ ನಮ್ಮ ಸರ್ಕಾರದ ಕೈಗಳನ್ನು ಕಟ್ಟಿಹಾಕಲಾಗಿತ್ತು ಎಂದಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲಿಯೇ ಅಧಿಖಾರಶಾಹಿಯಲ್ಲಿ ಪುನರ್‌ರಚನೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ದೆಹಲಿ ಸಚಿವಾಲಯದಲ್ಲಿ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗಿನ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ದೆಹಲಿಯ ಜನರ ಕೆಲಸಕ್ಕೆ ಅಡ್ಡಿಪಡಿಸುವ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಸಂಕಷ್ಟಗಳನ್ನು ಎದುರಿಸುತ್ತಾರೆ ಎಂದು ಹೇಳಿದರು.
"ನನ್ನ ಕೈಗಳನ್ನು ಕಟ್ಟಿ ಈಜಲು ನೀರಿನಲ್ಲಿ ಎಸೆಯಲಾಗಿತ್ತು. ಆದರೆ ನಾವು ತೇಲುವಲ್ಲಿ ಯಶಸ್ವಿಯಾಗಿದ್ದೇವೆ. ಎಲ್ಲಾ ಅಡೆತಡೆಗಳ ನಡುವೆಯೂ ನಾವು ದೆಹಲಿಯಲ್ಲಿ ಉತ್ತಮ ಕೆಲಸ ಮಾಡಿದೆವು" ಎಂದು ಅವರು ಹೇಳಿದ್ದಾರೆ. ಪುನಾರಚನೆಯನ್ನು ಸೂಚಿಸಿದ ಅವರು, "ಮುಂದಿನ ದಿನಗಳಲ್ಲಿ, ನೀವು ಆಡಳಿತಾತ್ಮಕ ಅಧಿಕಾರಿಗಳಲ್ಲಿ ಕೂಲಂಕುಷವಾಗಿ ನೋಡುತ್ತೀರಿ, ಅವರು ಮಾಡಿದ ಕೆಲಸದ ಆಧಾರದ ಮೇಲೆ ಅನೇಕ ಅಧಿಕಾರಿಗಳು ಮತ್ತು ಕಾರ್ಮಿಕರನ್ನು ವರ್ಗಾವಣೆ ಮಾಡಲಾಗುತ್ತದೆ' ಎಂದರು.
ಎಎಪಿ ಸಂಚಾಲಕರು ತಮ್ಮ ಹೋರಾಟದುದ್ದಕ್ಕೂ ತಮ್ಮನ್ನು ಬೆಂಬಲಿಸಿದ್ದಕ್ಕಾಗಿ ದೆಹಲಿಯ ಜನರಿಗೆ ಧನ್ಯವಾದ ಅರ್ಪಿಸಿದರು. ಅವರು "ಸಹಾನುಭೂತಿಯ ಸರ್ಕಾರವನ್ನು ತಯಾರಿಸಲು ಕೆಲಸ ಮಾಡುತ್ತಾರೆ" ಎಂದು ಅವರು ಹೇಳಿದರು. "ನಾವು ದೇಶಕ್ಕೆ ಶಿಕ್ಷಣದ ಮಾದರಿಯನ್ನು ನೀಡಿದ್ದೇವೆ. ಈ ಕೆಲಸವು ಮೊದಲು ನಡೆಯುತ್ತಿದ್ದ 10 ಪಟ್ಟು ವೇಗದಲ್ಲಿ ನಡೆಯುತ್ತದೆ.
ದೆಹಲಿಯು ಈಗ ಇಡೀ ದೇಶಕ್ಕೆ ಸಮರ್ಥ ಆಡಳಿತದ ಮಾದರಿಯನ್ನು ಪ್ರಸ್ತುತಪಡಿಸುತ್ತದೆ" ಎಂದರು.ನಂತರದ ದಿನಗಳಲ್ಲಿ ಎಲ್‌ಜಿ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಸಿಬಿ ನಮ್ಮೊಂದಿಗಿಲ್ಲ ಆದರೆ ವಿಜಿಲೆನ್ಸ್ ಈಗ ನಮ್ಮೊಂದಿಗೆ ಇರುತ್ತದೆ, ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಎಂದು ಹೇಳಿದರು.
ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಹೋರಾಟ ಗೆದ್ದ ದೆಹಲಿ ಸರ್ಕಾರ!
ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಂಆರ್ ಶಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ದೆಹಲಿಯ ಕೇಂದ್ರಾಡಳಿತ ಪ್ರದೇಶವು "ಸೂಯಿ ಜೆನೆರಿಸ್ (ಅನನ್ಯ) ಗುಣವನ್ನು ಹೊಂದಿದೆ" ಎಂದು ಹೇಳಿದೆ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ 2019 ರ ತೀರ್ಪನ್ನು ಒಪ್ಪಲು ನಿರಾಕರಿಸಿದೆ. ಸೇವೆಗಳ ವಿಷಯದಲ್ಲಿ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಅವರು ತೀರ್ಪು ನೀಡಿದ್ದರು.
ದೆಹಲಿ ಮೆಟ್ರೋದಲ್ಲಿ ಜೋಡಿಯ ಲಿಪ್‌ಲಾಕ್, ಪೋರ್ನ್‌ಹಬ್ ಮಾಡ್ಬಿಡಿ ಎಂದು ಕಿಡಿಕಾರಿದ ನೆಟ್ಟಿಗರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ