
ನವದೆಹಲಿ(ಜ.03): ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಂ ಹಾಗೂ ಹಿಂದೂ ಎರಡೂ ಸಮುದಾಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಅನಗತ್ಯವಾಗಿ ಜಾರಿಗೆ ಬಂದಿರುವ ಈ ಕಾಯ್ದೆಯನ್ನು ಜನತೆ ತಿರಸ್ಕರಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.
ರಾಹುಲ್‌ಗೆ ಇಟಲಿ ಭಾಷೆಯಲ್ಲಿ ಸಿಎಎ ತರ್ಜುಮೆ ಮಾಡುವೆ: ಅಮಿತ್ ಶಾ!
ನಗರದ ಟೌನ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ಪಾಕಿಸ್ತಾನದಿಂದ ಬರುವ ಎರಡು ಕೋಟಿ ಹಿಂದೂಗಳಿಗೆ ಎಲ್ಲಿ ಜಾಗ ನೀಡುವುದು ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಮೊದಲು ಇಲ್ಲಿನ ನಾಗರಿಕರ ಬಗ್ಗೆ ಕಾಳಜಿ ವಹಿಸಬೇಕು. ಬಳಿಕವಷ್ಟೇ ಇತರ ರಾಷ್ಟ್ರಗಳ ಜನರ ಬಗ್ಗೆ ಗಮನ ಹರಿಸಬೇಕು ಎಂದು ಕೇಜ್ರಿವಾಲ್ ಆಗ್ರಹಿಸಿದರು.
ಪೌರತ್ವ ಕಾಯ್ದೆ ಬೆಂಬಲಿಸುತ್ತೀರಾ?: ಈ ನಂಬರ್‌ಗೆ ಮಿಸ್ಡ್ ಕಾಲ್ ಕೊಡಿ ಎಂದ ಬಿಜೆಪಿ!
ಕೇಂದ್ರ ಸರ್ಕಾರ ಮೊದಲು ನಮ್ಮ ಮಕ್ಕಳಿಗೆ ಉದ್ಯೋಗ ಕೊಡಲಿ, ನಂತರವಷ್ಟೇ ಇತರ ದೇಶಗಳ ಜನರ ಯೋಗಕ್ಷೇಮ ವಿಚಾರಿಸಲಿ ಎಂದು ಕೇಜ್ರಿವಾಲ್ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ